Home ಆರೋಗ್ಯ ರೆಮ್ಡೆಸಿವಿರ್ ಲಸಿಕೆ ಕೊರತೆಯಿಲ್ಲ: ಸದಾನಂದ ಗೌಡ

ರೆಮ್ಡೆಸಿವಿರ್ ಲಸಿಕೆ ಕೊರತೆಯಿಲ್ಲ: ಸದಾನಂದ ಗೌಡ

32
0

ನವದೆಹಲಿ:

ಕೊರೊನೊ ಚಿಕಿತ್ಸೆಯಲ್ಲಿ ಬಳಸುವ ರೆಮ್ಡೆಸಿವಿರ್ ಲಸಿಕೆಯಲ್ಲಿ ಯಾವುದೇ ಕೊರತೆಯಾಗದಂತೆ ನೋಡಿಕೊಳ್ಳಲಾಗುವುದು ಎಂದು ಕೇಂದ್ರ ರಾಸಾಯನಿಕ ಹಾಗೂ ರಸಗೊಬ್ಬರ ಸಚಿವ ಡಿ ವಿ ಸದಾನಂದ ಗೌಡ ಅವರು ಹೇಳಿದ್ದಾರೆ.

ರೆಮ್ಡೆಸಿವಿರ್ ಲಸಿಕೆ ರಫ್ತನ್ನು ತಕ್ಷಣವೇ ನಿಷೇಧಿಸಲಾಗಿದೆ. ಏಳು ಕಂಪನಿಗಳು ಇದರ ಲೈಸನ್ಸ್ ಹೊಂದಿದ್ದು ಈ ತಿಂಗಳು 28.63 ಲಕ್ಷ ವೈಯಲ್ಸ್ ರೆಮ್ಡೆಸಿವಿರ್ ಉತ್ಪಾದನೆಯಾಗಲಿದೆ. ಸದ್ಯ 2.86 ಲಕ್ಷ ವೈಯಲ್ಸ್ ರೆಮ್ಡೆಸಿವಿರ್ ಸಂಗ್ರಹವಿದೆ. ದೇಶದಲ್ಲಿ ರೆಮ್ಡೆಸಿವಿರ್ ಉತ್ಪಾದನಾ ಸಾಮರ್ಥ್ಯ ತಿಂಗಳೊಂದಕ್ಕೆ 38.8 ಲಕ್ಷ ವೈಯಲ್ಸ್. ಈ ಸಾಮರ್ಥ್ಯವನ್ನು ಇನ್ನೂ ಹತ್ತು ಲಕ್ಷ ಹೆಚ್ಚಿಸಲಾಗುತ್ತಿದ್ದು ಇದಕ್ಕೆ ಸಂಬಂಧಿಸಿದ ಆರು ಅರ್ಜಿಗಳಿಗೆ ಡಿಸಿಜಿಐ ಈಗಾಗಲೇ ಸಮ್ಮಿತಿ ನೀಡಿದೆ ಎಂದು ಸದಾನಂದ ಗೌಡ ವಿವರಿಸಿದರು.

LEAVE A REPLY

Please enter your comment!
Please enter your name here