Home ರಾಜಕೀಯ ಜೂನ್ 22 ರಂದು ಕರ್ನಾಟಕದ ಎನ್‍ಡಿಎ ಸಂಸದರ ಸನ್ಮಾನ

ಜೂನ್ 22 ರಂದು ಕರ್ನಾಟಕದ ಎನ್‍ಡಿಎ ಸಂಸದರ ಸನ್ಮಾನ

34
0

ಬೆಂಗಳೂರು: ನಾಳೆ (ಜೂನ್ 22) ಬೆಳಿಗ್ಗೆ 11 ಗಂಟೆಗೆ ಬೆಂಗಳೂರಿನ ಅರಮನೆ ಮೈದಾನದಲ್ಲಿ (ಪ್ಯಾಲೇಸ್ ಗ್ರೌಂಡ್) ರಾಜ್ಯದ 19 ಜನ ಎನ್‍ಡಿಎ ಸಂಸದರ ಸನ್ಮಾನ, ರಾಜ್ಯದ ಕೇಂದ್ರ ಸಚಿವರ ಅಭಿನಂದನೆ ಕಾರ್ಯಕ್ರಮ ನಡೆಯಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ತಿಳಿಸಿದರು.

ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ವಿಶ್ವ ಯೋಗ ದಿನಾಚರಣೆಯ ಸಂದರ್ಭದಲ್ಲಿ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ರಾಜ್ಯದಿಂದ ದೆಹಲಿಗೆ ಹೋಗಿ ದೇಶ- ರಾಜ್ಯದ ಸೇವೆ ಮಾಡುತ್ತಿರುವ ಮತ್ತು ಅಭಿವೃದ್ಧಿಗೆ ಶ್ರಮಿಸುತ್ತಿರುವ ಕೇಂದ್ರದ ಸಚಿವರನ್ನೂ ಅಭಿನಂದಿಸಲಾಗುವುದು ಎಂದು ಅವರು ವಿವರ ನೀಡಿದರು.

ಈ ಕಾರ್ಯಕ್ರಮದಲ್ಲಿ ನಮ್ಮೆಲ್ಲ ಸಂಸದರು, ಶಾಸಕರು, ವಿಧಾನಪರಿಷತ್ ಸದಸ್ಯರು, ರಾಜ್ಯದ ಪದಾಧಿಕಾರಿಗಳು, ಜಿಲ್ಲಾಧ್ಯಕ್ಷರು, ಕಾರ್ಯಕರ್ತರು ಭಾಗವಹಿಸಲಿದ್ದಾರೆ ಎಂದು ವಿವರಿಸಿದರು.

LEAVE A REPLY

Please enter your comment!
Please enter your name here