Home ಬೆಂಗಳೂರು ನಗರ ಫೆಬ್ರವರಿ 6 ರಂದು ಪ್ರಧಾನಿ ಸಮ್ಮುಖದಲ್ಲಿ ತುಮಕೂರು ಹೆಚ್ ಹೆಚ್ ಎ ಎಲ್ ಹೆಲಿಕಾಪ್ಟರ್ ಕಾರ್ಖಾನೆ...

ಫೆಬ್ರವರಿ 6 ರಂದು ಪ್ರಧಾನಿ ಸಮ್ಮುಖದಲ್ಲಿ ತುಮಕೂರು ಹೆಚ್ ಹೆಚ್ ಎ ಎಲ್ ಹೆಲಿಕಾಪ್ಟರ್ ಕಾರ್ಖಾನೆ ಉದ್ಘಾಟನೆ

15
0
HAL helicopter factory Tumakuru
bengaluru

ಬೆಂಗಳೂರು:

ರಕ್ಷಣಾ ಕ್ಷೇತ್ರದಲ್ಲಿ ‘ಆತ್ಮನಿರ್ಭರತೆ’: ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಫೆಬ್ರವರಿ 6 ರಂದು ಕರ್ನಾಟಕದ ತುಮಕೂರಿನಲ್ಲಿ ಹೆಚ್ ಎ ಎಲ್ ನ ಹೆಲಿಕಾಪ್ಟರ್ ಕಾರ್ಖಾನೆಯನ್ನು ರಾಷ್ಟ್ರಕ್ಕೆ ಸಮರ್ಪಿಸಲಿದ್ದಾರೆ

ರಕ್ಷಣಾ ಕ್ಷೇತ್ರದಲ್ಲಿ ‘ಆತ್ಮನಿರ್ಭರತೆ’ಯನ್ನು ಸಾಧಿಸುವ ಮತ್ತೊಂದು ಹೆಜ್ಜೆಯಾಗಿ, ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಫೆಬ್ರವರಿ 06, 2023 ರಂದು ಕರ್ನಾಟಕದ ತುಮಕೂರಿನಲ್ಲಿ ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ನ (ಹೆಚ್ ಎ ಎಲ್) ಹೆಲಿಕಾಪ್ಟರ್ ಕಾರ್ಖಾನೆಯನ್ನು ರಾಷ್ಟ್ರಕ್ಕೆ ಸಮರ್ಪಿಸಲಿದ್ದಾರೆ. ರಕ್ಷಣಾ ಸಚಿವ ಶ್ರೀ ರಾಜನಾಥ್ ಸಿಂಗ್ ಮತ್ತು ರಕ್ಷಣಾ ಸಚಿವಾಲಯದ ಹಿರಿಯ ಅಧಿಕಾರಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿರುತ್ಥಾರೆ.

ಈ ಗ್ರೀನ್ಫೀಲ್ಡ್ ಹೆಲಿಕಾಪ್ಟರ್ ಕಾರ್ಖಾನೆಯು 615 ಎಕರೆ ಪ್ರದೇಶದಲ್ಲಿದೆ. ದೇಶದ ಎಲ್ಲಾ ಹೆಲಿಕಾಪ್ಟರ್ ಅವಶ್ಯಕತೆಗಳಿಗೆ ಒಂದು-ನಿಲುಗಡೆ (ಒನ್ ಸ್ಟಾಪ್) ಪರಿಹಾರ ಒದಗಿಸುವ ದೃಷ್ಟಿಕೋನದಲ್ಲಿ ಇದನ್ನು ಯೋಜಿಸಲಾಗಿದೆ. ಇದು ಭಾರತದ ಅತಿದೊಡ್ಡ ಹೆಲಿಕಾಪ್ಟರ್ ತಯಾರಿಕಾ ಸೌಲಭ್ಯವಾಗಿದೆ ಮತ್ತು ಆರಂಭದಲ್ಲಿ ಲಘು ಬಳಕೆಯ ಹೆಲಿಕಾಪ್ಟರ್ಗಳನ್ನು (ಎಲ್ ಯು ಹೆಚ್) ತಯಾರಿಸುತ್ತದೆ.

bengaluru

ಎಲ್ ಯು ಹೆಚ್ ಸ್ಥಳೀಯವಾಗಿ ವಿನ್ಯಾಸಗೊಳಿಸಿದ ಮತ್ತು ಅಭಿವೃದ್ಧಿಪಡಿಸಿದ 3-ಟನ್ ವರ್ಗದ, ಒಂದು ಇಂಜಿನ್ ಹೊಂದಿರುವ ವಿವಿಧೋದ್ದೇಶ ಬಳಕೆಯ ಹೆಲಿಕಾಪ್ಟರ್ ಆಗಿದ್ದು, ಹೆಚ್ಚಿನ ಕುಶಲತೆಯ ವೈಶಿಷ್ಟ್ಯಗಳನ್ನು ಹೊಂದಿದೆ.
ಆರಂಭದಲ್ಲಿ, ಈ ಕಾರ್ಖಾನೆಯು ವರ್ಷಕ್ಕೆ ಸುಮಾರು 30 ಹೆಲಿಕಾಪ್ಟರ್ಗಳನ್ನು ತಯಾರಿಸುತ್ತದೆ ಮತ್ತು ಹಂತ ಹಂತವಾಗಿ ಇದರ ತಯಾರಿಕಾ ಸಾಮರ್ಥ್ಯವನ್ನು ವರ್ಷಕ್ಕೆ 60 ಮತ್ತು ನಂತರ 90 ಕ್ಕೆ ಹೆಚ್ಚಿಸಬಹುದು. ಮೊದಲ ಎಲ್ ಯು ಹೆಚ್ ಅನ್ನು ಹಾರಾಟ ಪರೀಕ್ಷೆಗೆ ಒಳಪಡಿಸಲಾಗಿದೆ ಮತ್ತು ಬಿಡುಗಡೆಗೆ ಸಿದ್ಧವಾಗಿದೆ.
ಲಘು ಯುದ್ಧ ಹೆಲಿಕಾಪ್ಟರ್ಗಳು (ಎಲ್ ಸಿ ಹೆಚ್) ಮತ್ತು ಇಂಡಿಯನ್ ಮಲ್ಟಿರೋಲ್ ಹೆಲಿಕಾಪ್ಟರ್ (ಐ ಎಂ ಆರ್ ಹೆಚ್) ನಂತಹ ಇತರ ಹೆಲಿಕಾಪ್ಟರ್ಗಳನ್ನು ತಯಾರಿಸಲು ಕಾರ್ಖಾನೆಯನ್ನು ಅಭಿವೃದ್ಧಿಪಡಿಸಲಾಗುವುದು.

ಈ ಕಾರ್ಖಾನೆಯನ್ನು ಭವಿಷ್ಯದಲ್ಲಿ ಎಲ್ ಸಿ ಹೆಚ್, ಎಲ್ ಯು ಹೆಚ್, ಸುಧಾರಿತ ನಾಗರಿಕ ಲಘು ಹೆಲಿಕಾಪ್ಟರ್ (ಎ ಲ್ ಹೆಚ್) ಮತ್ತು ಐ ಎಂ ಆರ್ ಹೆಚ್ ನ ನಿರ್ವಹಣೆ, ದುರಸ್ತಿ ಮತ್ತು ಕೂಲಂಕಷ ಪರೀಕ್ಷೆಗೆ ಸಹ ಬಳಸಲಾಗುತ್ತದೆ. ಈ ಕಾರ್ಖಾನೆಯಿಂದ ನಾಗರಿಕ ಲಘು ಬಳಕೆಯ ಹೆಲಿಕಾಪ್ಟರ್ಗಳ ಸಂಭಾವ್ಯ ರಫ್ತುಗಳನ್ನು ಸಹ ಮಾಡಲಾಗುತ್ತದೆ.

3-15 ಟನ್ಗಳ ವ್ಯಾಪ್ತಿಯಲ್ಲಿ 1,000 ಕ್ಕೂ ಹೆಚ್ಚು ಹೆಲಿಕಾಪ್ಟರ್ಗಳನ್ನು ತಯಾರಿಸಲು ಹೆಚ್ ಎ ಎಲ್ ಯೋಜಿಸಿದೆ, 20 ವರ್ಷಗಳ ಅವಧಿಯಲ್ಲಿ ಒಟ್ಟು ನಾಲ್ಕು ಲಕ್ಷ ಕೋಟಿ ರೂ. ವ್ಯವಹಾರವನ್ನು ಯೋಜಿಸಲಾಗಿದೆ. ಪ್ರತ್ಯಕ್ಷ ಮತ್ತು ಪರೋಕ್ಷ ಉದ್ಯೋಗವನ್ನು ಸೃಷ್ಟಿಸುವುದರ ಜೊತೆಗೆ, ತುಮಕೂರು ಘಟಕವು ಅದರ ಸಿಎಸ್ಆರ್ ಚಟುವಟಿಕೆಗಳ ಮೂಲಕ ಸುತ್ತಮುತ್ತಲಿನ ಪ್ರದೇಶಗಳ ಅಭಿವೃದ್ಧಿಯನ್ನು ದೊಡ್ಡ ಪ್ರಮಾಣದ ಸಮುದಾಯ ಕೇಂದ್ರಿತ ಕಾರ್ಯಕ್ರಮಗಳೊಂದಿಗೆ ಉತ್ತೇಜಿಸುತ್ತದೆ, ಇದಕ್ಕಾಗಿ ಕಂಪನಿಯು ಗಣನೀಯ ಮೊತ್ತವನ್ನು ಖರ್ಚು ಮಾಡುತ್ತದೆ. ಇದೆಲ್ಲವೂ ಈ ಪ್ರದೇಶದ ಜನಜೀವನದಲ್ಲಿ ಸುಧಾರಣೆಗೆ ಕಾರಣವಾಗುತ್ತದೆ.

ಈ ಕಾರ್ಖಾನೆಗೆ ಬೆಂಗಳೂರಿನಲ್ಲಿ ಅಸ್ತಿತ್ವದಲ್ಲಿರುವ ಹೆಚ್ ಎ ಎಲ್ ಸಮೀಪ ಇರುವುದರಿಂದ ಈ ಪ್ರದೇಶದಲ್ಲಿ ಏರೋಸ್ಪೇಸ್ ಉತ್ಪಾದನಾ ಪರಿಸರ ವ್ಯವಸ್ಥೆಯನ್ನು ಉತ್ತೇಜಿಸುತ್ತದೆ ಮತ್ತು ಶಾಲೆಗಳು, ಕಾಲೇಜುಗಳು ಮತ್ತು ವಸತಿ ಪ್ರದೇಶಗಳಂತಹ ಕೌಶಲ್ಯ ಮತ್ತು ಮೂಲಸೌಕರ್ಯ ಅಭಿವೃದ್ಧಿಯನ್ನು ಬೆಂಬಲಿಸುತ್ತದೆ. ವೈದ್ಯಕೀಯ ಮತ್ತು ಆರೋಗ್ಯ ರಕ್ಷಣೆಯು ಹತ್ತಿರದ ಪಂಚಾಯತ್ಗಳಲ್ಲಿ ವಾಸಿಸುವ ಸಮುದಾಯಕ್ಕೆ ದೊರೆಯುತ್ತದೆ.

ಹೆಲಿ-ರನ್ವೇ, ಫ್ಲೈಟ್ ಹ್ಯಾಂಗರ್, ಅಂತಿಮ ಜೋಡಣೆ ಪ್ರದೇಶ, ನಿರ್ಮಾಣ ಜೋಡಣೆ ಪ್ರದೇಶ, ಏರ್ ಟ್ರಾಫಿಕ್ ಕಂಟ್ರೋಲ್ ಮತ್ತು ವಿವಿಧ ಸಂಬಂಧಿತ ಸೇವಾ ಸೌಲಭ್ಯಗಳ ಸ್ಥಾಪನೆಯೊಂದಿಗೆ, ಕಾರ್ಖಾನೆಯು ಸಂಪೂರ್ಣವಾಗಿ ಕಾರ್ಯನಿರ್ವಹಿಸುತ್ತಿದೆ. ಈ ಕಾರ್ಖಾನೆಯು ಅದರ ಕಾರ್ಯಾಚರಣೆಗಳಿಗಾಗಿ ಅತ್ಯಾಧುನಿಕ ಇಂಡಸ್ಟ್ರಿ 4.0 ಮಾನದಂಡದ ಉಪಕರಣಗಳು ಮತ್ತು ತಂತ್ರಗಳನ್ನು ಹೊಂದಿದೆ.

ಹಕ್ಕು ನಿರಾಕರಣೆ: ಮೇಲೆ ಪತ್ರಿಕಾ ಮಾಹಿತಿ ಪ್ರೆಸ್ ಇನ್ಫರ್ಮೇಷನ್ ಬ್ಯುರೋ (ಡಿಫೆನ್ಸ್ ವಿಂಗ್) ಹೊರಡಿಸಿದ ಪತ್ರಿಕಾ ಪ್ರಕಟಣೆಯಾಗಿದೆ

bengaluru

LEAVE A REPLY

Please enter your comment!
Please enter your name here