Home ರಾಜಕೀಯ ಎಚ್‌ಡಿಕೆ ಕುರಿತು ಆಕ್ಷೇಪಾರ್ಹ ಹೇಳಿಕೆ; ಜಮೀರ್ ಅವರನ್ನು ಸಚಿವ ಸ್ಥಾನದಿಂದ ವಜಾ ಮಾಡುವಂತೆ ಒಕ್ಕಲಿಗರ ಸಂಘ...

ಎಚ್‌ಡಿಕೆ ಕುರಿತು ಆಕ್ಷೇಪಾರ್ಹ ಹೇಳಿಕೆ; ಜಮೀರ್ ಅವರನ್ನು ಸಚಿವ ಸ್ಥಾನದಿಂದ ವಜಾ ಮಾಡುವಂತೆ ಒಕ್ಕಲಿಗರ ಸಂಘ ಆಗ್ರಹ

12
0

ಬೆಂಗಳೂರು : ‘ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಹಾಗೂ ಮಾಜಿ ಪ್ರಧಾನಿ ದೇವೇಗೌಡರ ಕುರಿತು ಅವಹೇಳನಕಾರಿ ಭಾಷೆಯಲ್ಲಿ ಟೀಕಿಸಿದ ಸಚಿವ ಝಮೀರ್ ಅಹ್ಮದ್ ಖಾನ್ ಕೂಡಲೇ ಕ್ಷಮೆ ಯಾಚಿಸಬೇಕು. ಅಲ್ಲದೆ, ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಬೇಕು’ ಎಂದು ರಾಜ್ಯ ಒಕ್ಕಲಿಗರ ಸಂಘದ ಅಧ್ಯಕ್ಷ ಸಿ.ಎನ್.ಬಾಲಕೃಷ್ಣ ಆಗ್ರಹಿಸಿದ್ದಾರೆ.

ಮಂಗಳವಾರ ಈ ಸಂಬಂಧ ಪ್ರಕಟಣೆ ನೀಡಿರುವ ಅವರು, ಝಮೀರ್ ಅಹ್ಮದ್ ಅವರು ನಿಂದನಾತ್ಮಕ ಭಾಷೆ ಬಳಸಿರುವುದನ್ನು ಸಂಘವು ತೀವ್ರವಾಗಿ ಖಂಡಿಸುತ್ತದೆ. ಝಮೀರ್ ಅವರು, ಕುಮಾರಸ್ವಾಮಿಗೆ ಮಾತ್ರ ಅಪಮಾನ ಮಾಡಿಲ್ಲ, ಒಕ್ಕಲಿಗ ಜನಾಂಗಕ್ಕೆ ಮಾಡಿರುವ ಅವಹೇಳನ. ಸಚಿವ ಸ್ಥಾನದಲ್ಲಿ ಇರುವವರಿಗೆ ಇದು ಶೋಭೆ ತರುವುದಿಲ್ಲ ಎಂದು ಆಕ್ಷೇಪಿಸಿದ್ದಾರೆ.

ಸಭ್ಯತೆಯ ಎಲ್ಲೆ ಮೀರಿ ಮಾತನಾಡುವ ವ್ಯಕ್ತಿ ಸಚಿವ ಸ್ಥಾನದಲ್ಲಿ ಮುಂದುವರೆಯಬಾರದು. ಬಣ್ಣದ ಬಗ್ಗೆ ಮಾತನಾಡಿ ಜನಾಂಗೀಯ ನಿಂದನೆ ಮಾಡಿರುವುದನ್ನು ಸಹಿಸಲು ಸಾಧ್ಯವಿಲ್ಲ. ರಾಜಕೀಯವಾಗಿ ಟೀಕೆ- ಟಿಪ್ಪಣಿ ಮಾಡಲು ಅಭ್ಯಂತರವಿಲ್ಲ. ಆದರೆ, ವ್ಯಕ್ತಿಗತ, ಸಮಾಜದ ಹಿತಕ್ಕೆ ಧಕ್ಕೆಯಾಗುವಂತೆ ಭಾಷೆ ಬಳಕೆ ಸರಿಯಲ್ಲ ಎಂದು ಬಾಲಕೃಷ್ಟ ಆಕ್ರೋಶ ವ್ಯಕ್ತಪಡಿಸಿದ್ದಾರೆ.

LEAVE A REPLY

Please enter your comment!
Please enter your name here