Home Uncategorized Nokia C31: ವಿದೇಶದಲ್ಲಿ ಧೂಳೆಬ್ಬಿಸಿದ ನೋಕಿಯಾ C31 ಭಾರತದಲ್ಲಿ ಬಿಡುಗಡೆ: ಬೆಲೆ ಎಷ್ಟು?

Nokia C31: ವಿದೇಶದಲ್ಲಿ ಧೂಳೆಬ್ಬಿಸಿದ ನೋಕಿಯಾ C31 ಭಾರತದಲ್ಲಿ ಬಿಡುಗಡೆ: ಬೆಲೆ ಎಷ್ಟು?

20
0
Advertisement
bengaluru

ನೋಕಿಯಾ (Nokia) ಕಂಪನಿಯ ಸ್ಮಾರ್ಟ್​ಫೋನ್​ಗಳು ಭಾರತದಲ್ಲಿ ದೊಡ್ಟ ಮಟ್ಟದಲ್ಲಿ ಯಶಸ್ಸು ಸಾಧಿಸುತ್ತಿಲ್ಲ. ಒಂದು ಕಾಲದಲ್ಲಿ ಭಾರತದ ಮೊಬೈಲ್ ಮಾರುಕಟ್ಟೆಯನ್ನು ಆಳುತ್ತಿದ್ದ ನೋಕಿಯಾ ಈಗ ಹೇಳಹೆಸರಿಲ್ಲದಂತಾಗಿದೆ. ಶವೋಮಿ (Xiaomi), ಸ್ಯಾಮ್​ಸಂಗ್, ರಿಯಲ್ ಮಿ, ವಿವೋ ಬ್ರ್ಯಾಂಡ್​ಗಳು ಬಂದ ಮೇಲೆ ನೋಕಿಯಾ ಮೊಬೈಲ್​ಗಳ ಬೇಡಿಕೆ ಕುಸಿಯುತ್ತಾ ಬಂತು. ಹೀಗಿದ್ದರೂ ನೋಕಿಯಾ ಆಗಾಗ ಹೊಸ ಸ್ಮಾರ್ಟ್​ಫೋನ್​ಗಳನ್ನು ಬಿಡುಗಡೆ ಮಾಡುತ್ತಿರುತ್ತವೆ. ಇದೀಗ ಕಂಪನಿ ತನ್ನ C ಕ್ಯಾಟಗರಿಯಲ್ಲಿ ಹೊಸ ಸ್ಮಾರ್ಟ್‌ಫೋನ್‌ ಅನ್ನು ಅನಾವರಣ ಮಾಡಿದೆ. ವಿದೇಶದಲ್ಲಿ ರಿಲೀಸ್ ಆಗಿ ಉತ್ತಮ ಪ್ರತಿಕ್ರಿಯೆ ಕೇಳಿಬಂದಿದ್ದ ಬಜೆಟ್‌ ಬೆಲೆಯ ನೋಕಿಯಾ ಸಿ31 (Nokia C31) ಫೋನ್‌ ಇದೀಗ ಭಾರತಕ್ಕೂ ಎಂಟ್ರಿ ನೀಡಿದೆ. ಈ ಫೋನಿನ ಬೆಲೆ, ಫೀಚರ್ಸ್ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ.

ಬೆಲೆ ಎಷ್ಟು?:

ನೋಕಿಯಾ C31 ಸ್ಮಾರ್ಟ್‌ಫೋನ್‌ ಭಾರತದಲ್ಲಿ ಎರಡು ಆಯ್ಕೆಯಲ್ಲಿ ಬಿಡುಗಡೆ ಆಗಿದೆ. ಇದರ ಬೇಸ್‌ ಮಾಡೆಲ್‌ 3GB RAM ಮತ್ತು 32GB ಸ್ಟೋರೇಜ್‌ ಆಯ್ಕೆಯ ಬೆಲೆ 9,999ರೂ. ಆಗಿದೆ. ಅಂತೆಯೆ ಇದರ 4GB + 64GB ರೂಪಾಂತರದ ಆಯ್ಕೆಗೆ 10,999ರೂ. ನಿಗದಿ ಮಾಡಲಾಗಿದೆ. ಈ ಫೋನ್ ಯಾವ ದಿನಾಂಕದಿಂದ ಖರೀದಿಗೆ ಸಿಗಲಿದೆ ಎಂಬ ಬಗ್ಗೆ ಇನ್ನೂ ಅಧಿಕೃತ ಮಾಹಿತಿ ಹೊರಬಿದ್ದಿಲ್ಲ. ಆದರೆ ಇದು ನೋಕಿಯಾ ವೆಬ್‌ಸೈಟ್‌ ಮತ್ತು ದೇಶದ ಇತರ ಪ್ರಮುಖ ರಿಟೇಲ್‌ ಸ್ಟೋರ್‌ಗಳ ಮೂಲಕ ಶೀಘ್ರದಲ್ಲೇ ಮಾರಾಟ ಆರಂಭಿಸಲಿದೆಯಂತೆ.

ಏನು ಫೀಚರ್ಸ್:

bengaluru bengaluru

ನೋಕಿಯಾ C31 ಸ್ಮಾರ್ಟ್‌ಫೋನ್‌ 720 x 1600 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.7 ಇಂಚಿನ HD ಡಿಸ್‌ಪ್ಲೇ ಹೊಂದಿದೆ. ಈ ಡಿಸ್‌ಪ್ಲೇ ಸ್ಟ್ಯಾಂಡರ್ಡ್‌ 60Hz ರಿಫ್ರೆಶ್‌ ರೇಟ್‌ ಅನ್ನು ಬೆಂಬಲಿಸಲಿದೆ. ಯುನಿಸೊಕ್ SoC ಪ್ರೊಸೆಸರ್‌ ಹೊಂದಿರಲಿದೆ. ಆದರೆ ಪ್ರೊಸೆಸರ್‌ ಬಗ್ಗೆ ಇನ್ನು ಹೆಚ್ಚಿನ ಮಾಹಿತಿ ಲಭ್ಯವಾಗಿಲ್ಲ. 3GB RAM ಮತ್ತು 32GB ಹಾಗೂ 4GB RAM ಮತ್ತು 64GB ಇನ್‌ಬಿಲ್ಟ್‌ ಸ್ಟೋರೇಜ್‌ ಅನ್ನು ಪಡೆದಿದೆ. ಮೈಕ್ರೋ SD ಕಾರ್ಡ್ ಸ್ಲಾಟ್ ಮೂಲಕ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸಬಹುದು.

ಓಲಾ, ಉಬರ್ ದರ ಹೆಚ್ಚಳದಿಂದ ಬೇಸತ್ತಿದ್ದೀರಾ? ದಿಢೀರ್ ದರ ಹೆಚ್ಚಳ ತಪ್ಪಿಸಲು ಇಲ್ಲಿದೆ ಟಿಪ್ಸ್

ಕ್ಯಾಮೆರಾ ವಿಚಾರಕ್ಕೆ ಬರುವುದಾದರೆ, ಇದು ಟ್ರಿಪಲ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 13 ಮೆಗಾಪಿಕ್ಸೆಲ್‌ ಸೆನ್ಸಾರ್‌, ಎರಡನೇ ಕ್ಯಾಮೆರಾ 2 ಮೆಗಾಪಿಕ್ಸೆಲ್‌ ಮ್ಯಾಕ್ರೋ ಲೆನ್ಸ್‌ ಮತ್ತು ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್‌ ಡೆಪ್ತ್ ಸೆನ್ಸಾರ್ ಅನ್ನು ಹೊಂದಿದೆ. ಇದಲ್ಲದೆ 5 ಮೆಗಾಪಿಕ್ಸೆಲ್‌ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಒಳಗೊಂಡಿದೆ. ಕ್ಯಾಮೆರಾ ಫೀಚರ್ಸ್‌ಗಳಲ್ಲಿ ಪೋರ್ಟ್ರೇಟ್ ಮೋಡ್, HDR, ನೈಟ್ ಮೋಡ್ ಆಯ್ಕೆ ಇರಲಿದೆ.

ದೀರ್ಘ ಸಮಯ ಬಾಳಿಕೆ ಬರುವ 5,050mAh ಸಾಮರ್ಥ್ಯದ ಬ್ಯಾಟರಿಯನ್ನು ಒಳಗೊಂಡಿದೆ. ಇದು ವೇಗದ ಚಾರ್ಜಿಂಗ್‌ ಬೆಂಬಲಿಸುವುದರ ಬಗ್ಗೆ ಯಾವುದೇ ಮಾಹಿತಿ ಬಹಿರಂಗವಾಗಿಲ್ಲ, ಆದರೆ ಈ ಫೋನ್‌ ಸಿಂಗಲ್‌ ಚಾರ್ಜ್‌ನಲ್ಲಿ ಮೂರು ದಿನಗಳವರೆಗೆ ಬಾಳಿಕೆ ನೀಡಲಿದೆ ಎನ್ನಲಾಗಿದೆ. ಜೊತೆಗೆ ಬ್ಯಾಟರಿ ಅವಧಿಯನ್ನು ಹೆಚ್ಚಿಸುವುದಕ್ಕಾಗಿ AI ಚಾಲಿತ ತಂತ್ರಜ್ಞಾನವನ್ನು ಬಳಸುತ್ತಿದೆ.

ಇನ್ನಷ್ಟು ವಾಣಿಜ್ಯ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ


bengaluru

LEAVE A REPLY

Please enter your comment!
Please enter your name here