ಬೆಂಗಳೂರು: ಮಾಜಿ ಶಾಸಕಿ ಪೂರ್ಣಿಮಾ ಅವರು ಇಂದು ಸಂಜೆ ಮುಖ್ಯಮಂತ್ರಿಗಳ ನಿವಾಸ ಕಾವೇರಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ಅವರ ಸಮ್ಮುಖದಲ್ಲಿ ಚರ್ಚೆ ನಡೆಸಿದರು. ಅ.20 ಕ್ಕೆ ಕಾಂಗ್ರೆಸ್ ಸೇರ್ಪಡೆಗೊಳ್ಳಲಿದ್ದಾರೆ. ಈ ಸಂದರ್ಭದಲ್ಲಿ ಸಚಿವ ಬೈರತಿ ಸುರೇಶ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು ಉಪಸ್ಥಿತರಿದ್ದರು.
2018ರಲ್ಲಿ ಮೊದಲ ಬಾರಿಗೆ ಬಿಜೆಪಿಯಿಂದ ಸ್ಪರ್ಧಿಸಿದ್ದ ಪೂರ್ಣಿಮಾ ಶ್ರೀನಿವಾಸ್, ಕಾಂಗ್ರೆಸ್ನ ಡಿ ಸುಧಾಕರ್ ವಿರುದ್ಧ ಜಯಗಳಿಸುವ ಮೂಲಕ ಚಿತ್ರದುರ್ಗ ಜಿಲ್ಲೆಯ ಮೊದಲ ಮಹಿಳಾ ಶಾಸಕಿ ಎಂಬ ಕೀರ್ತಿಗೆ ಪಾತ್ರರಾಗಿದ್ದರು. 2023ರ ರಾಜ್ಯ ವಿಧಾನಸಭಾ ಚುನಾವಣೆಯಲ್ಲೂ ಬಿಜೆಪಿಯಿಂದ ಸ್ಪರ್ಧಿಸಿದ್ದ ಪೂರ್ಣಿಮಾ,
CM ಸಿದ್ದುವಿನ ಎರಡನೇ ಮುಖ ದಲಿತರನ್ನು ಅವನತಿಗೆ ದೂಡುವುದು – ಬಿ ಶ್ರೀರಾಮುಲು
ಕಾಂಗ್ರೆಸ್ನ ಸುಧಾಕರ್ ಅವರ ವಿರುದ್ಧ 30322 ಮತಗಳ ಅಂತರದಿಂದ ಸೋಲನುಭವಿಸಿದ್ದರು. ಇಂದು ಸಿಎಂ ಹಾಗೂ ಡಿಸಿಎಂ ಭೇಟಿಯ ಬಳಿಕ ಅಕ್ಟೋಬರ್ 20ಕ್ಕೆ ಅವರು ಕಾಂಗ್ರೆಸ್ ಸೇರ್ಪಡೆಗೊಳ್ಳಲಿದ್ದಾರೆ ಎಂದು ತಿಳಿದುಬಂದಿದೆ. ಪೂರ್ಣಿಮಾ ಅವರ ತಂದೆ ದಿವಂಗತ ಕೃಷ್ಣಪ್ಪ ಹಿಂದೆ ಕಾಂಗ್ರೆಸ್ ಸರ್ಕಾರದಲ್ಲಿ ಸಚಿವರಾಗಿದ್ದರು.
The post Operation Congress: ಕಾಂಗ್ರೆಸ್ ಸೇರ್ಪಡೆಯಾಗಲಿರುವ ಬಿಜೆಪಿಯ ಮಾಜಿ ಶಾಸಕಿ ಪೂರ್ಣಿಮಾ appeared first on Ain Live News.
