Skip to content
ದಿ ಬೆಂಗಳೂರು ಲೈವ್ | ಕನ್ನಡ ಸುದ್ದಿ, ಬ್ರೇಕಿಂಗ್ ಅಪ್ಡೇಟ್ಸ್

ದಿ ಬೆಂಗಳೂರು ಲೈವ್ | ಕನ್ನಡ ಸುದ್ದಿ, ಬ್ರೇಕಿಂಗ್ ಅಪ್ಡೇಟ್ಸ್

ಇದು ನಿಮ್ಮ ಧ್ವನಿ

Primary Menu
  • ಮುಖಪುಟ
  • ಪ್ರಾಯೋಜಿತ
  • ಬೆಂಗಳೂರು ನಗರ
  • ಅಪರಾಧ
  • ರಾಜಕೀಯ
  • English News
  • Delhi News
  • ಕರ್ನಾಟಕ
  • ಶಿಕ್ಷಣ
  • ಕ್ರೀಡೆ
  • Home
  • ಕರ್ನಾಟಕ
  • ನಗರ
  • ಬೆಂಗಳೂರು ನಗರ
  • ಕ್ರೀಡಾಪಟುಗಳ ನೇರನೇಮಕಾತಿಗೆ ಮುಂದಿನ ಸಚಿವಸಂಪುಟದಲ್ಲಿ ಅನುಮೋದನೆ
  • ಬೆಂಗಳೂರು ನಗರ

ಕ್ರೀಡಾಪಟುಗಳ ನೇರನೇಮಕಾತಿಗೆ ಮುಂದಿನ ಸಚಿವಸಂಪುಟದಲ್ಲಿ ಅನುಮೋದನೆ

The Bengaluru Live December 6, 2022 2:30 PM 1 minute read
Ekalavya Sports awards

ಕ್ರೀಡಾಪಟುಗಳ ನೇರನೇಮಕಾತಿಗೆ ಮುಂದಿನ ಸಚಿವಸಂಪುಟದಲ್ಲಿ ಅನುಮೋದನೆ

📗 ಈ ಸುದ್ದಿಯನ್ನು ಇಂಗ್ಲಿಷ್‌ನಲ್ಲಿ ಓದಿ

ಒಲಂಪಿಕ್ಸ್ ಹಾಗೂ ಪ್ಯಾರಾಒಲಂಪಿಕ್ಸ್ ಪದಕವಿಜೇತರಿಗೆ ಗ್ರೂಪ್ ಎ ಉದ್ಯೋಗ –ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಬೆಂಗಳೂರು:

ಕ್ರೀಡಾಇಲಾಖೆಯ ಅಪರಮುಖ್ಯಕಾರ್ಯದರ್ಶಿಗಳ ನೇತೃತ್ವದ ಆಯ್ಕೆ ಸಮಿತಿಯ ಮೂಲಕ ಕ್ರೀಡಾಪಟುಗಳಿಗೆ ನೇರ ನೇಮಕಾತಿ ಮೂಲಕ ಸರ್ಕಾರಿ ಉದ್ಯೋಗ ನೀಡುವ ಯೋಜನೆಗೆ ಮುಂದಿನ ಸಚಿವಸಂಪುಟದಲ್ಲಿ ಅನುಮೋದನೆ ನೀಡಿ, ಪದವೀಧರರಾದ ಒಲಂಪಿಕ್ಸ್ ಹಾಗೂ ಪ್ಯಾರಾಒಲಂಪಿಕ್ಸ್ ಪದಕವಿಜೇತರಿಗೆ ಗ್ರೂಪ್ ಎ ಉದ್ಯೋಗ ನೀಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಅವರು ಇಂದು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರೊಂದಿಗೆ ಏಕಲವ್ಯ ಕ್ರೀಡಾ ಪ್ರಶಸ್ತಿ ಹಾಗೂ ಇತರ ಕ್ರೀಡಾ ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಪ್ರಶಸ್ತಿ ಪುರಸ್ಕೃತರನ್ನು ಅಭಿನಂದಿಸಿ ಮಾತನಾಡಿದರು.

Ekalavya Sports awards

ಪದವೀಧರರಾಗಿರುವ ಏಷಿಯನ್ ಗೇಮ್ಸ್ ಹಾಗೂ ಕಾಮನ್ ವೆಲ್ತ್ ಪದಕ ವಿಜೇತರಿಗೆ ಗ್ರೂಪ್ ಬಿ ಉದ್ಯೋಗ, ಇದಕ್ಕಿಂತ ಕಡಿಮೆ ಸ್ತರದ ಕ್ರೀಡಾಕೂಟದ ಪದಕವಿಜೇತರಿಗೆ ಗ್ರೂಪ್ ಸಿ ಹಾಗೂ ಗ್ರೂಪ್ ಡಿ ಉದ್ಯೋಗವನ್ನು ನೀಡಲಾಗುವುದು. ಕ್ರೀಡಾಪಟುಗಳಿಗೆ ಸರ್ಕಾರದ ಉದ್ಯೋಗ ನೀಡುವ ನೀತಿ ಕರ್ನಾಟಕದ ಹೊರತು ಬೇರೆ ಯಾವುದೇ ರಾಜ್ಯದಲ್ಲಿಲ್ಲ ಎಂದರು.

ರಾಜ್ಯ ಸರ್ಕಾರದಿಂದ 75 ಕ್ರೀಡಾಪಟುಗಳಿಗೆ ತರಬೇತಿ : ಕಳೆದ ಆಗಸ್ಟ್ 15 ರಂದು 75 ಕ್ರೀಡಾಪಟುಗಳನ್ನು ದತ್ತುಪಡೆದು, ಮುಂದಿನ ಪ್ಯಾರೀಸ್ ಒಲಂಪಿಕ್ಸ್ ನಲ್ಲಿ ಭಾಗವಹಿಸಲು ತರಬೇತಿ ನೀಡಲಾಗುತ್ತಿದೆ. 4 ವರ್ಷದ ತರಬೇತಿ, ಉತ್ತಮ ತರಬೇತಿದಾರರು, ಶಾಲಾ ವ್ಯವಸ್ಥೆಗಳನ್ನು ಒದಗಿಸಲಾಗುತ್ತಿದೆ. ಇದಕ್ಕಾಗಿ 10 ಲಕ್ಷ ವಿನಿಯೋಗಿಸಲಾಗಿದ್ದು, ಅವಶ್ಯಕತೆಗೆ ಅನುಸಾರ ಇನ್ನೂ ಹೆಚ್ಚಿನ ಅನುದಾನವನ್ನು ಒದಗಿಸಲಾಗುವುದು. ಕಾಮನ್ ವೆಲ್ತ್, ಏಷಿಯನ್ ಗೇಮ್ಸ್, ಒಲಂಪಿಕ್ಸ್ ಕ್ರೀಡಾಕೂಟದಲ್ಲಿ ನಮ್ಮ ಕ್ರೀಡಾಪಟುಗಳು ಉತ್ತಮ ಸಾಧನೆಗಳನ್ನು ಮಾಡಬೇಕು ಎಂದರು.

ಈ ಸಂದರ್ಭದಲ್ಲಿ ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವ @narayanagowdakc ,ಶಾಸಕ ರಿಜ್ವಾನ್ ಅರ್ಷದ್, ಕರ್ನಾಟಕ ಓಲಿಂಪಿಕ್ಸ್ ಅಸೋಸಿಯೇಷನ್ ಅಧ್ಯಕ್ಷ ಗೋವಿಂದರಾಜು, ಯುವಸಬಲೀಕರಣ ಹಾಗೂ ಕ್ರೀಡಾ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್ ಮೊದಲಾದವರು ಉಪಸ್ಥಿತರಿದ್ದರು.
2/2

— CM of Karnataka (@CMofKarnataka) December 6, 2022

ಕ್ರೀಡೆ ರಾಷ್ಟ್ರೀಯ ಸಂಕೇತವಾಗುತ್ತಿದೆ : ಯುವ ಕ್ರೀಡಾ ಪ್ರತಿಭೆಗಳು ದೇಶದ ಆಸ್ತಿ. ಏಕಾಗ್ರತೆ, ಹಾಗೂ ಪರಿಶ್ರಮದಿಂದ ಸಾಧನೆ ಮಾಡಿದರೆ ಯಶಸ್ಸು ಖಂಡಿತ ಲಭಿಸುತ್ತದೆ. ಕೇಂದ್ರ ಹಾಗೂ ರಾಜ್ಯ ಸರ್ಕಾರ ಕ್ರೀಡೆಗೆ ಮಹತ್ವವನ್ನು ನೀಡಿದೆ. ಕ್ರೀಡೆ ಹವ್ಯಾಸವಾಗಿ ಪ್ರಾರಂಭವಾಗಿ ರಾಷ್ಟ್ರೀಯ ಸಂಕೇತವಾಗಿ ಇತ್ತೀಚೆಗೆ ಪರಿಗಣಿಸಲಾಗುತ್ತಿದೆ.ಒಂದು ರಾಷ್ಟ್ರವನ್ನು ಅದರ ಕ್ರೀಡಾ ಸಾಧನೆಯ ಮೇಲೆ ಗುರುತಿಸಲಾಗುತ್ತಿದೆ. ಭಾರತದಂತಹ ರಾಷ್ಟ್ರದಲ್ಲಿ ಕ್ರೀಡೆಯನ್ನು ಮುಖ್ಯವಾಹಿನಿಗೆ ತರಲು ಪ್ರಧಾನಿ ಮೋದಿಯವರು ಯಶಸ್ವಿ ಕ್ರಮಗಳನ್ನು ತೆಗೆದುಕೊಂಡಿದ್ದಾರೆ. ಖೇಲೋ ಇಂಡಿಯಾ, ಫಿಟ್ ಇಂಡಿಯಾ, ಜೀತೋ ಇಂಡಿಯಾ ಎಂಬ ಕಾರ್ಯಕ್ರಮಗಳ ಮೂಲಕ ಕ್ರೀಡೆಗಳ ಬಗ್ಗೆ ಜಾಗೃತಿ ಮೂಡಿದೆ. ಇದರ ಪರಿಣಾಮವಾಗಿ ಹಿಂದಿನ ಒಲಂಪಿಕ್ಸ್ ನಲ್ಲಿ ಭಾರತ ಹೆಚ್ಚಿನ ಪದಕಗಳನ್ನು ಗೆಲ್ಲುವಂತಾಯಿತು. ಪ್ಯಾರಾ ಒಲಂಪಿಕ್ಸ್ ನಲ್ಲಿಯೂ ಭಾರತ ಮಹತ್ತರ ಸಾಧನೆಗಳನ್ನು ಮಾಡಿದೆ. ಇದಕ್ಕಾಗಿ ಎಲ್ಲ ಕ್ರೀಡಾಸಾಧಕರನ್ನು ಅಭಿನಂದಿಸುತ್ತೇನೆ ಎಂದರು.

ಯುವಜನತೆಯ ಸಬಲೀಕರಣ ಹಾಗೂ ಕ್ರೀಡಾ ಬೆಳವಣಿಗೆಗೆ ಯುವನೀತಿ : ಮುಂದಿನ ದಿನಗಳಲ್ಲಿ ಯುವನೀತಿಯನ್ನು ತರಲಾಗುವುದು. ಯುವಜನತೆಯ ಸಬಲೀಕರಣ ಹಾಗೂ ಕ್ರೀಡಾ ಬೆಳವಣಿಗೆ ಪ್ರಮುಖವಾಗಿದ್ದು, ಇವೆರಡಕ್ಕೂ ಸಮಾನ ಮಹತ್ವವನ್ನು ನೀಡುವಂತಹ ನೀತಿಯನ್ನು ರೂಪಿಸಲಾಗುತ್ತಿದೆ.ಕ್ರೀಡೆಗೆ ದೇಹದ ಹಾಗೂ ಮನಸ್ಸಿನ ಆರೋಗ್ಯದ ಜೊತೆಗೆ ಗೆಲ್ಲಲೇಬೇಕೆಂದು ಆಡುವುದು ಬಹಳ ಮುಖ್ಯ. ಕೇವಲ ಸೋಲಬಾರದು ಎಂದು ಆಡುವ ಭಾವನೆ ಕ್ರೀಡಾಪಟುಗಳಲ್ಲಿರಬಾರದು. ಗೆಲ್ಲಲೇಬೇಕೆಂಬ ಸಕಾರಾತ್ಮಕ ಭಾವನೆಯಿಂದ ಆಡಿದರೆ ಗೆಲುವು ನಿಮ್ಮದಾಗುತ್ತದೆ. ರಾಜ್ಯ ಸರ್ಕಾರ ಕ್ರೀಡೆಗಳಿಗೆ, ಕ್ರೀಡಾಪಟುಗಳಿಗೆ ಬಹಳ ಮಹತ್ವ ನೀಡುತ್ತಿದೆ. ಗೃಹ ಇಲಾಖೆಯ ಉದ್ಯೋಗಗಳಲ್ಲಿ ಕ್ರೀಡಾಪಟುಗಳಿಗೆ ಶೇ.2 ರ ಮೀಸಲಾತಿಯನ್ನು ನಿಗದಿಪಡಿಸಲಾಗಿದೆ. ರಾಜ್ಯ ಸರ್ಕಾರದಲ್ಲಿ ಕ್ರೀಡೆಗಳಿಗೆ ಪ್ರಾಶಸ್ತ್ಯ ನೀಡುವ ನಾಯಕರು, ಆಡಳಿತಗಾರರು ನಮ್ಮಲ್ಲಿದ್ದಾರೆ. ಇದರಿಂದಾಗಿ ಕ್ರೀಡೆಗೆ ಉತ್ತೇಜನ ನೀಡುವಂತಹ ನೀತಿಗಳನ್ನು ಜಾರಿಗೆ ತರಲು ಸಾಧ್ಯವಾಗಿದೆ ಎಂದರು.

ಗ್ರಾಮೀಣ ಕ್ರೀಡೆಗೆ ಪ್ರೋತ್ಸಾಹ: ಗ್ರಾಮಗಳಲ್ಲಿ ನಿಜವಾದ ಕ್ರೀಡಾಪ್ರತಿಭೆಗಳಿದ್ದು, ಅವರಿಗೆ ಸೂಕ್ತ ತರಬೇತಿ ನೀಡಿದ್ದಲ್ಲಿ ಮಹತ್ತರ ಸಾಧನೆಗಳನ್ನು ಮಾಡಲು ಶಕ್ತರಾಗಿರುತ್ತಾರೆ. ಆದ್ದರಿಂದ ಗ್ರಾಮ, ತಾಲ್ಲೂಕು, ಜಿಲ್ಲಾಪಂಚಾಯತಿ ಹಂತಗಳಲ್ಲಿ ಗ್ರಾಮೀಣ ಕ್ರೀಡಾಕೂಟವನ್ನು ಈ ವರ್ಷದಿಂದ ಪ್ರಾರಂಭಿಸಲಾಗಿದ್ದು, ಕೋಕೋ, ಕಬ್ಬಡ್ಡಿ, ಕುಸ್ತಿ, ವಾಲಿಬಾಲ್, ಕಂಬಳ ದಂತಹ ಕ್ರೀಡೆಗಳನ್ನು ಪ್ರೋತ್ಸಾಹಿಸಲಾಗುತ್ತಿದೆ ಎಂದರು.

ಕ್ರೀಡೆಗಳಲ್ಲಿ ತೊಡಗಿದವರು ಹೆಚ್ಚಾಗಿ ಕ್ರೀಡಾಮನೋಭಾವವನ್ನು ಹೊಂದಿದವರಾಗಿರುತ್ತಾರೆ. ಇಂತಹ ಕ್ರೀಡಾಪಟುಗಳು ಸೋಲನ್ನೂ ಸಹ ಗೆಲುವಿಗೆ ಪರಿವರ್ತಿಸಲು ಶ್ರಮಿಸುತ್ತಾರೆ. ಸೋಲಿಗೆ ಹೆದರುವ ಸ್ವಭಾವದವರಲ್ಲ.ಕ್ರೀಡಾಸಾಧಕರ ಬೆಂಬಲವಾಗಿ ಅವರ ಕುಟುಂಬವರ್ಗದವರು, ತರಬೇತುದಾರರ ಪರಿಶ್ರಮವೂ ಇರುತ್ತದೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವ ನಾರಾಯಣ ಗೌಡ, ಶಾಸಕ ರಿಜ್ವಾನ್ ಅರ್ಷದ್, ಕರ್ನಾಟಕ ಓಲಿಂಪಿಕ್ಸ್ ಅಸೋಸಿಯೇಷನ್ ಅಧ್ಯಕ್ಷ ಗೋವಿಂದರಾಜು, ಯುವಸಬಲೀಕರಣ ಹಾಗೂ ಕ್ರೀಡಾ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್ ಮೊದಲಾದವರು ಉಪಸ್ಥಿತರಿದ್ದರು.

About the Author

The Bengaluru Live

Administrator

Visit Website View All Posts

Post navigation

Previous: ಬೆಂಗಳೂರಿನ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾದ ರೋಚಕ ಕೊಲೆ; ಅಂತರ್ಜಾಲದಲ್ಲಿ ವಿಡಿಯೋ ವೈರಲ್
Next: ಜಿಮ್ ಒಪ್ಪಂದ ಮುಂದಿನ 5 ವರ್ಷದೊಳಗೆ ಶೇ. 75 ರಷ್ಟು ಅನುಷ್ಠಾನ: ಸಚಿವ ಮುರುಗೇಶ್ ನಿರಾಣಿ

Related Stories

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಕೆಪಿಎಂಇ ನೋಂದಣಿ ಮತ್ತು ಕುಂದುಕೊರತೆ ಪ್ರಾಧಿಕಾರದ ಸಭೆಯ ಅಧ್ಯಕ್ಷತೆ ವಹಿಸಿರುವ ಬೆಂಗಳೂರು ನಗರ ಜಿಲ್ಲಾಧಿಕಾರಿ ಮತ್ತು ಸುತ್ತಲೂ ಕುಳಿತಿರುವ ಆರೋಗ್ಯ ಅಧಿಕಾರಿಗಳು
  • ಬೆಂಗಳೂರು ನಗರ

ಕೆಪಿಎಂಇ ಉಲ್ಲಂಘನೆ: ಬೆಂಗಳೂರಿನ 9 ಖಾಸಗಿ ಆಸ್ಪತ್ರೆ, ಕ್ಲಿನಿಕ್‌ಗಳಿಗೆ ₹3.65 ಲಕ್ಷ ದಂಡ; ಮಣಿಪಾಲ್‌ಗೆ ಹಣ ಮರುಪಾವತಿ ಸೂಚನೆ

The Bengaluru Live November 27, 2026 10:12 AM
ಕಟ್ಟಡದ ಪ್ರವೇಶದ ಮೇಲೆ ಅಳವಡಿಸಿರುವ ಪ್ರಾಧಿಕಾರದ ಲಾಂಛನದೊಂದಿಗೆ ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಕನ್ನಡ ನಾಮಫಲಕ
  • ಬೆಂಗಳೂರು ನಗರ

₹27 ಲಕ್ಷ ಆಡಿಯೋ ವಿವಾದ: ಮುಖ್ಯ ಆಯುಕ್ತರ ಆಡಳಿತ ಶಾಖೆಯ ಇಬ್ಬರು ಸಿಬ್ಬಂದಿ ನಗರ ಪಾಲಿಕೆಗಳಿಗೆ ವರ್ಗ

The Bengaluru Live November 27, 2026 8:40 AM
ಬೆಂಗಳೂರಿನ ಬೆಸ್ಕಾಂ ಕಾರ್ಪೊರೇಟ್ ಕಚೇರಿಯ ಫೈಲ್ ಚಿತ್ರ
  • ಬೆಂಗಳೂರು ನಗರ

ಉತ್ತರಹಳ್ಳಿ, ವಡ್ಡರಪಾಳ್ಯ, ದ್ವಾರಕಾನಗರ ಸೇರಿ ಹಲವೆಡೆ ನ.30ರಂದು ವಿದ್ಯುತ್ ವ್ಯತ್ಯಯ: ಬೆಸ್ಕಾಂ

The Bengaluru Live November 26, 2026 7:30 PM

Latest Post

ಕೆಪಿಎಸ್‌ಸಿ ಪೂರ್ವಭಾವಿ ಪರೀಕ್ಷೆ 2026 ಕಟ್‌ಆಫ್ ಪ್ರಕಟ: ಉಳಿಕೆ ಮೂಲ ವೃಂದದಲ್ಲಿ ಜಿಎಂ 206.5, ಕಲ್ಯಾಣ ಕರ್ನಾಟಕ ವೃಂದದಲ್ಲಿ 210 ಬೆಂಗಳೂರಿನ ಕರ್ನಾಟಕ ಲೋಕಸೇವಾ ಆಯೋಗದ ಕಚೇರಿ ಕಟ್ಟಡ
  • ಕರ್ನಾಟಕ

ಕೆಪಿಎಸ್‌ಸಿ ಪೂರ್ವಭಾವಿ ಪರೀಕ್ಷೆ 2026 ಕಟ್‌ಆಫ್ ಪ್ರಕಟ: ಉಳಿಕೆ ಮೂಲ ವೃಂದದಲ್ಲಿ ಜಿಎಂ 206.5, ಕಲ್ಯಾಣ ಕರ್ನಾಟಕ ವೃಂದದಲ್ಲಿ 210

November 27, 2026 11:45 AM
ಕೆಪಿಎಂಇ ಉಲ್ಲಂಘನೆ: ಬೆಂಗಳೂರಿನ 9 ಖಾಸಗಿ ಆಸ್ಪತ್ರೆ, ಕ್ಲಿನಿಕ್‌ಗಳಿಗೆ ₹3.65 ಲಕ್ಷ ದಂಡ; ಮಣಿಪಾಲ್‌ಗೆ ಹಣ ಮರುಪಾವತಿ ಸೂಚನೆ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಕೆಪಿಎಂಇ ನೋಂದಣಿ ಮತ್ತು ಕುಂದುಕೊರತೆ ಪ್ರಾಧಿಕಾರದ ಸಭೆಯ ಅಧ್ಯಕ್ಷತೆ ವಹಿಸಿರುವ ಬೆಂಗಳೂರು ನಗರ ಜಿಲ್ಲಾಧಿಕಾರಿ ಮತ್ತು ಸುತ್ತಲೂ ಕುಳಿತಿರುವ ಆರೋಗ್ಯ ಅಧಿಕಾರಿಗಳು
  • ಬೆಂಗಳೂರು ನಗರ

ಕೆಪಿಎಂಇ ಉಲ್ಲಂಘನೆ: ಬೆಂಗಳೂರಿನ 9 ಖಾಸಗಿ ಆಸ್ಪತ್ರೆ, ಕ್ಲಿನಿಕ್‌ಗಳಿಗೆ ₹3.65 ಲಕ್ಷ ದಂಡ; ಮಣಿಪಾಲ್‌ಗೆ ಹಣ ಮರುಪಾವತಿ ಸೂಚನೆ

November 27, 2026 10:12 AM
₹27 ಲಕ್ಷ ಆಡಿಯೋ ವಿವಾದ: ಮುಖ್ಯ ಆಯುಕ್ತರ ಆಡಳಿತ ಶಾಖೆಯ ಇಬ್ಬರು ಸಿಬ್ಬಂದಿ ನಗರ ಪಾಲಿಕೆಗಳಿಗೆ ವರ್ಗ ಕಟ್ಟಡದ ಪ್ರವೇಶದ ಮೇಲೆ ಅಳವಡಿಸಿರುವ ಪ್ರಾಧಿಕಾರದ ಲಾಂಛನದೊಂದಿಗೆ ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಕನ್ನಡ ನಾಮಫಲಕ
  • ಬೆಂಗಳೂರು ನಗರ

₹27 ಲಕ್ಷ ಆಡಿಯೋ ವಿವಾದ: ಮುಖ್ಯ ಆಯುಕ್ತರ ಆಡಳಿತ ಶಾಖೆಯ ಇಬ್ಬರು ಸಿಬ್ಬಂದಿ ನಗರ ಪಾಲಿಕೆಗಳಿಗೆ ವರ್ಗ

November 27, 2026 8:40 AM
ಬೆಂಗಳೂರು–ಕಲಬುರಗಿ ವಿಮಾನ ಸೇವೆಗೆ ಶೇ 80ರಷ್ಟು ಸೀಟು ಭರ್ತಿ: ಪ್ರಿಯಾಂಕ್ ಖರ್ಗೆ ಕಲಬುರಗಿ ವಿಮಾನ ನಿಲ್ದಾಣದ ಟರ್ಮಿನಲ್ ಕಟ್ಟಡ
  • ಕರ್ನಾಟಕ

ಬೆಂಗಳೂರು–ಕಲಬುರಗಿ ವಿಮಾನ ಸೇವೆಗೆ ಶೇ 80ರಷ್ಟು ಸೀಟು ಭರ್ತಿ: ಪ್ರಿಯಾಂಕ್ ಖರ್ಗೆ

November 27, 2026 8:08 AM
ಗಾಂಧಿನಗರದಲ್ಲಿ ಅಂಬೇಡ್ಕರ್ ಪುತ್ಥಳಿ ಅನಾವರಣ: ಪೊಲೀಸ್ ಗೃಹ ನಿರ್ಮಾಣ ನಿಗಮದ ಆವರಣದಲ್ಲಿ ಪ್ರಿಯಾಂಕ್ ಖರ್ಗೆ ಚಾಲನೆ ಗಾಂಧಿನಗರದಲ್ಲಿ ನಡೆದ ಸಂವಿಧಾನ ದಿನಾಚರಣೆ ಕಾರ್ಯಕ್ರಮದಲ್ಲಿ ನೀಲಿ ಶಾಲು ಧರಿಸಿದ ನಾಯಕರು ಮತ್ತು ಕಾರ್ಯಕರ್ತರು
  • ಕರ್ನಾಟಕ

ಗಾಂಧಿನಗರದಲ್ಲಿ ಅಂಬೇಡ್ಕರ್ ಪುತ್ಥಳಿ ಅನಾವರಣ: ಪೊಲೀಸ್ ಗೃಹ ನಿರ್ಮಾಣ ನಿಗಮದ ಆವರಣದಲ್ಲಿ ಪ್ರಿಯಾಂಕ್ ಖರ್ಗೆ ಚಾಲನೆ

November 26, 2026 11:25 PM
ಕರ್ನಾಟಕದಲ್ಲಿ ಉದ್ಯಮ ವಿಸ್ತರಣೆ, ಸುಧಾರಿತ ಉತ್ಪಾದನೆಗೆ ಮಕಿನೊ ಆಸಕ್ತಿ: ಜಪಾನ್ ಮಾತುಕತೆ ಬಳಿಕ ಎಂ.ಬಿ. ಪಾಟೀಲ್ ಜಪಾನ್‌ನಲ್ಲಿ ಮಕಿನೊ ಅಧಿಕಾರಿಗಳೊಂದಿಗೆ ಮಾತುಕತೆ ವೇಳೆ ಕರ್ನಾಟಕ ನಿಯೋಗದ ಸದಸ್ಯರು, ಉಡುಗೊರೆ ವಿನಿಮಯ
  • ಕರ್ನಾಟಕ

ಕರ್ನಾಟಕದಲ್ಲಿ ಉದ್ಯಮ ವಿಸ್ತರಣೆ, ಸುಧಾರಿತ ಉತ್ಪಾದನೆಗೆ ಮಕಿನೊ ಆಸಕ್ತಿ: ಜಪಾನ್ ಮಾತುಕತೆ ಬಳಿಕ ಎಂ.ಬಿ. ಪಾಟೀಲ್

November 26, 2026 9:35 PM

ನೀವು ತಪ್ಪಿಸಿಕೊಂಡಿರಬಹುದು

ಬೆಂಗಳೂರಿನ ಕರ್ನಾಟಕ ಲೋಕಸೇವಾ ಆಯೋಗದ ಕಚೇರಿ ಕಟ್ಟಡ
  • ಕರ್ನಾಟಕ

ಕೆಪಿಎಸ್‌ಸಿ ಪೂರ್ವಭಾವಿ ಪರೀಕ್ಷೆ 2026 ಕಟ್‌ಆಫ್ ಪ್ರಕಟ: ಉಳಿಕೆ ಮೂಲ ವೃಂದದಲ್ಲಿ ಜಿಎಂ 206.5, ಕಲ್ಯಾಣ ಕರ್ನಾಟಕ ವೃಂದದಲ್ಲಿ 210

The Bengaluru Live November 27, 2026 11:45 AM
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಕೆಪಿಎಂಇ ನೋಂದಣಿ ಮತ್ತು ಕುಂದುಕೊರತೆ ಪ್ರಾಧಿಕಾರದ ಸಭೆಯ ಅಧ್ಯಕ್ಷತೆ ವಹಿಸಿರುವ ಬೆಂಗಳೂರು ನಗರ ಜಿಲ್ಲಾಧಿಕಾರಿ ಮತ್ತು ಸುತ್ತಲೂ ಕುಳಿತಿರುವ ಆರೋಗ್ಯ ಅಧಿಕಾರಿಗಳು
  • ಬೆಂಗಳೂರು ನಗರ

ಕೆಪಿಎಂಇ ಉಲ್ಲಂಘನೆ: ಬೆಂಗಳೂರಿನ 9 ಖಾಸಗಿ ಆಸ್ಪತ್ರೆ, ಕ್ಲಿನಿಕ್‌ಗಳಿಗೆ ₹3.65 ಲಕ್ಷ ದಂಡ; ಮಣಿಪಾಲ್‌ಗೆ ಹಣ ಮರುಪಾವತಿ ಸೂಚನೆ

The Bengaluru Live November 27, 2026 10:12 AM
ಕಟ್ಟಡದ ಪ್ರವೇಶದ ಮೇಲೆ ಅಳವಡಿಸಿರುವ ಪ್ರಾಧಿಕಾರದ ಲಾಂಛನದೊಂದಿಗೆ ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಕನ್ನಡ ನಾಮಫಲಕ
  • ಬೆಂಗಳೂರು ನಗರ

₹27 ಲಕ್ಷ ಆಡಿಯೋ ವಿವಾದ: ಮುಖ್ಯ ಆಯುಕ್ತರ ಆಡಳಿತ ಶಾಖೆಯ ಇಬ್ಬರು ಸಿಬ್ಬಂದಿ ನಗರ ಪಾಲಿಕೆಗಳಿಗೆ ವರ್ಗ

The Bengaluru Live November 27, 2026 8:40 AM
ಕಲಬುರಗಿ ವಿಮಾನ ನಿಲ್ದಾಣದ ಟರ್ಮಿನಲ್ ಕಟ್ಟಡ
  • ಕರ್ನಾಟಕ

ಬೆಂಗಳೂರು–ಕಲಬುರಗಿ ವಿಮಾನ ಸೇವೆಗೆ ಶೇ 80ರಷ್ಟು ಸೀಟು ಭರ್ತಿ: ಪ್ರಿಯಾಂಕ್ ಖರ್ಗೆ

The Bengaluru Live November 27, 2026 8:08 AM

ನಮ್ಮ ಕುರಿತು

ಬೆಂಗಳೂರು ಲೈವ್ ಬೆಂಗಳೂರು ಮತ್ತು ಕರ್ನಾಟಕವನ್ನು ಕೇಂದ್ರೀಕರಿಸಿ ಇಂಗ್ಲಿಷ್ ಮತ್ತು ಕನ್ನಡದಲ್ಲಿ ಸುದ್ದಿ ಹಾಗೂ ಮಾಹಿತಿಯನ್ನು ಪ್ರಕಟಿಸುವ ಸ್ವತಂತ್ರ ಡಿಜಿಟಲ್ ಸುದ್ದಿ ಪ್ರಕಟಣೆಯಾಗಿದೆ. ಇದು ಫೆಬ್ರವರಿ 2020ರಿಂದ ಕಾರ್ಯನಿರ್ವಹಿಸುತ್ತಿದೆ.

ಉಪಯುಕ್ತ ಕೊಂಡಿಗಳು

  • ಬೆಂಗಳೂರು ಲೈವ್ ಕುರಿತು
  • ಸಂಪರ್ಕಿಸಿ
  • ಸಂಪಾದಕೀಯ ಮಾನದಂಡಗಳು ಮತ್ತು ತಿದ್ದುಪಡಿ ನೀತಿ
  • ಪ್ರಕಾಶಕರು, ಸಂಪಾದಕೀಯ ಹೊಣೆಗಾರಿಕೆ ಮತ್ತು ದೂರು ಪರಿಹಾರ
  • ಮಾಲೀಕತ್ವ ಮತ್ತು ಹಣಕಾಸು ಪಾರದರ್ಶಕತೆ
  • ನಮ್ಮೊಂದಿಗೆ ಜಾಹೀರಾತು ನೀಡಿ
  • ಗೌಪ್ಯತಾ ನೀತಿ
  • ಸೇವಾ ನಿಯಮಗಳು
  • ಪತ್ರಿಕಾ ಪ್ರಕಟಣೆ ಸಲ್ಲಿಸಿ

ಇತ್ತೀಚಿನ ಸುದ್ದಿಗಳು

  • ಕೆಪಿಎಸ್‌ಸಿ ಪೂರ್ವಭಾವಿ ಪರೀಕ್ಷೆ 2026 ಕಟ್‌ಆಫ್ ಪ್ರಕಟ: ಉಳಿಕೆ ಮೂಲ ವೃಂದದಲ್ಲಿ ಜಿಎಂ 206.5, ಕಲ್ಯಾಣ ಕರ್ನಾಟಕ ವೃಂದದಲ್ಲಿ 210
  • ಕೆಪಿಎಂಇ ಉಲ್ಲಂಘನೆ: ಬೆಂಗಳೂರಿನ 9 ಖಾಸಗಿ ಆಸ್ಪತ್ರೆ, ಕ್ಲಿನಿಕ್‌ಗಳಿಗೆ ₹3.65 ಲಕ್ಷ ದಂಡ; ಮಣಿಪಾಲ್‌ಗೆ ಹಣ ಮರುಪಾವತಿ ಸೂಚನೆ
  • ₹27 ಲಕ್ಷ ಆಡಿಯೋ ವಿವಾದ: ಮುಖ್ಯ ಆಯುಕ್ತರ ಆಡಳಿತ ಶಾಖೆಯ ಇಬ್ಬರು ಸಿಬ್ಬಂದಿ ನಗರ ಪಾಲಿಕೆಗಳಿಗೆ ವರ್ಗ
  • ಬೆಂಗಳೂರು–ಕಲಬುರಗಿ ವಿಮಾನ ಸೇವೆಗೆ ಶೇ 80ರಷ್ಟು ಸೀಟು ಭರ್ತಿ: ಪ್ರಿಯಾಂಕ್ ಖರ್ಗೆ
©Copyright 2025 The Bengaluru Live All rights reserved. | MoreNews by AF themes.