Home ಬೆಂಗಳೂರು ನಗರ ಜುಲೈ 2 ರಂದು (ಭಾನುವಾರ) ಟ್ರಿನಿಟಿ ಮತ್ತು ಎಂ.ಜಿ. ರಸ್ತೆ ಮೆಟ್ರೋ ನಿಲ್ದಾಣಗಳ ನಡುವೆ ನೇರಳೆ...

ಜುಲೈ 2 ರಂದು (ಭಾನುವಾರ) ಟ್ರಿನಿಟಿ ಮತ್ತು ಎಂ.ಜಿ. ರಸ್ತೆ ಮೆಟ್ರೋ ನಿಲ್ದಾಣಗಳ ನಡುವೆ ನೇರಳೆ (Purple Line) ಮಾರ್ಗದಲ್ಲಿ ನಮ್ಮ ಮೆಟ್ರೋ ಸಂಚಾರ ಸ್ಥಗಿತ

36
0
Test run of metro train running at 80 kmph between Whitefield and KR Puram metro stations

ಬೆಂಗಳೂರು:

ನೇರಳೆ ಮಾರ್ಗದಲ್ಲಿ ಜುಲೈ 2ರ ಭಾನುವಾರ ನಮ್ಮ ಮೆಟ್ರೋ ಸಂಚಾರ ತಾತ್ಕಾಲಿಕವಾಗಿ ಎರಡು ಗಂಟೆ ಸ್ಥಗಿತವಾಗಲಿದೆ.

ಟ್ರಿನಿಟಿ-ಎಂ.ಜಿ ರಸ್ತೆ ಮೆಟ್ರೋ ನಡುವೆ ಕಾಮಗಾರಿ ಕೈಗೆತ್ತಿಕೊಳ್ಳುತ್ತಿರುವುದರಿಂದ MG ರಸ್ತೆ ಮೆಟ್ರೋದಿಂದ ಬೈಯಪ್ಪನಹಳ್ಳಿ ನಿಲ್ದಾಣದವರೆಗೆ ಭಾನುವಾರ ಎರಡು ಗಂಟೆಗಳ ಕಾಲ ನಮ್ಮ ಮೆಟ್ರೋ ಸಂಚರಿಸುವುದಿಲ್ಲ. ಈ ಬಗ್ಗೆ ಇಂದು ಬಿಎಂಆರ್​ಸಿಎಲ್ ಪ್ರಕಟಣೆ ಮೂಲಕ ಮಾಹಿತಿ ನಿಡಿದೆ.

WhatsApp Image 2023 06 30 at 9.36.01 PM

ಬೆಂಗಳೂರು ಮೆಟ್ರೋ ರೈಲು ನಿಗಮವು ಜುಲೈ 2 ರಂದು (ಭಾನುವಾರ) ಟ್ರಿನಿಟಿ ಮತ್ತು ಎಂ.ಜಿ. ರಸ್ತೆ ಮೆಟ್ರೋ ನಿಲ್ದಾಣಗಳ ನಡುವೆ ನೇರಳೆ ಮಾರ್ಗದಲ್ಲಿ ನಿರ್ವಹಣೆ ಕಾಮಗಾರಿಯನ್ನು ಕೈಗೊಳ್ಳುತ್ತಿದೆ. ಈ ಕಾಮಗಾರಿಯನ್ನು ನಿರ್ವಹಿಸಲು ನೇರಳೆ ಮಾರ್ಗದ ಎಂ.ಜಿ. ರಸ್ತೆ ಮೆಟ್ರೋ ನಿಲ್ದಾಣದಿಂದ ಬೈಯಪ್ಪನಹಳ್ಳಿ ಮೆಟ್ರೋ ನಿಲ್ದಾಣದವರೆಗೆ ಬೆಳಗ್ಗೆ 7 ಗಂಟೆಯಿಂದ 9 ಗಂಟೆ (ಎರಡು ಗಂಟೆ ಮಾತ್ರ) ಮೆಟ್ರೋ ಸಂಚಾರ ಇರುವುದಿಲ್ಲ.

ಪ್ರಯಾಣಿಕರಿಗೆ ಇದರಿಂದಾಗುವ ಅನಾನುಕೂಲತೆಗೆ ನಮ್ಮ ಮೆಟ್ರೋ ವಿಷಾದಿಸಿದೆ ಎಂದು ಬಿಎಂಆರ್​ಸಿಎಲ್​ ಪ್ರಕಟಣೆಯಲ್ಲಿ ತಿಳಿಸಿದೆ.

ಕೆಂಗೇರಿ ಮತ್ತು ಎಂ.ಜಿ ರಸ್ತೆ, ನಾಗಸಂದ್ರ ಮತ್ತು ರೇಷ್ಮೆ ಸಂಸ್ಥೆ ಕೃಷ್ಣರಾಜಪುರ ಮತ್ತು ವೈಟ್ ಫೀಲ್ಡ್ (ಕಾಡುಗೋಡಿ) ವಿಭಾಗಗಳ ರೈಲುಗಳ ಸೇವೆಯು ಆಯಾ ಟರ್ಮಿನಲ್ ನಿಲ್ದಾಣಗಳಿಂದ ಬೆಳಿಗ್ಗೆ 07:00 ಗಂಟೆಗೆ ವೇಳಾಪಟ್ಟಿಯ ಪ್ರಕಾರ ಸಂಚರಿಸಲಿದೆ. ನಮ್ಮ ಮೆಟ್ರೋ ಪ್ರಯಾಣಿಕರು ಸದರಿ ಬದಲಾವಣೆಯನ್ನು ಗಮನಿಸಬೇಕೆಂದು ಕೋರಿದೆ.

LEAVE A REPLY

Please enter your comment!
Please enter your name here