ಬೆಳಗಾವಿ:
ಕರ್ನಾಟಕ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜೊತೆ ಹೊಂದಾಣಿಕೆ ಆಗುವ ಪ್ರಶ್ನೆಯೇ ಇಲ್ಲ ಎಂದು ಬೆಳಗಾವಿಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಕಡ್ಡಿ ಮುರಿದಂತೆ ಹೇಳಿದ್ದಾರೆ.
ಬೆಳಗಾವಿಯಲ್ಲಿ ಮಾತನಾಡಿದ ಅವರು ಪಕ್ಷದ ಹಂತದಲ್ಲಿ ಚರ್ಚೆ ಆಗಬೇಕು ನಮ್ಮ ಹಂತದಲ್ಲಿ ಏನೂ ಇಲ್ಲ. ನಾನು ಯಾವುದೇ ಹುದ್ದೆಯ ಕ್ಲೈಮ್ ಮತ್ತು ಡಿಮ್ಯಾಂಡ್ ಮಾಡಿಲ್ಲ. ಶಿವಕುಮಾರ್ ನಮ್ಮ ನಿವಾಸಕ್ಕೆ ಹಲವು ಬಾರಿ ಬಂದಿದ್ದಾರೆ. ಪಕ್ಷದ ವಿಚಾರ ಮತ್ತು ಅಭಿವೃದ್ಧಿ ವಿಚಾರದ ಕುರಿತು ಚರ್ಚೆ ಆಗಿದೆ. ಮೈಸೂರಿಗೆ ಹೋಗುವ ಉದ್ದೇಶ ಬೇರೆ, ಡಿಕೆ ಭೇಟಿಯಾದ ಉದ್ದೇಶ ಬೇರೆ. ಅಡ್ಜಸ್ಟ್ಮೆಂಟ್ ಎನ್ನುವ ಪ್ರಶ್ನೆ ಇಲ್ಲ. ಲೋಕಸಭೆ ಚುನಾವಣೆಯಾದ ಬಳಿಕ ಚರ್ಚೆಗೆ ಬರಬಹುದು. ಚುನಾವಣೆ ಬಳಿಕ ಯಾವ ಹೊಸ ವಿಚಾರ ಬರುತ್ತಾವೆಂದು ಕಾದುನೋಡೋಣ ಎಂದರು.