ಬೆಂಗಳೂರು:
ಕಳೆದೊಂದು ತಿಂಗಳಿಂದ ಕೋವಿಡ್ ಸೋಂಕಿನಿಂದ ಬಳಲುತ್ತಿದ್ದ ದಲಿತ ಕವಿ, ಕನ್ನಡ ಪುಸ್ತಕ ಪ್ರಾಧಿಕಾರದ ಮಾಜಿ ಅಧ್ಯಕ್ಷ ಡಾ. ಸಿದ್ದಲಿಂಗಯ್ಯ (66) ಚಿಕಿತ್ಸೆ ಫಲಕಾರಿಯಾಗದೆ ಶುಕ್ರವಾರ ಮೃತಪಟ್ಟಿದ್ದಾರೆ.
ಇವರು ಮಣಿಪಾಲ್ ಆಸ್ಪತ್ರೆಯಲ್ಲಿ ಸೋಂಕಿಗೆ ಚಿಕಿತ್ಸೆ ಪಡೆಯುತ್ತಿದ್ದರು.
ದಲಿತರ ಧ್ವನಿಯಾಗಿದ್ದ ಸಿದ್ದಲಿಂಗಯ್ಯ, ದಲಿತ ಬಂಡಾಯ ಚಳವಳಿಯಲ್ಲಿ ಸಕ್ರಿಯರಾಗಿದ್ದರು. ರಾಜ್ಯದ ದಲಿತ ಸಂಘರ್ಷ ಸಮಿತಿಯ ಸಂಸ್ಥಾಪಕರಲ್ಲಿ ಒಬ್ಬರಾಗಿದ್ದರು. ಸಾಮಾಜಿಕ ಸಮಾನತೆಯ ಕವನ ರಚಿಸಿದ್ದರು.
Dr. Siddalingaiah will be remembered for his prolific writings, poetry and contributions towards social justice. Saddened by his passing away. My thoughts are with his family and many admirers in this hour of sadness. Om Shanti.
— Narendra Modi (@narendramodi) June 11, 2021
The demise of Dr Siddalingaiah has left a huge void in Kannada literature. An eminent poet, social activist and academician, he became a fierce voice for the poor and marginalized and also enriched public discourse through his writings. My condolences to his family & followers.
— President of India (@rashtrapatibhvn) June 11, 2021
ದಲಿತ ಕವಿ ಎಂದೇ ಖ್ಯಾತರಾಗಿದ್ದ ಹಿರಿಯ ಸಾಹಿತಿ ಡಾ.ಸಿದ್ದಲಿಂಗಯ್ಯ ವಿಧಿವಶರಾದ ಸುದ್ದಿ ತಿಳಿದು ಅತೀವ ನೋವುಂಟಾಗಿದೆ. ಕನ್ನಡ ಸಾಹಿತ್ಯದ ಶ್ರೇಷ್ಠ ಸಾಧಕರೊಬ್ಬರು ನಮ್ಮನ್ನು ಅಗಲಿದ್ದಾರೆ. ಅವರ ಆತ್ಮಕ್ಕೆ ಸದ್ಗತಿ ಕೋರುತ್ತಾ, ದೇವರು ಅವರ ಕುಟುಂಬ, ಅಪಾರ ಅಭಿಮಾನಿಗಳಿಗೆ ದುಃಖವನ್ನು ಭರಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸುತ್ತೇನೆ. ಓಂ ಶಾಂತಿ
— B.S. Yediyurappa (@BSYBJP) June 11, 2021
ಹಿರಿಯ ಕವಿ ಡಾ. ಸಿದ್ದಲಿಂಗಯ್ಯ ಅವರ ನಿಧನದ ಸುದ್ದಿ ತಿಳಿದು ತೀವ್ರ ಬೇಸರವಾಗಿದೆ.
— H D Devegowda (@H_D_Devegowda) June 11, 2021
ದಲಿತರನ್ನು ಜಾಗೃತಗೊಳಿಸುವಲ್ಲಿ ಡಾ. ಸಿದ್ದಲಿಂಗಯ್ಯನವರ ಕೊಡುಗೆ ಅಪಾರ. ದೇವರು ಅವರ ಆತ್ಮಕ್ಕೆ ಶಾಂತಿ ನೀಡಲಿ, ಅವರ ಕುಟುಂಬದವರು ಹಾಗೂ ನಾಡಿನಾದ್ಯಂತ ಇರುವ ಅಭಿಮಾನಿಗಳಿಗೆ ಈ ನೋವು ಭರಿಸುವ ಶಕ್ತಿ ನೀಡಲಿ.
ಕಾವ್ಯವನ್ನೇ ಖಡ್ಗವನ್ನಾಗಿಸಿ ಸಾಮಾಜಿಕ ಸಮಾನತೆಯ ಹೋರಾಟವನ್ನು ಮುನ್ನಡೆಸಿದ್ದ ದಲಿತ ಕವಿ, ವಿಧಾನಪರಿಷತ್ನ ಮಾಜಿ ಸದಸ್ಯ ಮತ್ತು ನನ್ನ ಆತ್ಮೀಯ ಮಿತ್ರ ಸಿದ್ದಲಿಂಗಯ್ಯನವರ ಸಾವಿನಿಂದ ಆಘಾತಕ್ಕೀಡಾಗಿದ್ದೇನೆ.
— Siddaramaiah (@siddaramaiah) June 11, 2021
ಸಾವನ್ನು ಮೀರಿದ
ಸಾಹಿತ್ಯದ ಮೂಲಕ ಅವರು ಅಜರಾಮರ.
ಅವರ ಕುಟುಂಬದ ದುಃಖದಲ್ಲಿ ನಾನೂ ಭಾಗಿಯಾಗಿದ್ದೇನೆ. pic.twitter.com/ivXQqgzy84
ಬಂಡಾಯ ಸಾಹಿತ್ಯಕ್ಕೆ ಬಹುದೊಡ್ಡ ಕೊಡುಗೆ ನೀಡಿದ್ದ, ವಿಧಾನಪರಿಷತ್ ಸದಸ್ಯರಾಗಿಯೂ ಕಾರ್ಯನಿರ್ವಹಿಸಿದ್ದ ನಾಡಿನ ಹಿರಿಯ ಸಾಹಿತಿ ಡಾ. ಸಿದ್ದಲಿಂಗಯ್ಯ ಅವರ ನಿಧನ ಕನ್ನಡ ಸಾಹಿತ್ಯ ಲೋಕಕ್ಕೆ ತುಂಬಲಾರದ ನಷ್ಟ.
— Karnataka Congress (@INCKarnataka) June 11, 2021
ಅವರ ಆತ್ಮಕ್ಕೆ ಶಾಂತಿ ಕೋರುತ್ತಾ, ಅವರ ಕುಟುಂಬ ವರ್ಗ ಹಾಗೂ ಅಭಿಮಾನಿಗಳಿಗೆ ಅಗಲಿಕೆ ಭರಿಸುವ ಶಕ್ತಿ ಸಿಗಲಿ ಎಂದು ಪ್ರಾರ್ಥಿಸುತ್ತೇವೆ. pic.twitter.com/BQ8Jt9Bvrm