Skip to content
ದಿ ಬೆಂಗಳೂರು ಲೈವ್ | ಕನ್ನಡ ಸುದ್ದಿ, ಬ್ರೇಕಿಂಗ್ ಅಪ್ಡೇಟ್ಸ್

ದಿ ಬೆಂಗಳೂರು ಲೈವ್ | ಕನ್ನಡ ಸುದ್ದಿ, ಬ್ರೇಕಿಂಗ್ ಅಪ್ಡೇಟ್ಸ್

ಇದು ನಿಮ್ಮ ಧ್ವನಿ

Primary Menu
  • ಮುಖಪುಟ
  • ಪ್ರಾಯೋಜಿತ
  • ಬೆಂಗಳೂರು ನಗರ
  • ಅಪರಾಧ
  • ರಾಜಕೀಯ
  • English News
  • Delhi News
  • ಕರ್ನಾಟಕ
  • ಶಿಕ್ಷಣ
  • ಕ್ರೀಡೆ
  • Home
  • ಶಿಕ್ಷಣ
  • ಕ್ಲಸ್ಟರ್ ಕಿಚನ್ ಸ್ಥಾಪಿಸುವ ಪ್ರಶ್ನೆಯೇ ಇಲ್ಲ; ಬಿಸಿಯೂಟ ನೌಕರರು ಆತಂಕಪಡಬೇಕಿಲ್ಲ: ಸಚಿವ ಮಧು ಬಂಗಾರಪ್ಪ
  • ಶಿಕ್ಷಣ

ಕ್ಲಸ್ಟರ್ ಕಿಚನ್ ಸ್ಥಾಪಿಸುವ ಪ್ರಶ್ನೆಯೇ ಇಲ್ಲ; ಬಿಸಿಯೂಟ ನೌಕರರು ಆತಂಕಪಡಬೇಕಿಲ್ಲ: ಸಚಿವ ಮಧು ಬಂಗಾರಪ್ಪ

The Bengaluru Live November 23, 2026 1:21 PM
ಸಚಿವರ ಗೃಹ ಕಚೇರಿಯ ಹೊರಗೆ ಬಿಸಿಯೂಟ ನೌಕರರ ಯೂನಿಯನ್ ನಿಯೋಗದ ಸದಸ್ಯರೊಂದಿಗೆ ಮಾತನಾಡುತ್ತಿರುವ ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ

ಬೆಂಗಳೂರಿನಲ್ಲಿ ಬಿಸಿಯೂಟ ನೌಕರರ ಯೂನಿಯನ್ ನಿಯೋಗದೊಂದಿಗೆ ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ. ಚಿತ್ರ: ಸಚಿವ ಮಧು ಬಂಗಾರಪ್ಪ ಅವರ ಕಚೇರಿ

📗 ಈ ಸುದ್ದಿಯನ್ನು ಇಂಗ್ಲಿಷ್‌ನಲ್ಲಿ ಓದಿ

ಬೆಂಗಳೂರು: ರಾಜ್ಯದ 1ರಿಂದ 10ನೇ ತರಗತಿವರೆಗಿನ ಶಾಲಾ ಮಕ್ಕಳಿಗೆ ಮಧ್ಯಾಹ್ನದ ಬಿಸಿಯೂಟ ಒದಗಿಸುವ ಯೋಜನೆಯಡಿ ಯಾವುದೇ ಕಾರಣಕ್ಕೂ ಕ್ಲಸ್ಟರ್ ಕಿಚನ್ ಸೆಂಟರ್‌ಗಳನ್ನು (ಕೇಂದ್ರೀಕೃತ ಅಡುಗೆ ಕೇಂದ್ರ) ಸ್ಥಾಪಿಸುವುದಿಲ್ಲ. ಈ ಬಗ್ಗೆ ಬಿಸಿಯೂಟ ನೌಕರರು ಯಾವುದೇ ಆತಂಕಪಡುವ ಅಗತ್ಯವಿಲ್ಲ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಅವರು ಭರವಸೆ ನೀಡಿದರು.

ರಾಜ್ಯ ಅಕ್ಷರದಾಸೋಹ ಬಿಸಿಯೂಟ ತಯಾರಕರ ಯೂನಿಯನ್‌ನ ಗೌರವಾಧ್ಯಕ್ಷ ಎಸ್. ಬಾಲನ್ ಅವರ ನೇತೃತ್ವದ ನಿಯೋಗ ಇಂದು ಸಚಿವರ ಗೃಹ ಕಚೇರಿಯಲ್ಲಿ ಭೇಟಿಯಾಗಿ ವಿವಿಧ ಬೇಡಿಕೆಗಳನ್ನು ಸಲ್ಲಿಸಿದ ಸಂದರ್ಭದಲ್ಲಿ ಸಚಿವರು ಈ ಭರವಸೆ ನೀಡಿದರು.

ಕೇರಳದಲ್ಲಿ ಬಿಸಿಯೂಟ ನೌಕರರಿಗೆ ₹12 ಸಾವಿರ ವೇತನ ನೀಡಲಾಗುತ್ತಿದೆ. ಅಲ್ಲಿಯೂ ಕಾಂಗ್ರೆಸ್ ಸರ್ಕಾರವೇ ಆಡಳಿತದಲ್ಲಿದ್ದು, ಕರ್ನಾಟಕದಲ್ಲಿಯೂ ಕಾಂಗ್ರೆಸ್ ಸರ್ಕಾರವಿದೆ. ಆದ್ದರಿಂದ ಬಿಸಿಯೂಟ ನೌಕರರ ಬೇಡಿಕೆಗಳನ್ನು ಮಾನವೀಯ ದೃಷ್ಟಿಯಿಂದ ಪರಿಗಣಿಸಿ ವೇತನ ಹೆಚ್ಚಳ ಮಾಡಬೇಕು ಎಂದು ನಿಯೋಗ ಸಚಿವರಲ್ಲಿ ಮನವಿ ಮಾಡಿತು.

ನಿಯೋಗದ ಮನವಿಗೆ ಸ್ಪಂದಿಸಿದ ಸಚಿವರು, “ವೇತನ ಹೆಚ್ಚಳದ ನಿರ್ಧಾರ ಕೇವಲ ನನ್ನ ಕೈಯಲ್ಲಿಲ್ಲ. ಈ ಬಗ್ಗೆ ಮುಖ್ಯಮಂತ್ರಿಗಳೊಂದಿಗೆ ಖಂಡಿತವಾಗಿಯೂ ಚರ್ಚಿಸುತ್ತೇನೆ. ನಮ್ಮ ಸರ್ಕಾರದಿಂದ ಎಷ್ಟು ಸಾಧ್ಯವೋ ಅಷ್ಟು ವೇತನ ಹೆಚ್ಚಳಕ್ಕೆ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ. ಈ ಹಿಂದೆ ಬಿಸಿಯೂಟ ನೌಕರರ ಇಡುಗಂಟನ್ನು ₹40 ಸಾವಿರಕ್ಕೆ ಹೆಚ್ಚಿಸಿದ ಹೆಗ್ಗಳಿಕೆ ನಮ್ಮ ಸರ್ಕಾರದ್ದು. ನೀವು ಅತ್ಯಂತ ಶ್ರಮಜೀವಿಗಳು. ನಿಮ್ಮ ಸಮಸ್ಯೆಗಳ ಬಗ್ಗೆ ಸರ್ಕಾರಕ್ಕೆ ಕಾಳಜಿಯಿದೆ” ಎಂದರು.

ಬಿಸಿಯೂಟ ಯೋಜನೆ ಕೇವಲ ರಾಜ್ಯ ಸರ್ಕಾರದ ಯೋಜನೆಯಲ್ಲ. ಕೇಂದ್ರ ಸರ್ಕಾರವೂ ಇದಕ್ಕೆ ಅನುದಾನ ನೀಡುತ್ತದೆ. ಹೀಗಾಗಿ ನಿಮ್ಮ ಬೇಡಿಕೆಗಳ ಈಡೇರಿಕೆಗೆ ಕೇಂದ್ರ ಸರ್ಕಾರದ ಮೇಲೆಯೂ ಒತ್ತಡ ಹೇರಬೇಕು ಎಂದು ಸಲಹೆ ನೀಡಿದರು.

ಕೆಲವು ಕಡೆ ಮಕ್ಕಳಿಗೆ ಕಳಪೆ ಗುಣಮಟ್ಟದ ಆಹಾರ ಧಾನ್ಯಗಳನ್ನು ಪೂರೈಸಲಾಗುತ್ತಿದೆ ಎಂದು ನಿಯೋಗ ಸಚಿವರ ಗಮನಕ್ಕೆ ತಂದಿತು. ಇದಕ್ಕೆ ಪ್ರತಿಕ್ರಿಯಿಸಿದ ಸಚಿವರು, “ಮಕ್ಕಳಿಗೆ ಕಳಪೆ ಗುಣಮಟ್ಟದ ಆಹಾರ ಧಾನ್ಯ ಪೂರೈಸುವುದನ್ನು ಯಾವುದೇ ಕಾರಣಕ್ಕೂ ಸಹಿಸುವುದಿಲ್ಲ. ಎಲ್ಲಿ ಇಂತಹ ಘಟನೆಗಳು ನಡೆಯುತ್ತಿವೆ ಎಂಬುದರ ಬಗ್ಗೆ ನಿಖರ ಮಾಹಿತಿ ನೀಡಿ. ತಪ್ಪಿತಸ್ಥರ ವಿರುದ್ಧ ಯಾವುದೇ ಮುಲಾಜಿಲ್ಲದೆ ಕ್ರಮ ಕೈಗೊಳ್ಳಲಾಗುವುದು” ಎಂದು ಎಚ್ಚರಿಕೆ ನೀಡಿದರು.

ಶಾಲೆಯ ಮುಖ್ಯಶಿಕ್ಷಕರು ಮತ್ತು ಮುಖ್ಯ ಅಡುಗೆ ಸಿಬ್ಬಂದಿಯ ಜಂಟಿ ಬ್ಯಾಂಕ್ ಖಾತೆ, ಕನಿಷ್ಠ ₹1 ಲಕ್ಷ ಇಡುಗಂಟು, ಮಾಸಿಕ ₹5 ಸಾವಿರ ಪಿಂಚಣಿ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ನಿಯೋಗ ಸಚಿವರಿಗೆ ಮನವಿ ಸಲ್ಲಿಸಿತು.

ಸಚಿವರು ಮನವಿ ಸ್ವೀಕರಿಸಿದ ಬಳಿಕ, ಪ್ರತಿಭಟನೆ ನಿಮ್ಮ ಹಕ್ಕು. ಆದರೆ ದಯವಿಟ್ಟು ಬಿಸಿಯೂಟ ನೌಕರರು ಈಗ ಪ್ರತಿಭಟನೆ ಕೈಬಿಡಬೇಕು. ನಿಮ್ಮ ಜೊತೆ ನಾವು ಇದ್ದೇವೆ. ನಮ್ಮ ಸರ್ಕಾರದ ವ್ಯಾಪಿಯಲ್ಲಿ ನಾವು ಏನು ಮಾಡಲು ಸಾಧ್ಯ ಆಗುತ್ತದೋ ಅದನ್ನು ಮಾಡುತ್ತೇವೆ ಎಂದು ಸಚಿವರು ವಿಶ್ವಾಸ ವ್ಯಕ್ತಪಡಿಸಿದರು.

ಈ ನಿಯೋಗದಲ್ಲಿ ರಾಜ್ಯ ಸಮಿತಿ ಅಧ್ಯಕ್ಷ ಹೊನ್ನಪ್ಪ ಮರೆಮ್ಮನವರ, ಪ್ರಧಾನ ಕಾರ್ಯದರ್ಶಿ ಕಲ್ಪನಾ ವಿ.ಜಿ., ಖಜಾಂಚಿ ಪುಷ್ಪಲತಾ ಸೇರಿದಂತೆ ಯೂನಿಯನ್‌ನ ಇತರ ಪದಾಧಿಕಾರಿಗಳು ಉಪಸ್ಥಿತರಿದ್ದರು.

About the Author

The Bengaluru Live

Administrator

Visit Website View All Posts

Post navigation

Previous: ಡಿಸೆಂಬರ್ 4ರಿಂದ 13ರವರೆಗೆ ಬೆಂಗಳೂರು ಜಾತ್ರೆ: ದಕ್ಷಿಣ ಪಾಲಿಕೆ ವ್ಯಾಪ್ತಿಯ 15–20 ಉದ್ಯಾನ, ಕೆರೆ ಆವರಣಗಳಲ್ಲಿ ವಿಕೇಂದ್ರೀಕರಣ
Next: ನವೆಂಬರ್ 25ರಂದು ಪದ್ಮನಾಭನಗರ, ಬನಶಂಕರಿ ಸುತ್ತಮುತ್ತ ವಿದ್ಯುತ್ ವ್ಯತ್ಯಯ

Related Stories

ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಹೆಸರಿನ ಫಲಕ ಮತ್ತು ಲಾಂಛನದ ಮುಂದೆ ತಮ್ಮ ಮೇಜಿನ ಬಳಿ ಮಾತನಾಡುತ್ತಿರುವ ಕೆಇಎ ಕಾರ್ಯನಿರ್ವಾಹಕ ನಿರ್ದೇಶಕ ಎಚ್. ಪ್ರಸನ್ನ
  • ಶಿಕ್ಷಣ

ಪರೀಕ್ಷೆ ಮುಗಿದ 4 ಗಂಟೆಯಲ್ಲೇ ಕೀ ಉತ್ತರ ಪ್ರಕಟಿಸಿದ ಕೆಇಎ

The Bengaluru Live November 22, 2026 9:30 PM
ಕೆಇಎ ಹೆಸರು ಮತ್ತು ಲಾಂಛನದ ಮುಂದೆ ಕುಳಿತಿರುವ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಹೆಚ್. ಪ್ರಸನ್ನ ಅವರ ಕಡತ ಚಿತ್ರ
  • ಶಿಕ್ಷಣ

ಕೆಇಎ ಪಿಯು ಕಾಲೇಜು ಪ್ರಾಂಶುಪಾಲರ ಪರೀಕ್ಷೆಗೆ ಶೇ 82ರಷ್ಟು ಹಾಜರಾತಿ, 2,349 ಅಭ್ಯರ್ಥಿಗಳು ಭಾಗಿ

The Bengaluru Live November 22, 2026 5:30 PM
ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಹೆಸರಿನ ಫಲಕ ಮತ್ತು ಲಾಂಛನದ ಮುಂದೆ ತಮ್ಮ ಮೇಜಿನ ಬಳಿ ಮಾತನಾಡುತ್ತಿರುವ ಕೆಇಎ ಕಾರ್ಯನಿರ್ವಾಹಕ ನಿರ್ದೇಶಕ ಎಚ್. ಪ್ರಸನ್ನ
  • ಶಿಕ್ಷಣ

ಪಿಜಿ ಆಯುಷ್: ಮೊದಲ ಸುತ್ತಿನ ಸೀಟು ಹಂಚಿಕೆಯ ಅಣಕು ಫಲಿತಾಂಶ ಪ್ರಕಟ, 887 ಮಂದಿಗೆ ಸೀಟು, ನ.24ರವರೆಗೆ ಆಯ್ಕೆ ಬದಲಾವಣೆಗೆ ಅವಕಾಶ

The Bengaluru Live November 22, 2026 8:06 AM

Latest Post

ನವೆಂಬರ್ 25ರಂದು ಪದ್ಮನಾಭನಗರ, ಬನಶಂಕರಿ ಸುತ್ತಮುತ್ತ ವಿದ್ಯುತ್ ವ್ಯತ್ಯಯ ಬೆಂಗಳೂರಿನ ಬೆಸ್ಕಾಂ ಕಾರ್ಪೊರೇಟ್ ಕಚೇರಿಯ ಫೈಲ್ ಚಿತ್ರ
  • ಬೆಂಗಳೂರು ನಗರ

ನವೆಂಬರ್ 25ರಂದು ಪದ್ಮನಾಭನಗರ, ಬನಶಂಕರಿ ಸುತ್ತಮುತ್ತ ವಿದ್ಯುತ್ ವ್ಯತ್ಯಯ

November 23, 2026 1:26 PM
ಕ್ಲಸ್ಟರ್ ಕಿಚನ್ ಸ್ಥಾಪಿಸುವ ಪ್ರಶ್ನೆಯೇ ಇಲ್ಲ; ಬಿಸಿಯೂಟ ನೌಕರರು ಆತಂಕಪಡಬೇಕಿಲ್ಲ: ಸಚಿವ ಮಧು ಬಂಗಾರಪ್ಪ ಸಚಿವರ ಗೃಹ ಕಚೇರಿಯ ಹೊರಗೆ ಬಿಸಿಯೂಟ ನೌಕರರ ಯೂನಿಯನ್ ನಿಯೋಗದ ಸದಸ್ಯರೊಂದಿಗೆ ಮಾತನಾಡುತ್ತಿರುವ ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ
  • ಶಿಕ್ಷಣ

ಕ್ಲಸ್ಟರ್ ಕಿಚನ್ ಸ್ಥಾಪಿಸುವ ಪ್ರಶ್ನೆಯೇ ಇಲ್ಲ; ಬಿಸಿಯೂಟ ನೌಕರರು ಆತಂಕಪಡಬೇಕಿಲ್ಲ: ಸಚಿವ ಮಧು ಬಂಗಾರಪ್ಪ

November 23, 2026 1:21 PM
ಡಿಸೆಂಬರ್ 4ರಿಂದ 13ರವರೆಗೆ ಬೆಂಗಳೂರು ಜಾತ್ರೆ: ದಕ್ಷಿಣ ಪಾಲಿಕೆ ವ್ಯಾಪ್ತಿಯ 15–20 ಉದ್ಯಾನ, ಕೆರೆ ಆವರಣಗಳಲ್ಲಿ ವಿಕೇಂದ್ರೀಕರಣ ನೇರಳೆ ಬಣ್ಣದ ಅಂಗಿ ಧರಿಸಿ ಕೈಕಟ್ಟಿ ಮೇಜಿನ ಬಳಿ ಕುಳಿತು ಮಾತನಾಡುತ್ತಿರುವ ಬೆಂಗಳೂರು ದಕ್ಷಿಣ ನಗರ ಪಾಲಿಕೆ ಆಯುಕ್ತ ಕೆ.ಎನ್. ರಮೇಶ್
  • ಬೆಂಗಳೂರು ನಗರ

ಡಿಸೆಂಬರ್ 4ರಿಂದ 13ರವರೆಗೆ ಬೆಂಗಳೂರು ಜಾತ್ರೆ: ದಕ್ಷಿಣ ಪಾಲಿಕೆ ವ್ಯಾಪ್ತಿಯ 15–20 ಉದ್ಯಾನ, ಕೆರೆ ಆವರಣಗಳಲ್ಲಿ ವಿಕೇಂದ್ರೀಕರಣ

November 23, 2026 12:10 PM
ಟೋಕಿಯೊದಿಂದ ನಗೋಯಾದ ಟೊಯೋಟಾ ಘಟಕಕ್ಕೆ ಬುಲೆಟ್ ಟ್ರೈನ್‌ನಲ್ಲಿ ಪ್ರಯಾಣಿಸಿದ ಸಿಎಂ ಶಿವಕುಮಾರ್, ಸಚಿವ ಎಂ.ಬಿ. ಪಾಟೀಲ್ ಭಾರತ ಮತ್ತು ಜಪಾನ್ ಧ್ವಜಗಳ ಮುಂದೆ ಸಾಲಾಗಿ ನಿಂತಿರುವ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಸಚಿವ ಎಂ.ಬಿ. ಪಾಟೀಲ್ ಮತ್ತು ಅಧಿಕಾರಿಗಳು
  • ಕರ್ನಾಟಕ

ಟೋಕಿಯೊದಿಂದ ನಗೋಯಾದ ಟೊಯೋಟಾ ಘಟಕಕ್ಕೆ ಬುಲೆಟ್ ಟ್ರೈನ್‌ನಲ್ಲಿ ಪ್ರಯಾಣಿಸಿದ ಸಿಎಂ ಶಿವಕುಮಾರ್, ಸಚಿವ ಎಂ.ಬಿ. ಪಾಟೀಲ್

November 23, 2026 11:25 AM
ಗುರುಗಾಂವ್ ಕನ್ನಡ ಸಂಘ ಆಯೋಜಿಸಿದ್ದ ಕನ್ನಡ ರಾಜ್ಯೋತ್ಸವದಲ್ಲಿ ರಾಜ್ಯಪಾಲೆ ಸುಧಾ ಯಾದವ್ ಭಾಗಿ ಗುರುಗಾಂವ್ ಕನ್ನಡ ಸಂಘದ ಕಾರ್ಯಕ್ರಮದ ವೇದಿಕೆಯಲ್ಲಿ ಕನ್ನಡ ಬಾವುಟದ ಬಣ್ಣದ ಶಾಲು ಧರಿಸಿದ ಪದಾಧಿಕಾರಿಗಳಿಂದ ಸ್ಮರಣಿಕೆ ಸ್ವೀಕರಿಸುತ್ತಿರುವ ರಾಜ್ಯಪಾಲರಾದ ಡಾ. ಸುಧಾ ಯಾದವ್
  • ಕರ್ನಾಟಕ

ಗುರುಗಾಂವ್ ಕನ್ನಡ ಸಂಘ ಆಯೋಜಿಸಿದ್ದ ಕನ್ನಡ ರಾಜ್ಯೋತ್ಸವದಲ್ಲಿ ರಾಜ್ಯಪಾಲೆ ಸುಧಾ ಯಾದವ್ ಭಾಗಿ

November 23, 2026 10:09 AM
ಪರೀಕ್ಷೆ ಮುಗಿದ 4 ಗಂಟೆಯಲ್ಲೇ ಕೀ ಉತ್ತರ ಪ್ರಕಟಿಸಿದ ಕೆಇಎ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಹೆಸರಿನ ಫಲಕ ಮತ್ತು ಲಾಂಛನದ ಮುಂದೆ ತಮ್ಮ ಮೇಜಿನ ಬಳಿ ಮಾತನಾಡುತ್ತಿರುವ ಕೆಇಎ ಕಾರ್ಯನಿರ್ವಾಹಕ ನಿರ್ದೇಶಕ ಎಚ್. ಪ್ರಸನ್ನ
  • ಶಿಕ್ಷಣ

ಪರೀಕ್ಷೆ ಮುಗಿದ 4 ಗಂಟೆಯಲ್ಲೇ ಕೀ ಉತ್ತರ ಪ್ರಕಟಿಸಿದ ಕೆಇಎ

November 22, 2026 9:30 PM

ನೀವು ತಪ್ಪಿಸಿಕೊಂಡಿರಬಹುದು

ಬೆಂಗಳೂರಿನ ಬೆಸ್ಕಾಂ ಕಾರ್ಪೊರೇಟ್ ಕಚೇರಿಯ ಫೈಲ್ ಚಿತ್ರ
  • ಬೆಂಗಳೂರು ನಗರ

ನವೆಂಬರ್ 25ರಂದು ಪದ್ಮನಾಭನಗರ, ಬನಶಂಕರಿ ಸುತ್ತಮುತ್ತ ವಿದ್ಯುತ್ ವ್ಯತ್ಯಯ

The Bengaluru Live November 23, 2026 1:26 PM
ಸಚಿವರ ಗೃಹ ಕಚೇರಿಯ ಹೊರಗೆ ಬಿಸಿಯೂಟ ನೌಕರರ ಯೂನಿಯನ್ ನಿಯೋಗದ ಸದಸ್ಯರೊಂದಿಗೆ ಮಾತನಾಡುತ್ತಿರುವ ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ
  • ಶಿಕ್ಷಣ

ಕ್ಲಸ್ಟರ್ ಕಿಚನ್ ಸ್ಥಾಪಿಸುವ ಪ್ರಶ್ನೆಯೇ ಇಲ್ಲ; ಬಿಸಿಯೂಟ ನೌಕರರು ಆತಂಕಪಡಬೇಕಿಲ್ಲ: ಸಚಿವ ಮಧು ಬಂಗಾರಪ್ಪ

The Bengaluru Live November 23, 2026 1:21 PM
ನೇರಳೆ ಬಣ್ಣದ ಅಂಗಿ ಧರಿಸಿ ಕೈಕಟ್ಟಿ ಮೇಜಿನ ಬಳಿ ಕುಳಿತು ಮಾತನಾಡುತ್ತಿರುವ ಬೆಂಗಳೂರು ದಕ್ಷಿಣ ನಗರ ಪಾಲಿಕೆ ಆಯುಕ್ತ ಕೆ.ಎನ್. ರಮೇಶ್
  • ಬೆಂಗಳೂರು ನಗರ

ಡಿಸೆಂಬರ್ 4ರಿಂದ 13ರವರೆಗೆ ಬೆಂಗಳೂರು ಜಾತ್ರೆ: ದಕ್ಷಿಣ ಪಾಲಿಕೆ ವ್ಯಾಪ್ತಿಯ 15–20 ಉದ್ಯಾನ, ಕೆರೆ ಆವರಣಗಳಲ್ಲಿ ವಿಕೇಂದ್ರೀಕರಣ

The Bengaluru Live November 23, 2026 12:10 PM
ಭಾರತ ಮತ್ತು ಜಪಾನ್ ಧ್ವಜಗಳ ಮುಂದೆ ಸಾಲಾಗಿ ನಿಂತಿರುವ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಸಚಿವ ಎಂ.ಬಿ. ಪಾಟೀಲ್ ಮತ್ತು ಅಧಿಕಾರಿಗಳು
  • ಕರ್ನಾಟಕ

ಟೋಕಿಯೊದಿಂದ ನಗೋಯಾದ ಟೊಯೋಟಾ ಘಟಕಕ್ಕೆ ಬುಲೆಟ್ ಟ್ರೈನ್‌ನಲ್ಲಿ ಪ್ರಯಾಣಿಸಿದ ಸಿಎಂ ಶಿವಕುಮಾರ್, ಸಚಿವ ಎಂ.ಬಿ. ಪಾಟೀಲ್

The Bengaluru Live November 23, 2026 11:25 AM

ನಮ್ಮ ಕುರಿತು

ಬೆಂಗಳೂರು ಲೈವ್ ಬೆಂಗಳೂರು ಮತ್ತು ಕರ್ನಾಟಕವನ್ನು ಕೇಂದ್ರೀಕರಿಸಿ ಇಂಗ್ಲಿಷ್ ಮತ್ತು ಕನ್ನಡದಲ್ಲಿ ಸುದ್ದಿ ಹಾಗೂ ಮಾಹಿತಿಯನ್ನು ಪ್ರಕಟಿಸುವ ಸ್ವತಂತ್ರ ಡಿಜಿಟಲ್ ಸುದ್ದಿ ಪ್ರಕಟಣೆಯಾಗಿದೆ. ಇದು ಫೆಬ್ರವರಿ 2020ರಿಂದ ಕಾರ್ಯನಿರ್ವಹಿಸುತ್ತಿದೆ.

ಉಪಯುಕ್ತ ಕೊಂಡಿಗಳು

  • ಬೆಂಗಳೂರು ಲೈವ್ ಕುರಿತು
  • ಸಂಪರ್ಕಿಸಿ
  • ಸಂಪಾದಕೀಯ ಮಾನದಂಡಗಳು ಮತ್ತು ತಿದ್ದುಪಡಿ ನೀತಿ
  • ಪ್ರಕಾಶಕರು, ಸಂಪಾದಕೀಯ ಹೊಣೆಗಾರಿಕೆ ಮತ್ತು ದೂರು ಪರಿಹಾರ
  • ಮಾಲೀಕತ್ವ ಮತ್ತು ಹಣಕಾಸು ಪಾರದರ್ಶಕತೆ
  • ನಮ್ಮೊಂದಿಗೆ ಜಾಹೀರಾತು ನೀಡಿ
  • ಗೌಪ್ಯತಾ ನೀತಿ
  • ಸೇವಾ ನಿಯಮಗಳು
  • ಪತ್ರಿಕಾ ಪ್ರಕಟಣೆ ಸಲ್ಲಿಸಿ

ಇತ್ತೀಚಿನ ಸುದ್ದಿಗಳು

  • ನವೆಂಬರ್ 25ರಂದು ಪದ್ಮನಾಭನಗರ, ಬನಶಂಕರಿ ಸುತ್ತಮುತ್ತ ವಿದ್ಯುತ್ ವ್ಯತ್ಯಯ
  • ಕ್ಲಸ್ಟರ್ ಕಿಚನ್ ಸ್ಥಾಪಿಸುವ ಪ್ರಶ್ನೆಯೇ ಇಲ್ಲ; ಬಿಸಿಯೂಟ ನೌಕರರು ಆತಂಕಪಡಬೇಕಿಲ್ಲ: ಸಚಿವ ಮಧು ಬಂಗಾರಪ್ಪ
  • ಡಿಸೆಂಬರ್ 4ರಿಂದ 13ರವರೆಗೆ ಬೆಂಗಳೂರು ಜಾತ್ರೆ: ದಕ್ಷಿಣ ಪಾಲಿಕೆ ವ್ಯಾಪ್ತಿಯ 15–20 ಉದ್ಯಾನ, ಕೆರೆ ಆವರಣಗಳಲ್ಲಿ ವಿಕೇಂದ್ರೀಕರಣ
  • ಟೋಕಿಯೊದಿಂದ ನಗೋಯಾದ ಟೊಯೋಟಾ ಘಟಕಕ್ಕೆ ಬುಲೆಟ್ ಟ್ರೈನ್‌ನಲ್ಲಿ ಪ್ರಯಾಣಿಸಿದ ಸಿಎಂ ಶಿವಕುಮಾರ್, ಸಚಿವ ಎಂ.ಬಿ. ಪಾಟೀಲ್
©Copyright 2025 The Bengaluru Live All rights reserved. | MoreNews by AF themes.