ಬೆಂಗಳೂರು: ವಾಯುವ್ಯ ರಸ್ತೆ ಸಾರಿಗೆ ಸಂಸ್ಥೆಗೆ ಕಿತ್ತೂರು ರಾಣಿ ಚನ್ನಮ್ಮ ಸಾರಿಗೆ ಸಂಸ್ಥೆ ಎಂದು ಮರುನಾಮಕರಣ ಮಾಡಲಾಗುವುದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಭಾನುವಾರ ಕಿತ್ತೂರು ಉತ್ಸವದಲ್ಲಿ ಘೋಷಿಸಿದರು.
ಚನ್ನಮ್ಮ ಫ್ರೀಡಂ ಪಾರ್ಕ್ ನಿರ್ಮಾಣಕ್ಕೆ ತಕ್ಷಣವೇ ಆದೇಶ ನೀಡಲಾಗುವುದು ಎಂದು ಶಿವಕುಮಾರ್ ತಿಳಿಸಿದರು. ಸ್ಥಳೀಯ ಶಾಸಕರ ಬೇಡಿಕೆಯಂತೆ ಮುಂದಿನ ಬಜೆಟ್ನಲ್ಲಿ ₹40 ಕೋಟಿ ಅನುದಾನ ನೀಡಲಾಗುವುದು ಎಂದರು.

₹520 ಕೋಟಿ ವೆಚ್ಚದ ಶ್ರೀ ಚನ್ನವೃಷಭೇಂದ್ರ ಏತ ನೀರಾವರಿ ಯೋಜನೆ ಸರ್ಕಾರದ ಚಿಂತನೆಯಲ್ಲಿದೆ ಎಂದು ಮುಖ್ಯಮಂತ್ರಿ ಹೇಳಿದರು.
ಕ್ಷೇತ್ರದಲ್ಲಿ 100 ಹಾಸಿಗೆಗಳ ಆಸ್ಪತ್ರೆ ಹಾಗೂ ₹300 ಕೋಟಿ ಮೊತ್ತದ ಲೋಕೋಪಯೋಗಿ ಇಲಾಖೆಯ ಕಾಮಗಾರಿಗಳು ಸೇರಿದಂತೆ ಸುಮಾರು ₹1,000 ಕೋಟಿ ವೆಚ್ಚದ ಯೋಜನೆಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು ಅವರು ತಿಳಿಸಿದರು.
