Home ಬೆಂಗಳೂರು ನಗರ NREGA | ನರೇಗ ಯೋಜನೆಯಡಿ ಮಾನವ ದಿನಗಳ ಹೆಚ್ಚಳ ಮಾಡಲು ಕೇಂದ್ರ ಗ್ರಾಮೀಣಾಭಿವೃದ್ಧಿ ಸಚಿವರಿಗೆ ಪ್ರಿಯಾಂಕ್‌...

NREGA | ನರೇಗ ಯೋಜನೆಯಡಿ ಮಾನವ ದಿನಗಳ ಹೆಚ್ಚಳ ಮಾಡಲು ಕೇಂದ್ರ ಗ್ರಾಮೀಣಾಭಿವೃದ್ಧಿ ಸಚಿವರಿಗೆ ಪ್ರಿಯಾಂಕ್‌ ಖರ್ಗೆ ಪತ್ರ

95
0
Karnataka High court summons minister Priyank Kharge in Election petition case
Karnataka Minister Priyank Kharge in Election petition case

ಬೆಂಗಳೂರು:

ಕರ್ನಾಟಕದಲ್ಲಿ ಈ ಬಾರಿ ಮುಂಗಾರು ಮಳೆಯ ತೀವ್ರ ಕೊರತೆಯಿಂದಾಗಿ ಬರ ಪರಿಸ್ಥಿತಿ ಎದುರಾಗಿದ್ದು, ರಾಜ್ಯ ಸರ್ಕಾರ ಈಗಾಗಲೆ 31 ಜಿಲ್ಲೆಗಳ 195 ತಾಲ್ಲೂಕುಗಳನ್ನು ಬರಪೀಡಿತ ಪ್ರದೇಶಗಳೆಂದು ಘೋಷಿಸಿರುವ ಹಿನ್ನೆಲೆಯಲ್ಲಿ ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ ಅಡಿ ಈಗ ನಿಗದಿ ಪಡಿಸಿರುವ 100 ದಿನಗಳ ಉದ್ಯೋಗ ಅವಧಿಯನ್ನು 150 ದಿನಗಳಿಗೆ ಏರಿಸಬೇಕು ಹಾಗೂ 1300 ಲಕ್ಷ ಮಾನವ ದಿನಗಳನ್ನು 1800 ಲಕ್ಷ ಮಾನವ ದಿನಗಳಿಗೆ ಏರಿಸಲು ಕೋರಿ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್‌ ರಾಜ್‌ ಮತ್ತು ಮಾಹಿತಿ ತಂತ್ರಜ್ಞಾನ ಸಚಿವರಾದ ಪ್ರಿಯಾಂಕ್‌ ಖರ್ಗೆ ಅವರು ಭಾರತ ಸರ್ಕಾರದ ಗ್ರಾಮೀಣಾಭಿವೃದ್ಧಿ ಸಚಿವರಾದ ಗಿರಿರಾಜ್ ಸಿಂಗ್ ಅವರಿಗೆ ಪತ್ರ ಬರೆದಿದ್ದಾರೆ.

ಕರ್ನಾಟಕ ರಾಜ್ಯವು ನರೇಗ ಕಾರ್ಯಕ್ರಮದಡಿ ಉದ್ಯೋಗ ಸೃಷ್ಟಿಯಲ್ಲಿ ಮತ್ತು ವೈಯಕ್ತಿಕ ಆಸ್ತಿಗಳ ಸೃಷ್ಟಿಯಲ್ಲಿ ಮುಂದಿದ್ದು, ಪ್ರಸಕ್ತ ಹಣಕಾಸು ವರ್ಷ ರಾಜ್ಯದಲ್ಲಿ13 ಕೋಟಿ ಮಾನವ ದಿನಗಳನ್ನು ನಿರ್ಮಾಣ ಮಾಡುವ ಗುರಿ ಇದ್ದು, ಇದುವರೆವಿಗೆ 8.48 ಕೋಟಿ ಮಾನವ ದಿನಗಳ ಉದ್ಯೋಗವನ್ನು ಸೃಷ್ಟಿಸಲಾಗಿದೆ ಎಂದು ಪತ್ರದಲ್ಲಿ ತಿಳಿಸಿರುವ ಸಚಿವರು ಬರಗಾಲದ ಪ್ರಚಲಿತ ಪರಿಸ್ಥಿತಿಗಳಿಂದಾಗಿ, ಗ್ರಾಮೀಣ ಪ್ರದೇಶಗಳಲ್ಲಿ ಉದ್ಯೋಗಕ್ಕೆ ಹೆಚ್ಚಿನ ಬೇಡಿಕೆಯಿದ್ದು, ಉದ್ಯೋಗದ ಅವಧಿಯನ್ನು ಈಗಾಗಲೇ ಸಲ್ಲಿಸಿರುವ ಪ್ರಸ್ತಾವನೆಯಂತೆ 100 ದಿನಗಳಿಂದ 150 ದಿನಗಳವರೆಗೆ ವಿಸ್ತರಿಸಲು ಕೋರಿದ್ದಾರೆ.

WhatsApp Image 2023 09 22 at 9.32.18 PM

ಬರ ಪೀಡಿತ ತಾಲ್ಲೂಕುಗಳಲ್ಲಿ ಪ್ರಸಕ್ತ ಹಣಕಾಸು ವರ್ಷ 1234 ಲಕ್ಷ ಮಾನವ ದಿನಗಳ ಗುರಿಯನ್ನು ಹೊಂದಲಾಗಿದ್ದು, ಉದ್ಯೋಗವನ್ನು 100ರಿಂದ 150 ದಿನಗಳವರೆಗೆ ವಿಸ್ತರಿಸುವುದರಿಂದ ಈ ತಾಲ್ಲೂಕುಗಳ ಕಾರ್ಮಿಕರಿಗೆ ಅನುಕೂಲವಾಗಲಿದೆ ಎಂದು ಸಚಿವರು ಹೇಳಿದ್ದಾರೆ. ಪ್ರಸಕ್ತ ಹಣಕಾಸು ವರ್ಷದ ಮೊದಲ ಐದೂವರೆ ತಿಂಗಳಲ್ಲಿ ರಾಜ್ಯದಲ್ಲಿ ತಿಂಗಳಿಗೆ ಸರಾಸರಿ 1.52 ಕೋಟಿ ಮಾನವ ದಿನಗಳ ಉದ್ಯೋಗ ಸೃಷ್ಟಿಯಾಗಿದೆ. ಪ್ರಸಕ್ತ ಹಣಕಾಸು ವರ್ಷದಲ್ಲಿ 1300 ಲಕ್ಷ ಮಾನವ ದಿನಗಳ ಅನುಮೋದಿತ ಕಾರ್ಮಿಕ ಬಜೆಟ್ ಶೀಘ್ರವಾಗಿ ಖಾಲಿಯಾಗಲಿದ್ದು ಇನ್ನೂ 500 ಲಕ್ಷ ಮಾನವ ದಿನಗಳ ಉದ್ಯೋಗ ಸೃಷ್ಟಿಯಾಗಲಿದೆ ಎಂದೂ ಸಚಿವ ಪ್ರಿಯಾಂಕ್‌ ಖರ್ಗೆ ಪತ್ರದಲ್ಲಿ ತಿಳಿಸಿದ್ದಾರೆ.

ರಾಜ್ಯದಲ್ಲಿ ಉಂಟಾಗಿರುವ ತೀವ್ರ ಬರ ಪರಿಸ್ಥಿತಿಯನ್ನು ಪರಿಗಣಿಸಿ ಬರ ಪೀಡಿತ ತಾಲ್ಲೂಕುಗಳಲ್ಲಿ ಉದ್ಯೋಗದ ಅವಧಿಯನ್ನು 100ರಿಂದ 150 ದಿನಗಳವರೆಗೆ ವಿಸ್ತರಿಸಲು ಮತ್ತು 2023-24ನೇ ಹಣಕಾಸು ವರ್ಷದಲ್ಲಿ ಕರ್ನಾಟಕಕ್ಕೆ ನಿಗದಿ ಮಾಡಲಾಗಿರುವ ಕಾರ್ಮಿಕ ಬಜೆಟ್‌ನ್ನು ಪರಿಷ್ಕರಿಸಿ 1300 ಲಕ್ಷ ಮಾನವ ದಿನಗಳಿಂದ 1800 ಲಕ್ಷ ಮಾನವ ದಿನಗಳಿಗೆ ಹೆಚ್ಚಿಸಬೇಕೆಂದು ಸಚಿವ ಖರ್ಗೆ ಕೋರಿದ್ದಾರೆ.

LEAVE A REPLY

Please enter your comment!
Please enter your name here