Skip to content
ದಿ ಬೆಂಗಳೂರು ಲೈವ್ | ಕನ್ನಡ ಸುದ್ದಿ, ಬ್ರೇಕಿಂಗ್ ಅಪ್ಡೇಟ್ಸ್

ದಿ ಬೆಂಗಳೂರು ಲೈವ್ | ಕನ್ನಡ ಸುದ್ದಿ, ಬ್ರೇಕಿಂಗ್ ಅಪ್ಡೇಟ್ಸ್

ಇದು ನಿಮ್ಮ ಧ್ವನಿ

Primary Menu
  • ಮುಖಪುಟ
  • ಪ್ರಾಯೋಜಿತ
  • ಬೆಂಗಳೂರು ನಗರ
  • ಅಪರಾಧ
  • ರಾಜಕೀಯ
  • English News
  • Delhi News
  • ಕರ್ನಾಟಕ
  • ಶಿಕ್ಷಣ
  • ಕ್ರೀಡೆ
  • Home
  • ಆರೋಗ್ಯ
  • Omicron:ಮಾಲ್, ಥಿಯೇಟರ್ ಗೆ ತೆರಳುವವರು ಕಡ್ಡಾಯವಾಗಿ 2 ಡೋಸ್ ಲಸಿಕೆ ಪಡಿದಿರಬೇಕೆಂಬ ನಿಯಮ ಜಾರಿಗೊಳಿಸಿದ ಕರ್ನಾಟಕ ಸರ್ಕಾರ
  • ಬೆಂಗಳೂರು ನಗರ
  • ಆರೋಗ್ಯ

Omicron:ಮಾಲ್, ಥಿಯೇಟರ್ ಗೆ ತೆರಳುವವರು ಕಡ್ಡಾಯವಾಗಿ 2 ಡೋಸ್ ಲಸಿಕೆ ಪಡಿದಿರಬೇಕೆಂಬ ನಿಯಮ ಜಾರಿಗೊಳಿಸಿದ ಕರ್ನಾಟಕ ಸರ್ಕಾರ

The Bengaluru Live December 3, 2021 5:50 PM 1 minute read
Omicron: Karnataka Government mandates 2 dose vaccine for entering malls, theater

Omicron:ಮಾಲ್, ಥಿಯೇಟರ್ ಗೆ ತೆರಳುವವರು ಕಡ್ಡಾಯವಾಗಿ 2 ಡೋಸ್ ಲಸಿಕೆ ಪಡಿದಿರಬೇಕೆಂಬ ನಿಯಮ ಜಾರಿಗೊಳಿಸಿದ ಕರ್ನಾಟಕ ಸರ್ಕಾರ

📗 ಈ ಸುದ್ದಿಯನ್ನು ಇಂಗ್ಲಿಷ್‌ನಲ್ಲಿ ಓದಿ

ಶಾಲೆಗೆ ಕಳಿಸುವ ವಿದ್ಯಾರ್ಥಿಗಳ ಪೋಷಕರಿಗೆ ಹಾಗೂ ಬೋಧಕ ಸಿಬ್ಬಂದಿಗಳಿಗೆ 2 ಡೊಸ್ ಲಸಿಕೆ ಕಡ್ಡಾಯ ; ಜನವರಿ 15 ವರೆಗೂ ಶಾಲಾ ಕಾಲೇಜುಗಳಲ್ಲಿ ಯಾವುದೇ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನಡೆಸುವಂತಿಲ್ಲ

ಬೆಂಗಳೂರು:

ದಕ್ಷಿಣ ಆಫ್ರಿಕಾದಿಂದ ಬಂದಿದ್ದವರ ಪೈಕಿ ಇಬ್ಬರಿಗೆ ಓಮಿಕ್ರಾನ್ ಕೊರೋನಾ ರೂಪಾಂತರಿ ಸೋಂಕು ಪತ್ತೆಯಾಗಿರುವ ಹಿನ್ನೆಲೆಯಲ್ಲಿ ಸೋಂಕು ತಡೆಗೆ ರಾಜ್ಯ ಸರ್ಕಾರ ಮಾರ್ಗಸೂಚಿಗಳನ್ನು ಪ್ರಕಟಿಸಿದೆ — ಮಾಲ್, ಥಿಯೇಟರ್ ಗೆ ತೆರಳುವವರು ಕಡ್ಡಾಯವಾಗಿ 2 ಡೋಸ್ ಲಸಿಕೆ ಪಡಿದಿರಬೇಕೆಂಬ ನಿಯಮ ಜಾರಿಗೊಳಿಸಲಾಗಿದೆ. ಶಾಲಾ ಕಾಲೇಜುಗಳಲ್ಲಿ ಕೊರೋನಾ ಹೆಚ್ಚು ಪತ್ತೆಯಾಗಿರುವ ಹಿನ್ನೆಲೆಯಲ್ಲಿ ಮಕ್ಕಳನ್ನು ಶಾಲೆಗೆ ಕಳಿಸುವ ವಿದ್ಯಾರ್ಥಿಗಳ ಪೋಷಕರಿಗೆ ಹಾಗೂ ಬೋಧಕ ಸಿಬ್ಬಂದಿಗಳಿಗೆ 2 ಡೊಸ್ ಲಸಿಕೆ ಕಡ್ಡಾಯಗೊಳಿಸಲಾಗಿದೆ ಹಾಗೂ 2022 ರ ಜನವರಿ 15 ವರೆಗೂ ಶಾಲಾ ಕಾಲೇಜುಗಳಲ್ಲಿ ಯಾವುದೇ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನಡೆಸುವಂತಿಲ್ಲ, ಎಂದು ಸರ್ಕಾರ ಘೋಷಿಸಿದೆ.

ಕೊರೋನಾ ತಡೆಗೆ ಸಿಎಂ ನಡೆಸಿದ ಉನ್ನತಮಟ್ಟದ ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಕಂದಾಯ ಸಚಿವ ಆರ್ ಅಶೋಕ್ ಇನ್ನು ಮದುವೆ ಸಮಾರಂಭಗಳಿಗೂ ರಾಜ್ಯ ಸರ್ಕಾರ ನಿರ್ಬಂಧ ವಿಧಿಸಿದ್ದು, 500 ಜನಕ್ಕಿಂತ ಹೆಚ್ಚು ಸೇರಬಾರದು ಎಂಬ ನಿಯಮ ಜಾರಿಗೆ ಬಂದಿದೆ.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಇಂದು ಬೆಂಗಳೂರಿನಲ್ಲಿ ಕೋವಿಡ್ ೧೯ ನಿಯಂತ್ರಿಸಲು ಕ್ರಮ ಕೈಗೊಳ್ಳುವ ಕುರಿತಂತೆ ಚರ್ಚಿಸಲು ಸಭೆ ಆಯೋಜಿಸಲಾಗಿತ್ತು. ಸಭೆಯಲ್ಲಿ ಸಚಿವರಾದ ಗೋವಿಂದ ಕಾರಜೋಳ, ಡಾ. ಸುಧಾಕರ್ , ಡಾ. ಅಶ್ವತ್ಥ ನಾರಾಯಣ, ಮುಖ್ಯಮಂತ್ರಿ ಗಳ ಪ್ರಧಾನ ಕಾರ್ಯದರ್ಶಿ ಮಂಜುನಾಥ ಪ್ರಸಾದ, ಬಿಬಿಎಂಪಿ ಮುಖ್ಯ ಆಯುಕ್ತ ಗೌರವ ಗುಪ್ತಾ, ತಜ್ಞ ವೈದ್ಯರಾದ ಡಾ. ಸುಧಾಕರ ಸೇರಿದಂತೆ ವಿವಿಧ ಇಲಾಖೆಗಳ ಹಿರಿಯ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.

Omicron: Karnataka Government mandates 2 dose vaccine for entering malls, theater
Omicron: Karnataka Government mandates 2 dose vaccine for entering malls, theater
Omicron: Karnataka Government mandates 2 dose vaccine for entering malls, theater

ಓಮಿಕ್ರಾನ್ ರೂಪಾಂತರಿ ವೈರಸ್ ನಿಂದ ಕೋವಿಡ್ ಸೋಂಕು ಪತ್ತೆಯಾಗಿರುವ ಹಿನ್ನೆಲೆಯಲ್ಲಿ ಕೈಗೊಳ್ಳಬೇಕಾದ ಕ್ರಮಗಳ ಕುರಿತು ನಡೆದ ಪರಿಣತರು ಮತ್ತು ಹಿರಿಯ ಅಧಿಕಾರಿಗಳ ಸಭೆಯ ಮುಖ್ಯಾಂಶಗಳು:

  1. ಓಮಿಕ್ರಾನ್ ರೂಪಾಂತರಿ ತಳಿಯ ವೈರಸ್ ನಿಂದ ಎರಡು ಕೋವಿಡ್ ಪ್ರಕರಣಗಳು ರಾಜ್ಯದಲ್ಲಿ ಪತ್ತೆಯಾಗಿದೆ. ಇಡೀ ವಿಶ್ವದಲ್ಲಿ ಸುಮಾರು 400 ಪ್ರಕರಣಗಳು ಈ ವರೆಗೆ ವರದಿಯಾಗಿದೆ.
  2. ಅಧಿಕೃತವಾಗಿ ಈ ಪ್ರಕರಣಗಳ ಕುರಿತು ಯಾವುದೇ ಅಧ್ಯಯನ ವರದಿ ಬಂದಿಲ್ಲ. ಆದರೆ ಅನೌಪಚಾರಿಕವಾಗಿ ದೊರೆತ ಮಾಹಿತಿಯ ಪ್ರಕಾರ ಈ ವೈರಸ್ ಸೋಂಕು ಹೆಚ್ಚು ತೀವ್ರ ಪರಿಣಾಮ ಬೀರಿಲ್ಲ. ಸೋಂಕಿತರಿಗೆ mild symptoms ಕಂಡು ಬಂದಿದೆ. ಸಾವಿನ ಪ್ರಕರಣಗಳು ವರದಿಯಾಗಿಲ್ಲ.
  3. ಈಗ ವರದಿಯಾಗಿರುವ ಎರಡೂ ಪ್ರಕರಣಗಳ ಪರೀಕ್ಷಾ ವರದಿಯನ್ನು ವಿಶ್ಲೇಷಿಸಿ ಸಲಹೆ ನೀಡುವಂತೆ ತಾಂತ್ರಿಕ ಸಲಹಾ ಸಮಿತಿ ಸದಸ್ಯರಿಗೆ ತಿಳಿಸಿದರು.
  4. ಭಾರತ ಸರ್ಕಾರಕ್ಕೆ ಪತ್ರ ಬರೆದು, ಎನ್ ಸಿ ಬಿ ಎಸ್ ಪ್ರಯೋಗಾಲಯದ ವಿವರವಾದ ವರದಿ ಒದಗಿಸುವಂತೆ ಮನವಿ ಮಾಡಲಾಗುವುದು.
  5. ಅದಾಗ್ಯೂ ಕಟ್ಟುನಿಟ್ಟಿನ ಮುನ್ನೆಚ್ಚರಿಕೆ ಕ್ರಮಗಳನ್ನು ವಹಿಸುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ.
  6. ವಿಮಾನ ನಿಲ್ದಾಣದಲ್ಲಿ ಅಂತರರಾಷ್ಟ್ರೀಯ ಪ್ರಯಾಣಿಕರಿಗೆ ಪರೀಕ್ಷೆ ನಡೆಸಿ, ನೆಗೇಟಿವ್ ವರದಿ ಬಂದ ನಂತರವೇ ಹೊರಗೆ ಕಳುಹಿಸಲಾಗುವುದು. ಪ್ರಯಾಣಿಕರ ಅನುಕೂಲಕ್ಕಾಗಿ ಪರೀಕ್ಷಾ ಯಂತ್ರಗಳನ್ನು ಹೆಚ್ಚುವರಿಯಾಗಿ ಅಳವಡಿಸಲಾಗುತ್ತಿದೆ. ಏರ್ ಲೈನ್ ಸಂಸ್ಥೆಗಳೊಂದಿಗೆ ಮಾತುಕತೆ ನಡೆಸಿ, ಪ್ರಯಾಣಿಕರಿಗೆ ಅರಿವು ಮೂಡಿಸುವಂತೆ ಸೂಚಿಸಲಾಗಿದೆ.
  7. ಒಮಿಕ್ರಾನ್ ಜೊತೆಗೆ ಈಗಾಗಲೇ ಕಂಡು ಬಂದಿರುವ ಡೆಲ್ಟಾ ವೈರಸ್ ಸೋಂಕಿನ ಕುರಿತು ಸಹ ಮುನ್ನೆಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ.
  8. ಸಿನೆಮಾ, ಮಾಲ್ ಗಳಿಗೆ ಭೇಟಿ ನೀಡುವವರಿಗೆ, ಶಾಲೆಗೆ ಹಾಜರಾಗುವ ಮಕ್ಕಳ ಪೋಷಕರಿಗೆ ಲಸಿಕೆ ಪಡೆಯುವುದು ಕಡ್ಡಾಯ ಮಾಡಲಾಗುವುದು.
  9. ಸರ್ಕಾರಿ ನೌಕರರಿಗೆ ಲಸಿಕೆ ಪಡೆಯುವುದು ಕಡ್ಡಾಯಗೊಳಿಸಲಾಗುವುದು.
  10. ನರ್ಸಿಂಗ್, ಅರೆವೈದ್ಯಕೀಯ ತರಬೇತಿ ಸಂಸ್ಥೆಗಳಲ್ಲಿ ಶೇ. 100 ರಷ್ಟು ಪರೀಕ್ಷೆ ನಡೆಸುವುದು. 65 ವರ್ಷ ಮೇಲಿನ ವ್ಯಕ್ತಿಗಳು ಹಾಗೂ ಇತರ ಆರೋಗ್ಯ ಸಮಸ್ಯೆ ಇರುವ ವ್ಯಕ್ತಿಗಳಿಗೆ ಸಹ ಪರೀಕ್ಷೆ ನಡೆಸಲಾಗುವುದು.
  11. ಶಾಲೆ, ಕಾಲೇಜುಗಳಲ್ಲಿ ಸಭೆ ಸಮಾರಂಭಗಳನ್ನು ನಡೆಸಲು ಅವಕಾಶವಿಲ್ಲ.
  12. ಯಾವುದೇ ಸಮ್ಮೇಳನ, ಮದುವೆ ಮತ್ತಿತರ ಕಾರ್ಯಕ್ರಮ, ಸಭೆ ಸಮಾರಂಭಗಳಲ್ಲಿ ಸೇರುವ ಜನರ ಸಂಖ್ಯೆಯನ್ನು 500ಕ್ಕೆ ಸೀಮಿತಗೊಳಿಸಲಾಗುವುದು.
  13. ಶಾಲೆಗಳಲ್ಲಿ ಸದ್ಯಕ್ಕೆ ತರಗತಿಗಳನ್ನು ಯಥಾಸ್ಥಿತಿಯಲ್ಲಿ ಮುಂದುವರೆಸಲಾಗುವುದು. ಅದಾಗ್ಯೂ ಶಾಲೆಗಳಲ್ಲಿ ತೀವ್ರ ನಿಗಾ ವಹಿಸಲು ಸೂಚಿಸಲಾಗಿದೆ.
  14. ಪರೀಕ್ಷಾ ಸಾಮರ್ಥ್ಯ ಹಾಗೂ ಪರೀಕ್ಷಾ ಪ್ರಮಾಣದ ಗುರಿ ಹೆಚ್ಚಿಸಲಾಗುವುದು. (increased to 1 lakh) ವಿಶೇಷವಾಗಿ ಆರೋಗ್ಯ ಕಾರ್ಯಕರ್ತರ ಪರೀಕ್ಷೆ ಹೆಚ್ಚಿಸಬೇಕೆಂದು ಸೂಚನೆ ನೀಡಲಾಗಿದೆ. ಇದಕ್ಕೆ ಅಗತ್ಯ ಮಾನವ ಸಂಪನ್ಮೂಲ ಒದಗಿಸಲು ತೀರ್ಮಾನಿಸಲಾಯಿತು.
  15. ಆರೋಗ್ಯ ಇಲಾಖೆ ಚಿಕಿತ್ಸಾ ಸೌಲಭ್ಯ ಒದಗಿಸಲು ಸಿದ್ಧತೆ ನಡೆಸಿಕೊಳ್ಳಬೇಕು. ಆಕ್ಸಿಜನೇಟೆಡ್ ಬೆಡ್ ಗಳನ್ನು ಸಜ್ಜುಗೊಳಿಸಬೇಕು; ಆಕ್ಸಿಜನ್ ಪ್ಲಾಂಟ್ ಗಳನ್ನು ಸಜ್ಜುಗೊಳಿಸಬೇಕು ಎಂದು ಸೂಚಿಸಲಾಗಿದೆ.
  16. ಆಕ್ಸಿಜನ್ ಲಭ್ಯತೆ, ಸಾಗಾಣಿಕೆ, ಪೂರೈಕೆ ಜಾಲವನ್ನು ಜಾಗೃತಗೊಳಿಸಬೇಕು.
  17. ಔಷಧಗಳ ಲಭ್ಯತೆ ಖಾತರಿಪಡಿಸಿಕೊಳ್ಳುವಂತೆ ಸೂಚಿಸಲಾಗಿದೆ.
  18. ಸಂಪರ್ಕಿತರ ಪತ್ತೆಯ ಪ್ರಮಾಣ ಹೆಚ್ಚಿಸಲು ಸೂಚಿಸಲಾಗಿದೆ.
  19. ರಾಜ್ಯಾದ್ಯಂತ ನಿಯಂತ್ರಣ ಕೊಠಡಿ ಪ್ರಾರಂಭಿಸಲು ನಿರ್ಧರಿಸಲಾಯಿತು.
  20. ದಕ್ಷಿಣ ಆಫ್ರಿಕಾದಿಂದ ಪ್ರಯಾಣಿಸಿದ ಒಮಿಕ್ರಾನ್ ವೈರಸ್ ಸೋಂಕಿತ ವ್ಯಕ್ತಿಯ ಪರೀಕ್ಷಾ ವರದಿಗಳಲ್ಲಿ ವೈರುಧ್ಯ ಕಂಡು ಬಂದಿರುವ ಕುರಿತು ಕೂಲಂಕಷ ತನಿಖೆ ನಡೆಸುವಂತೆ ಹೈ ಗ್ರೌಂಡ್ ಪೊಲೀಸರಿಗೆ ಸೂಚಿಸಲಾಯಿತು.

Also Read: Omicron fallout: Karnataka tightens Covid precautions

About the Author

The Bengaluru Live

Administrator

Visit Website View All Posts

Post navigation

Previous: ರಾಜ್ಯದಲ್ಲಿ ಒಮಿಕ್ರಾನ್ ಪ್ರಕರಣ ವರದಿ: ನಾಳೆ ತಜ್ಞರೊಂದಿಗೆ ಸಭೆ
Next: ಬಿಬಿಎಂಪಿ ಕೇಂದ್ರ ಕಚೇರಿಯಲ್ಲಿ ನಿಲ್ಲಿಸಿದ್ದ ಮರ್ಸಿಡಿಸ್ ಬೆಂಜ್ ನಿಂದ 5 ಲಕ್ಷ ರೂ ಕಳುವು

Related Stories

ಬೆಂಗಳೂರು ಉತ್ತರ ನಗರ ಪಾಲಿಕೆಯ ಫೋನ್‌-ಇನ್ ಕಾರ್ಯಕ್ರಮದಲ್ಲಿ ಲ್ಯಾಂಡ್‌ಲೈನ್ ಫೋನ್‌ಗಳು ಮತ್ತು ಕಡತಗಳಿರುವ ಸಭಾ ಮೇಜಿನ ಸುತ್ತ ಕುಳಿತ ಅಧಿಕಾರಿಗಳು
  • ಬೆಂಗಳೂರು ನಗರ

ಬೆಂಗಳೂರು ಉತ್ತರ ಪಾಲಿಕೆ ಫೋನ್‌-ಇನ್‌ಗೆ 43 ದೂರು, ರಸ್ತೆ ನಿರ್ವಹಣೆ ಕುರಿತು 20

The Bengaluru Live November 13, 2026 11:05 PM
ಜಕ್ಕೂರಿನ ಶ್ರೀರಾಮಪುರ ಕ್ರಾಸ್ ರಸ್ತೆಯಲ್ಲಿ ದುರಸ್ತಿ ನಡೆಸುತ್ತಿರುವ ಕಾರ್ಮಿಕರು
  • Uncategorized
  • ಬೆಂಗಳೂರು ನಗರ

ಬೆಂಗಳೂರು ಉತ್ತರ ವಾರ್ಡ್ ಒನ್ ಅಭಿಯಾನದಲ್ಲಿ 30 ಕಸದ ಬ್ಲ್ಯಾಕ್‌ಸ್ಪಾಟ್‌ ತೆರವು, 10 ರಸ್ತೆ ಗುಂಡಿ ದುರಸ್ತಿ

The Bengaluru Live November 13, 2026 7:55 PM
ಬೆಂಗಳೂರಿನ ಶ್ರೀ ಕಂಠೀರವ ಒಳಾಂಗಣ ಕ್ರೀಡಾಂಗಣದ ಮುಂಭಾಗ
  • ಕ್ರೀಡೆ
  • ಬೆಂಗಳೂರು ನಗರ

ಬೆಂಗಳೂರಿನಲ್ಲಿ ನವೆಂಬರ್‌ 14ರಿಂದ ಐದನೇ ಮಿನಿ ಕರ್ನಾಟಕ ಕ್ರೀಡಾಕೂಟ

The Bengaluru Live November 13, 2026 7:40 PM

Latest Post

ಬೆಂಗಳೂರು ಉತ್ತರ ಪಾಲಿಕೆ ಫೋನ್‌-ಇನ್‌ಗೆ 43 ದೂರು, ರಸ್ತೆ ನಿರ್ವಹಣೆ ಕುರಿತು 20 ಬೆಂಗಳೂರು ಉತ್ತರ ನಗರ ಪಾಲಿಕೆಯ ಫೋನ್‌-ಇನ್ ಕಾರ್ಯಕ್ರಮದಲ್ಲಿ ಲ್ಯಾಂಡ್‌ಲೈನ್ ಫೋನ್‌ಗಳು ಮತ್ತು ಕಡತಗಳಿರುವ ಸಭಾ ಮೇಜಿನ ಸುತ್ತ ಕುಳಿತ ಅಧಿಕಾರಿಗಳು
  • ಬೆಂಗಳೂರು ನಗರ

ಬೆಂಗಳೂರು ಉತ್ತರ ಪಾಲಿಕೆ ಫೋನ್‌-ಇನ್‌ಗೆ 43 ದೂರು, ರಸ್ತೆ ನಿರ್ವಹಣೆ ಕುರಿತು 20

November 13, 2026 11:05 PM
ಬೆಂಗಳೂರು–ಮಡಗಾಂವ್ ವಂದೇ ಭಾರತ್‌ಗೆ ಮೋದಿ ಚಾಲನೆ, ಕರ್ನಾಟಕದ ನಾಲ್ಕು ರೈಲು ನಿಲ್ದಾಣಗಳ ಉದ್ಘಾಟನೆ ಬೆಂಗಳೂರಿನ ಎಸ್‌ಎಂವಿಟಿ ಚಾಲನಾ ಕಾರ್ಯಕ್ರಮದಲ್ಲಿ ವಂದೇ ಭಾರತ್ ರೈಲಿನ ಪಕ್ಕದಲ್ಲಿ ನಿಂತ ಗಣ್ಯರು
  • Uncategorized
  • ಕರ್ನಾಟಕ

ಬೆಂಗಳೂರು–ಮಡಗಾಂವ್ ವಂದೇ ಭಾರತ್‌ಗೆ ಮೋದಿ ಚಾಲನೆ, ಕರ್ನಾಟಕದ ನಾಲ್ಕು ರೈಲು ನಿಲ್ದಾಣಗಳ ಉದ್ಘಾಟನೆ

November 13, 2026 10:11 PM
ಬೆಂಗಳೂರು ಉತ್ತರ ವಾರ್ಡ್ ಒನ್ ಅಭಿಯಾನದಲ್ಲಿ 30 ಕಸದ ಬ್ಲ್ಯಾಕ್‌ಸ್ಪಾಟ್‌ ತೆರವು, 10 ರಸ್ತೆ ಗುಂಡಿ ದುರಸ್ತಿ ಜಕ್ಕೂರಿನ ಶ್ರೀರಾಮಪುರ ಕ್ರಾಸ್ ರಸ್ತೆಯಲ್ಲಿ ದುರಸ್ತಿ ನಡೆಸುತ್ತಿರುವ ಕಾರ್ಮಿಕರು
  • Uncategorized
  • ಬೆಂಗಳೂರು ನಗರ

ಬೆಂಗಳೂರು ಉತ್ತರ ವಾರ್ಡ್ ಒನ್ ಅಭಿಯಾನದಲ್ಲಿ 30 ಕಸದ ಬ್ಲ್ಯಾಕ್‌ಸ್ಪಾಟ್‌ ತೆರವು, 10 ರಸ್ತೆ ಗುಂಡಿ ದುರಸ್ತಿ

November 13, 2026 7:55 PM
ಬೆಂಗಳೂರಿನಲ್ಲಿ ನವೆಂಬರ್‌ 14ರಿಂದ ಐದನೇ ಮಿನಿ ಕರ್ನಾಟಕ ಕ್ರೀಡಾಕೂಟ ಬೆಂಗಳೂರಿನ ಶ್ರೀ ಕಂಠೀರವ ಒಳಾಂಗಣ ಕ್ರೀಡಾಂಗಣದ ಮುಂಭಾಗ
  • ಕ್ರೀಡೆ
  • ಬೆಂಗಳೂರು ನಗರ

ಬೆಂಗಳೂರಿನಲ್ಲಿ ನವೆಂಬರ್‌ 14ರಿಂದ ಐದನೇ ಮಿನಿ ಕರ್ನಾಟಕ ಕ್ರೀಡಾಕೂಟ

November 13, 2026 7:40 PM
ಚಿಕ್ಕಪೇಟೆ ವಿಭಾಗದಲ್ಲಿ ಏಕಬಳಕೆ ಪ್ಲಾಸ್ಟಿಕ್ ನಿಯಮ ಉಲ್ಲಂಘನೆ: ಝೆಪ್ಟೊಗೆ ₹25,000 ದಂಡ ಚಿಕ್ಕಪೇಟೆಯಲ್ಲಿ ಏಕಬಳಕೆ ಪ್ಲಾಸ್ಟಿಕ್ ಉಲ್ಲಂಘನೆಗಾಗಿ ಝೆಪ್ಟೊ ಅಂಗಡಿಯಲ್ಲಿ ಜಿಬಿಎ ಅಧಿಕಾರಿಗಳ ತಪಾಸಣೆ
  • ಬೆಂಗಳೂರು ನಗರ

ಚಿಕ್ಕಪೇಟೆ ವಿಭಾಗದಲ್ಲಿ ಏಕಬಳಕೆ ಪ್ಲಾಸ್ಟಿಕ್ ನಿಯಮ ಉಲ್ಲಂಘನೆ: ಝೆಪ್ಟೊಗೆ ₹25,000 ದಂಡ

November 13, 2026 4:40 PM
ಸರ್ಜಾಪುರ–ಹೆಬ್ಬಾಳ ಮೆಟ್ರೋ ಮಾರ್ಗಕ್ಕೆ ಶೀಘ್ರ ಅನುಮೋದನೆ ನೀಡುವಂತೆ ಪ್ರಧಾನಿ ಮೋದಿಗೆ ಶಿವಕುಮಾರ್ ಮನವಿ IIM ಬೆಂಗಳೂರಿನಲ್ಲಿ ಭಾಷಣ ಮಾಡುತ್ತಿರುವ ಸಿಎಂ ಡಿ.ಕೆ. ಶಿವಕುಮಾರ್
  • ಬೆಂಗಳೂರು ನಗರ
  • ರಾಜಕೀಯ

ಸರ್ಜಾಪುರ–ಹೆಬ್ಬಾಳ ಮೆಟ್ರೋ ಮಾರ್ಗಕ್ಕೆ ಶೀಘ್ರ ಅನುಮೋದನೆ ನೀಡುವಂತೆ ಪ್ರಧಾನಿ ಮೋದಿಗೆ ಶಿವಕುಮಾರ್ ಮನವಿ

November 13, 2026 4:22 PM

ನೀವು ತಪ್ಪಿಸಿಕೊಂಡಿರಬಹುದು

ಬೆಂಗಳೂರು ಉತ್ತರ ನಗರ ಪಾಲಿಕೆಯ ಫೋನ್‌-ಇನ್ ಕಾರ್ಯಕ್ರಮದಲ್ಲಿ ಲ್ಯಾಂಡ್‌ಲೈನ್ ಫೋನ್‌ಗಳು ಮತ್ತು ಕಡತಗಳಿರುವ ಸಭಾ ಮೇಜಿನ ಸುತ್ತ ಕುಳಿತ ಅಧಿಕಾರಿಗಳು
  • ಬೆಂಗಳೂರು ನಗರ

ಬೆಂಗಳೂರು ಉತ್ತರ ಪಾಲಿಕೆ ಫೋನ್‌-ಇನ್‌ಗೆ 43 ದೂರು, ರಸ್ತೆ ನಿರ್ವಹಣೆ ಕುರಿತು 20

The Bengaluru Live November 13, 2026 11:05 PM
ಬೆಂಗಳೂರಿನ ಎಸ್‌ಎಂವಿಟಿ ಚಾಲನಾ ಕಾರ್ಯಕ್ರಮದಲ್ಲಿ ವಂದೇ ಭಾರತ್ ರೈಲಿನ ಪಕ್ಕದಲ್ಲಿ ನಿಂತ ಗಣ್ಯರು
  • Uncategorized
  • ಕರ್ನಾಟಕ

ಬೆಂಗಳೂರು–ಮಡಗಾಂವ್ ವಂದೇ ಭಾರತ್‌ಗೆ ಮೋದಿ ಚಾಲನೆ, ಕರ್ನಾಟಕದ ನಾಲ್ಕು ರೈಲು ನಿಲ್ದಾಣಗಳ ಉದ್ಘಾಟನೆ

The Bengaluru Live November 13, 2026 10:11 PM
ಜಕ್ಕೂರಿನ ಶ್ರೀರಾಮಪುರ ಕ್ರಾಸ್ ರಸ್ತೆಯಲ್ಲಿ ದುರಸ್ತಿ ನಡೆಸುತ್ತಿರುವ ಕಾರ್ಮಿಕರು
  • Uncategorized
  • ಬೆಂಗಳೂರು ನಗರ

ಬೆಂಗಳೂರು ಉತ್ತರ ವಾರ್ಡ್ ಒನ್ ಅಭಿಯಾನದಲ್ಲಿ 30 ಕಸದ ಬ್ಲ್ಯಾಕ್‌ಸ್ಪಾಟ್‌ ತೆರವು, 10 ರಸ್ತೆ ಗುಂಡಿ ದುರಸ್ತಿ

The Bengaluru Live November 13, 2026 7:55 PM
ಬೆಂಗಳೂರಿನ ಶ್ರೀ ಕಂಠೀರವ ಒಳಾಂಗಣ ಕ್ರೀಡಾಂಗಣದ ಮುಂಭಾಗ
  • ಕ್ರೀಡೆ
  • ಬೆಂಗಳೂರು ನಗರ

ಬೆಂಗಳೂರಿನಲ್ಲಿ ನವೆಂಬರ್‌ 14ರಿಂದ ಐದನೇ ಮಿನಿ ಕರ್ನಾಟಕ ಕ್ರೀಡಾಕೂಟ

The Bengaluru Live November 13, 2026 7:40 PM

ನಮ್ಮ ಕುರಿತು

ಬೆಂಗಳೂರು ಲೈವ್ ಬೆಂಗಳೂರು ಮತ್ತು ಕರ್ನಾಟಕವನ್ನು ಕೇಂದ್ರೀಕರಿಸಿ ಇಂಗ್ಲಿಷ್ ಮತ್ತು ಕನ್ನಡದಲ್ಲಿ ಸುದ್ದಿ ಹಾಗೂ ಮಾಹಿತಿಯನ್ನು ಪ್ರಕಟಿಸುವ ಸ್ವತಂತ್ರ ಡಿಜಿಟಲ್ ಸುದ್ದಿ ಪ್ರಕಟಣೆಯಾಗಿದೆ. ಇದು ಫೆಬ್ರವರಿ 2020ರಿಂದ ಕಾರ್ಯನಿರ್ವಹಿಸುತ್ತಿದೆ.

ಉಪಯುಕ್ತ ಕೊಂಡಿಗಳು

  • ಬೆಂಗಳೂರು ಲೈವ್ ಕುರಿತು
  • ಸಂಪರ್ಕಿಸಿ
  • ಸಂಪಾದಕೀಯ ಮಾನದಂಡಗಳು ಮತ್ತು ತಿದ್ದುಪಡಿ ನೀತಿ
  • ಪ್ರಕಾಶಕರು, ಸಂಪಾದಕೀಯ ಹೊಣೆಗಾರಿಕೆ ಮತ್ತು ದೂರು ಪರಿಹಾರ
  • ಮಾಲೀಕತ್ವ ಮತ್ತು ಹಣಕಾಸು ಪಾರದರ್ಶಕತೆ
  • ನಮ್ಮೊಂದಿಗೆ ಜಾಹೀರಾತು ನೀಡಿ
  • ಗೌಪ್ಯತಾ ನೀತಿ
  • ಸೇವಾ ನಿಯಮಗಳು
  • ಪತ್ರಿಕಾ ಪ್ರಕಟಣೆ ಸಲ್ಲಿಸಿ

ಇತ್ತೀಚಿನ ಸುದ್ದಿಗಳು

  • ಬೆಂಗಳೂರು ಉತ್ತರ ಪಾಲಿಕೆ ಫೋನ್‌-ಇನ್‌ಗೆ 43 ದೂರು, ರಸ್ತೆ ನಿರ್ವಹಣೆ ಕುರಿತು 20
  • ಬೆಂಗಳೂರು–ಮಡಗಾಂವ್ ವಂದೇ ಭಾರತ್‌ಗೆ ಮೋದಿ ಚಾಲನೆ, ಕರ್ನಾಟಕದ ನಾಲ್ಕು ರೈಲು ನಿಲ್ದಾಣಗಳ ಉದ್ಘಾಟನೆ
  • ಬೆಂಗಳೂರು ಉತ್ತರ ವಾರ್ಡ್ ಒನ್ ಅಭಿಯಾನದಲ್ಲಿ 30 ಕಸದ ಬ್ಲ್ಯಾಕ್‌ಸ್ಪಾಟ್‌ ತೆರವು, 10 ರಸ್ತೆ ಗುಂಡಿ ದುರಸ್ತಿ
  • ಬೆಂಗಳೂರಿನಲ್ಲಿ ನವೆಂಬರ್‌ 14ರಿಂದ ಐದನೇ ಮಿನಿ ಕರ್ನಾಟಕ ಕ್ರೀಡಾಕೂಟ
©Copyright 2025 The Bengaluru Live All rights reserved. | MoreNews by AF themes.