Retired DG-IGP Om Prakash Murder | ನಿವೃತ್ತ ಡಿಜಿ-ಐಜಿಪಿ ಓಂ ಪ್ರಕಾಶ್ ಪತ್ನಿ ತಪ್ಪೊಪ್ಪಿಗೆ: ಜಿ.ಪರಮೇಶ್ವರ್
ಬೆಂಗಳೂರು: ರಾಜ್ಯದ ನಿವೃತ್ತ ಡಿಜಿ, ಐಜಿಪಿ ಓಂ ಪ್ರಕಾಶ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅವರ ಪತ್ನಿಯೇ ಚಾಕುವಿನಿಂದ ಚುಚ್ಚಿ ಹತ್ಯೆ ಮಾಡಿರುವುದು ರಾಜ್ಯದಲ್ಲಿ ತೀವ್ರ ಸಂಚಲನ ಉಂಟುಮಾಡಿತ್ತು. ಸದ್ಯ ಘಟನೆಗೆ ಸಂಬಂಧಿಸಿದಂತೆ ಆರೋಪಿಯಾಗಿರುವ ಓಂ ಪ್ರಕಾಶ ಅವರ ಪತ್ನಿ ಪಲ್ಲವಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ನೀಡಿ 39 ನೇ ಎಸಿಎಂಎಂ ನ್ಯಾಯಾಲಯದಿಂದ ಆದೇಶ ಹೊರಡಿಸಿದೆ. ಸದ್ಯ ಆರೋಪಿ ಪಲ್ಲವಿಗೆ ಮೇ 3 ವರೆಗೂ ನ್ಯಾಯಾಂಗ ಬಂಧನಕ್ಕೆ ನೀಡಿ ಆದೇಶ ನೀಡಿದ್ದಾರೆ.
