Home ರಾಜಕೀಯ ಉಪ ಚುನಾವಣಾ ಕಣದಲ್ಲಿ ಏಪ್ರಿಲ್ 5 ರಿಂದ ವಿಪಕ್ಷ ನಾಯಕ ಸಿದ್ದರಾಮಯ್ಯ ಪ್ರಚಾರ

ಉಪ ಚುನಾವಣಾ ಕಣದಲ್ಲಿ ಏಪ್ರಿಲ್ 5 ರಿಂದ ವಿಪಕ್ಷ ನಾಯಕ ಸಿದ್ದರಾಮಯ್ಯ ಪ್ರಚಾರ

59
0

ಬೆಂಗಳೂರು:

ವಿಧಾನಸಭೆಯ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಅವರು ನಾಳೆಯಿಂದ ಎಂಟು ದಿನಗಳ ಕಾಲ ಚುನಾವಣಾ ಪ್ರಚಾರ ಕೈಗೊಳ್ಳಲಿದ್ದಾರೆ.

ಮಸ್ಕಿ, ಬಸವಕಲ್ಯಾಣ ವಿಧಾನಸಭೆ ಹಾಗೂ ಬೆಳಗಾವಿ ಲೋಕಸಭೆ ಕ್ಷೇತ್ರದ ವಿವಿಧೆಡೆ ಸಿದ್ದರಾಮಯ್ಯ ಅವರು ಪ್ರಚಾರ ನಡೆಸಲಿದ್ದಾರೆ.

ಏ. 5 ಮತ್ತು 6ರಂದು ಮಸ್ಕಿ, 7 ಮತ್ತು 8ರಂದು ಬಸವ ಕಲ್ಯಾಣ ವಿಧಾನಸಭೆ, 9 ಮತ್ತು 10ರಂದು ಬೆಳಗಾವಿ ಲೋಕಸಭೆ ಕ್ಷೇತ್ರದಲ್ಲಿ ಪ್ರಚಾರ ಕೈಗೊಳ್ಳಲಿದ್ದಾರೆ.

ಬಳಿಕ ಏ. 11ರಂದು ಮಸ್ಕಿ ಹಾಗೂ 12ರಂದು ಬಸವಕಲ್ಯಾಣದಲ್ಲಿ ಸಿದ್ದರಾಮಯ್ಯ ಅವರು ಬಹಿರಂಗ ಸಭೆಗಳನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.

LEAVE A REPLY

Please enter your comment!
Please enter your name here