ಬೆಂಗಳೂರು: ಸಾರಿಗೆ ಸಚಿವ ರಾಮಲಿಂಗರೆಡ್ಡಿ ರೆಡ್ಡಿಗೆ ಸಂಕಷ್ಟ ಎದುರಾಗಿದೆ. ಮೇಕೆದಾಟು ಪಾದಯಾತ್ರೆ ವೇಳೆ ಕೋವಿಡ್ ನಿಯಮ ಉಲ್ಲಂಘನೆ ಆರೋಪಕ್ಕೆ ಸಂಬಂಧಿಸಿದಂತೆ ದಾಖಲಾಗಿದ್ದ ವಿಚಾರಣೆಗೆ ಗೈರಾಗಿದ್ದ ರಾಮಲಿಂಗರೆಡ್ಡಿ ವಿರುದ್ಧ ಬೆಂಗಳೂರಿನ 42 ನೇ ಎಸಿಎಂಎಂ ಕೋರ್ಟ್ ವಾರೆಂಟ್ ಜಾರಿಗೊಳಿಸಿದೆ.
ಕೊವೀಡ್ ನಿಯಮ ಉಲ್ಲಂಘನೆ ಹಿನ್ನೆಲೆಯಲ್ಲಿ ವಿಪತ್ತು ನಿರ್ವಹಣಾ ಕಾಯ್ದೆ ಅಡಿಯಲ್ಲಿ ಕೇಸ್ ದಾಖಲಾಗಿತ್ತು ಪೊಲೀಸರು ತನಿಖೆ ನಡೆಸಿ ಆರೋಪಪಟ್ಟಿ ಸಲ್ಲಿಸಿದ್ದರು. ವಿಚಾರಣೆ ಹಾಜರಾಗಲು ಕೋರ್ಟ್ ಸಮನ್ಸ್ ಜಾರಿಯಾದರೂ ಕೋರ್ಟ್ ಗೆ ರಾಮಲಿಂಗರೆಡ್ಡಿ ಗೈರಾಗಿದ್ದರು. ಹೀಗಾಗಿ ಜಾಮೀನು ರಹಿತ ವಾರಂಟ್ ಜಾರಿಗೆ 42 ನೇ ಎಸಿಎಂಎಂ ನ್ಯಾಯಾಧೀಶರಾದ ಜೆ.ಪ್ರೀತ್ ಆದೇಶಿಸಿದ್ದಾರೆ.