ಹುಬ್ಬಳ್ಳಿ/ಬೆಂಗಳೂರು:
ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ಶುಕ್ರವಾರ ಬೆಳಿಗ್ಗೆ ಬಂದಿಳಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರನ್ನು ಸ್ವಾಗತಿಸಲು ಧಾರವಾಡ ಜಿಲ್ಲೆಯ ಕೇವಲ ಒಬ್ಬ ಶಾಸಕ ಮಾತ್ರ ಬಂದಿದ್ದರು. ಉಳಿದ ಶಾಸಕರು ಕಾಣಲಿಲ್ಲ.
ನವಲಗುಂದ ಶಾಸಕ ಎನ್.ಎಚ್. ಕೋನರಡ್ಡಿ ಮಾತ್ರ ಬಂದಿದ್ದರು. ಧಾರವಾಡ ಜಿಲ್ಲೆಯಲ್ಲಿ ನಾಲ್ಕು ಜನ ಕಾಂಗ್ರೆಸ್ ಶಾಸಕರಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವ ಕಲಘಟಗಿ ಶಾಸಕ ಸಂತೋಷ ಲಾಡ್, ಹುಬ್ಬಳ್ಳಿ- ಧಾರವಾಡ ಪೂರ್ವ ಕ್ಷೇತ್ರದ ಶಾಸಕ ಪ್ರಸಾದ ಅಬ್ಬಯ್ಯ ಗೈರಾಗಿದ್ದರು. ಧಾರವಾಡ ಶಾಸಕ ವಿನಯ ಕುಲಕರ್ಣಿ ಕೋರ್ಟ್ ಆದೇಶದ ಹಿನ್ನೆಲೆಯಲ್ಲಿ ಜಿಲ್ಲೆಯೊಳಗೆ ಪ್ರವೇಶಿಸುವಂತಿಲ್ಲ.
ಕಾಂಗ್ರೆಸ್ ಎಂಎಲ್ ಸಿ ಜಗದೀಶ್ ಶೆಟ್ಟರ್ ಕೂಡ ಗೈರು ಹಾಜರಾಗಿದ್ದರು.