ಬೆಂಗಳೂರು:
ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದ ನಂತರ ಆರ್ ಎಸ್ ಎಸ್ ನಿಷೇಧಿಸುವ ಪ್ರಸ್ತಾವನೆ ಸಂಬಂಧ ಕ್ಯಾಬಿನೆಟ್ ಸಚಿವ ಪ್ರಿಯಾಂಕ್ ಖರ್ಗೆ ನೀಡಿರುವ ಹೇಳಿಕೆ ರಾಜ್ಯದಲ್ಲಿ ಈಗಾಗಲೇ ವಿವಾದ ಹುಟ್ಟುಹಾಕಿದೆ. ಆದರೆ, ಆರ್ ಎಸ್ ಎಸ್ ನಿಷೇಧಿಸುವ ಬಗ್ಗೆ ಪಕ್ಷದಿಂದ ಯಾವುದೇ ಹೇಳಿಕೆ ನೀಡಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಸಿದ್ದರಾಮಯ್ಯ, ಸಮಾಜದಲ್ಲಿ ಶಾಂತಿ, ಸೌಹಾರ್ದತೆಗೆ ಧಕ್ಕೆ ತರುವ ಯಾವುದೇ ಸಂಘಟನೆಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು, ಆರ್ ಎಸ್ ಎಸ್ ನಿಷೇಧಿಸುವ ಬಗ್ಗೆ ಪಕ್ಷದಿಂದ ಯಾವುದೇ ಹೇಳಿಕೆ ನೀಡಿಲ್ಲ ಎಂದು ಸ್ಪಷ್ಟಪಡಿಸಿದರು.
ಕಾಂಗ್ರೆಸ್‌ಗೆ ಧೈರ್ಯವಿದ್ದರೆ ಆರ್‌ಎಸ್‌ಎಸ್ ನಿಷೇಧಿಸಲಿ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಆರ್ .ಅಶೋಕ್ ಸವಾಲು ಹಾಕಿದ್ದರು.