ಬೆಂಗಳೂರು:
ರಾಜ್ಯದಲ್ಲಿ ವಿದ್ಯುತ್ ಕೊರತೆಯಾಗದಂತೆ ಕ್ರಮ ಕೈಗೊಳ್ಳಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಅವರು ಇಂದು ವಿದ್ಯುತ್ ಉತ್ಪಾದನೆ, ಬೇಡಿಕೆ ಮತ್ತು ಕಲ್ಲಿದ್ದಲು ಪರಿಸ್ಥಿತಿ ಕುರಿತಂತೆ ಸಭೆ ನಡೆಸಿದ ನಂತರ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.
ಕೇಂದ್ರ ಗಣಿ ಮತ್ತು ಕಲ್ಲಿದ್ದಲು ಸಚಿವರನ್ನು ದೆಹಲಿಯಲ್ಲಿ ಭೇಟಿಯಾದ ನಂತರ 2 ರೇಕುಗಳು ಹೆಚ್ಚುವರಿಯಾಗಿ ಬರುತ್ತಿವೆ.10 ರೇಕುಗಳು ಪ್ರತಿನಿತ್ಯ ಪೂರೈಕೆಯಾಗುತ್ತಿದ್ದು, 98863 ಮೆಟ್ರಿಕ್ ಟನ್ ದಾಸ್ತಾನು ಇದೆ ಎಂದರು.
ಮುಖ್ಯಕಾರ್ಯದರ್ಶಿ ಪಿ.ರವಿಕುಮಾರ್, ಇಂಧನ ಇಲಾಖೆ ಅಪರ ಮುಖ್ಯಕಾರ್ಯದರ್ಶಿ ಕುಮಾರ್ ನಾಯ್ಕ್, ಕೆ.ಪಿ.ಟಿ.ಸಿ.ಎಲ್ ವ್ಯವಸ್ಥಾಪಕ ನಿರ್ದೇಶಕಿ ಎನ್.ಮಂಜುಳಾ, ಮುಖ್ಯಮಂತ್ರಿಗಳ ಪ್ರಧಾನ ಕಾರ್ಯದರ್ಶಿ ಎನ್.ಮಂಜುನಾಥ್ ಪ್ರಸಾದ್ ಮತ್ತಿತರರು ಸಭೆಯಲ್ಲಿ ಉಪಸ್ಥಿತರಿದ್ದರು. (2/2)
— CM of Karnataka (@CMofKarnataka) October 12, 2021
ಸಿಂಗರೇಣಿ ಗಣಿಗಳಿಂದ ನಮಗೆ ಎರಡು ರೇಕುಗಳು ದೊರಕಲಿದ್ದು, ತೆಲಂಗಾಣ ಮುಖ್ಯಮಂತ್ರಿಗಳೊಡನೆ ಹಾಗೂ ಕೇಂದ್ರದ ಕಲ್ಲಿದ್ದಲು ಸಚಿವರೊಂದಿಗೆ ಸಹ ಮಾತನಾಡಿ ಒಟ್ಟು 12 ರೇಕುಗಳ ಪೂರೈಕೆಗೆ ಸಂಬಂಧಿಸಿದಂತೆ ಚರ್ಚಿಸಲಾಗಿದೆ ಎಂದರು.
ಎಸ್ಕಾಂಗಳ ಆರ್ಥಿಕ ಪರಿಸ್ಥಿತಿ ಸುಧಾರಿಸಲು ಹಿಂದೆ ಸರ್ಕಾರ ಕೊಟ್ಟಿರುವ ಸಾಲವನ್ನು ಈಕ್ವಿಟಿಯಾಗಿ ಪರಿವರ್ತಿಸುವ ಪ್ರಸ್ತಾವನೆ ನಮ್ಮ ಮುಂದಿದ್ದು, ಅದರ ಬಗ್ಗೆಯೂ ಕ್ರಮ ಜರುಗಿಸಲಾಗುವುದು. ಎಸ್ಕಾಂ ಆರ್ಥಿಕವಾಗಿ ಸಬಲೀಕರಣಗೊಳ್ಳಲು ಆದಾಯ ಸಂಗ್ರಹಕ್ಕೆ ಆದ್ಯತೆ ನೀಡಿ , ಬಂಡವಾಳ ಹೂಡಿಕೆ ಪ್ರತ್ಯೇಕವಾಗಿ ಮಾಡಬೇಕು. ಹಣ ಪಾವತಿ ಬಾಕಿ ಉಳಿಸಿಕೊಳ್ಳಬಾರದು ಎಂದು ಸೂಚಿಸಿರುವುದಾಗಿ ತಿಳಿಸಿದರು.
ರಾಜ್ಯದಲ್ಲಿ ವಿದ್ಯುತ್ ಕಡಿತವಾಗದಂತೆ ಕ್ರಮ ಕೈಗೊಳ್ಳಲಾಗುವುದು ಎಂದರು.