Skip to content
ದಿ ಬೆಂಗಳೂರು ಲೈವ್ | ಕನ್ನಡ ಸುದ್ದಿ, ಬ್ರೇಕಿಂಗ್ ಅಪ್ಡೇಟ್ಸ್

ದಿ ಬೆಂಗಳೂರು ಲೈವ್ | ಕನ್ನಡ ಸುದ್ದಿ, ಬ್ರೇಕಿಂಗ್ ಅಪ್ಡೇಟ್ಸ್

ಇದು ನಿಮ್ಮ ಧ್ವನಿ

Primary Menu
  • ಮುಖಪುಟ
  • ಪ್ರಾಯೋಜಿತ
  • ಬೆಂಗಳೂರು ನಗರ
  • ಅಪರಾಧ
  • ರಾಜಕೀಯ
  • English News
  • Delhi News
  • ಕರ್ನಾಟಕ
  • ಶಿಕ್ಷಣ
  • ಕ್ರೀಡೆ
  • Home
  • ಕರ್ನಾಟಕ
  • ನಗರ
  • ಬೆಂಗಳೂರು ನಗರ
  • ನೈಸ್ ರಸ್ತೆ ಬಳಿ ಸ್ಕೈಡೆಕ್ ಮಾಡಲು ವಿರೋಧ ಪಕ್ಷಗಳ ಶಾಸಕರು ಒಪ್ಪಿಗೆ, ಸಂಪುಟ ಸಭೆಯಲ್ಲಿ ಚರ್ಚೆ: ಡಿಸಿಎಂ ಡಿ.ಕೆ. ಶಿವಕುಮಾರ್
  • ಬೆಂಗಳೂರು ನಗರ

ನೈಸ್ ರಸ್ತೆ ಬಳಿ ಸ್ಕೈಡೆಕ್ ಮಾಡಲು ವಿರೋಧ ಪಕ್ಷಗಳ ಶಾಸಕರು ಒಪ್ಪಿಗೆ, ಸಂಪುಟ ಸಭೆಯಲ್ಲಿ ಚರ್ಚೆ: ಡಿಸಿಎಂ ಡಿ.ಕೆ. ಶಿವಕುಮಾರ್

The Bengaluru Live July 27, 2024 6:30 PM 1 minute read
ನೈಸ್ ರಸ್ತೆ ಬಳಿ ಸ್ಕೈಡೆಕ್ ಮಾಡಲು ವಿರೋಧ ಪಕ್ಷಗಳ ಶಾಸಕರು ಒಪ್ಪಿಗೆ, ಸಂಪುಟ ಸಭೆಯಲ್ಲಿ ಚರ್ಚೆ: ಡಿಸಿಎಂ ಡಿ.ಕೆ. ಶಿವಕುಮಾರ್

ನೈಸ್ ರಸ್ತೆ ಬಳಿ ಸ್ಕೈಡೆಕ್ ಮಾಡಲು ವಿರೋಧ ಪಕ್ಷಗಳ ಶಾಸಕರು ಒಪ್ಪಿಗೆ, ಸಂಪುಟ ಸಭೆಯಲ್ಲಿ ಚರ್ಚೆ: ಡಿಸಿಎಂ ಡಿ.ಕೆ. ಶಿವಕುಮಾರ್

📗 ಈ ಸುದ್ದಿಯನ್ನು ಇಂಗ್ಲಿಷ್‌ನಲ್ಲಿ ಓದಿ

ಬೆಂಗಳೂರು, ಜುಲೈ 27 “ಪ್ರವಾಸೋದ್ಯಮಕ್ಕೆ ಉತ್ತೇಜನ ನೀಡಲು ಬೆಂಗಳೂರಿನಲ್ಲಿ 250 ಮೀ. ಸ್ಕೈಡೆಕ್ ನಿರ್ಮಿಸಲು ಮುಂದಾಗಿದ್ದು, ವಿರೋಧ ಪಕ್ಷಗಳ ನಾಯಕರು, ಶಾಸಕರು ಇದಕ್ಕೆ ಒಪ್ಪಿಗೆ ಸೂಚಿಸಿದ್ದಾರೆ. ಈ ವಿಚಾರವನ್ನು ಸಚಿವ ಸಂಪುಟ ಸಭೆಯಲ್ಲಿ ಚರ್ಚೆ ಮಾಡಲಾಗುವುದು” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.

ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಬೆಂಗಳೂರು ಶಾಸಕರ ಸಭೆ ಬಳಿಕ ಮಾಧ್ಯಮಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಬೆಂಗಳೂರು ನಗರಾಭಿವೃದ್ಧಿ ಸಚಿವರೂ ಆಗಿರುವ ಡಿ.ಕೆ. ಶಿವಕುಮಾರ್ ಅವರು ಸಭೆಯಲ್ಲಿ ಚರ್ಚೆಯಾದ ವಿಚಾರಗಳ ಬಗ್ಗೆ ಶನಿವಾರ ಮಾಹಿತಿ ನೀಡಿದರು.

“250 ಮೀಟರ್ ಎತ್ತರದ ಈ ಸ್ಕೈಡೆಕ್ ಗಾಗಿ 25 ಎಕರೆ ಜಾಗ ಅಗತ್ಯವಿದೆ. ಕೊಮ್ಮಘಟ್ಟ ಹಾಗೂ ಬೆಂಗಳೂರು ವಿವಿ ಬಳಿಯ ಜಾಗವನ್ನು ನೋಡಿದ್ದೆವು. ಬೆಂಗಳೂರು ಬೆಳೆಯುತ್ತಿರುವಾಗ ಬೆಂಗಳೂರು ವಿವಿಯ ಬಳಿ 25 ಎಕರೆ ಭೂಮಿ ವ್ಯರ್ಥ ಮಾಡುವುದು ಬೇಡ, ವಿದ್ಯಾರ್ಥಿಗಳಿಗೆ ತೊಂದರೆಯಾಗಬಹುದು ಎಂದು ಶಾಸಕರು ಅಭಿಪ್ರಾಯಪಟ್ಟರು. ಹೀಗಾಗಿ ಈಗ ನೈಸ್ ರಸ್ತೆಯ ಬಳಿ ಮಾಡಲು ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಸೇರಿದಂತೆ ಎಲ್ಲಾ ಶಾಸಕರು ಒಪ್ಪಿದ್ದಾರೆ” ಎಂದು ತಿಳಿಸಿದರು.

“ಈ ಜಾಗ ನೈಸ್ ಸಂಸ್ಥೆ ಬಳಿ ಇದೆ. ಸುಪ್ರೀಂ ಕೋರ್ಟ್ ಆದೇಶದ ಪ್ರಕಾರ ಸರ್ಕಾರಕ್ಕೆ ನೈಸ್ ಸಂಸ್ಥೆ 200 ಎಕರೆ ಭೂಮಿ ವಾಪಸ್ ನೀಡಬೇಕಿದೆ ಎಂದು ಅಶೋಕ್ ಅವರು ಮಾಹಿತಿ ನೀಡಿದ್ದಾರೆ. ಈ ವಿಚಾರವಾಗಿ ನೈಸ್ ಸಂಸ್ಥೆ ಬಳಿ ಚರ್ಚೆ ಮಾಡುತ್ತೇವೆ. ಈ ಯೋಜನೆಗಾಗಿ 10 ಜಾಗ ಹುಡುಕಲಾಗಿತ್ತು. ಆದರೆ ವಾಯುಸೇನೆ, ವಿಮಾನಯಾನ ಸಚಿವಾಲಯದವರು 20 ಕಿ.ಮೀ ವ್ಯಾಪ್ತಿಯಲ್ಲಿ ಈ ಯೋಜನೆ ಮಾಡಲು ಅವಕಾಶವಿಲ್ಲ ಎಂದು ಹೇಳಿದ್ದರು. ಹೀಗಾಗಿ ನೈಸ್ ರಸ್ತೆ ಬಳಿ ಮಾಡುವ ತೀರ್ಮಾನ ಮಾಡಲಾಗಿದೆ” ಎಂದು ತಿಳಿಸಿದರು.

ಸ್ಕೈಡೆಕ್ ಅನ್ನು ನಗರದ ಹೊರ ಭಾಗಕ್ಕೆ ತೆಗೆದುಕೊಂದು ಹೋದರೆ ಅದರ ಉದ್ದೇಶ ಈಡೇರುವುದೇ ಎಂದು ಮಾಧ್ಯಮಗಳು ಕೇಳಿದಾಗ, “ಎಲ್ಲಾ ರೀತಿಯ ಲೆಕ್ಕಾಚಾರವನ್ನು ನಾವು ಹಾಕಿಯೇ ಈ ತೀರ್ಮಾನ ಮಾಡಿದ್ದೇವೆ. ನೈಸ್ ರಸ್ತೆ ಬಳಿ ಮಾಡುವುದರಿಂದ ಪ್ರವಾಸಿಗರು ಮೈಸೂರು, ಕೊಡಗು ಭಾಗಕ್ಕೆ ತೆರಳಲು ಮುಕ್ತವಾದ ಸಂಚಾರ ಮಾರ್ಗವಿರುತ್ತದೆ. ಇನ್ನು ನೈಸ್ ರಸ್ತೆ ಅಗಲೀಕರಣಕ್ಕೂ ಅವಕಾಶ ಇರುವುದರಿಂದ ಇದು ಸೂಕ್ತ ಜಾಗ ಎಂದು ಅಶೋಕ್ ಅವರು ಸಲಹೆ ನೀಡಿದ್ದಾರೆ. ಅವರ ಸಲಹೆಯಲ್ಲೂ ಅರ್ಥವಿದೆ. ಪೆರಿಫೆರಲ್ ರಿಂಗ್ ರಸ್ತೆ ಮಾಡಿದಾಗ ಎಲ್ಲಾ ಭಾಗಗಳಿಂದಲೂ ಇಲ್ಲಿಗೆ ಸಂಪರ್ಕ ಸಾಧಿಸಬಹುದು. ಇವರ ಸಲಹೆಗಳನ್ನು ಸಚಿವ ಸಂಪುಟ ಸಭೆಯಲ್ಲಿ ಚರ್ಚೆ ಮಾಡಲಾಗುವುದು” ಎಂದರು.

“ಕೆಂಗೇರಿಯಿಂದ ಎಲೆಕ್ಟ್ರಾನಿಕ್ ಸಿಟಿವರೆಗೂ ಮೆಟ್ರೋ ಸಂಪರ್ಕ ಮಾಡಬೇಕಿದೆ. ಇದಕ್ಕೆ ಆರ್ಥಿಕ ಹೊರೆ ಇದ್ದು, ಈ ಭಾಗದಲ್ಲಿ ಅಭಿವೃದ್ಧಿ ಕಡಿಮೆ ಇರುವ ಕಾರಣ ಭೂಮಿ ವಶಕ್ಕೆ ಪಡೆಯಲು ಕಡಿಮೆ ವೆಚ್ಚವಾಗಲಿದೆ ಎಂದು ಈ ಸಲಹೆ ನೀಡಲಾಗಿದೆ. ಆರ್ಥಿಕವಾಗಿ ಎಲ್ಲಿ ನಮಗೆ ಅನುಕೂಲವಾಗುತ್ತದೆ ಎಂದು ಪರಿಶೀಲಿಸಲಾಗುವುದು. ಇದನ್ನು ಸರ್ಕಾರದಿಂದಲೇ ಮಾಡಲು ಸಚಿವ ಸಂಪುಟ ಸಭೆಯಲ್ಲಿ ಪ್ರಸ್ತಾಪ ಮಾಡಲಾಗುವುದು” ಎಂದು ತಿಳಿಸಿದರು.

ಸುರಂಗ ರಸ್ತೆ: “ಸುರಂಗ ರಸ್ತೆ ನಿರ್ಮಾಣದ ಬಗ್ಗೆ ಸಭೆಯಲ್ಲಿ ಚರ್ಚೆ ಮಾಡಲಾಗಿದ್ದು, ಮೊದಲು ಎಸ್ಟೀಮ್ ಮಾಲ್ ನಿಂದ ಸಿಲ್ಕ್ ಬೋರ್ಡ್ ವರೆಗೆ 18.5 ಕಿ.ಮೀ ಉದ್ದದ ಟನಲ್ ರಸ್ತೆ ಮಾಡಲು ತೀರ್ಮಾನಿಸಲಾಗಿದೆ. ಸಚಿವ ಸಂಪುಟದಲ್ಲಿ ಚರ್ಚೆ ಮಾಡಿ, ಟೆಂಡರ್ ಕರೆಯಲಾಗುವುದು. ಈ ರಸ್ತೆ ನಿರ್ಮಾಣದ ವೇಳೆ ಕೆಲವು ಜಾಗಗಳನ್ನು ವಶಕ್ಕೆ ಪಡೆಯಬೇಕಾಗುತ್ತದೆ. ಈ ಎಲ್ಲಾ ವಿಚಾರವಾಗಿ ಶಾಸಕರ ಮುಂದೆ ಪ್ರಸ್ತಾಪ ಮಾಡಿದ್ದು, ಶಾಸಕರು ಈ ಯೋಜನೆಗೆ ಒಪ್ಪಿಗೆ ಸೂಚಿಸಿದ್ದಾರೆ.

ಬೆಂಗಳೂರಿನ ಪೂರ್ವದಿಂದ ಪಶ್ಚಿಮಕ್ಕೆ ಒಂದು ಮಾರ್ಗ ಸಿದ್ಧ ಮಾಡಲಾಗಿದ್ದು, ಮುಂದಿನ ಹಂತಗಳಲ್ಲಿ ತೆಗೆದುಕೊಳ್ಳಲಾಗುವುದು. ಇನ್ನು ಮುಂದಿನ ದಿನಗಳಲ್ಲಿ ಬಿಬಿಎಂಪಿ ವ್ಯಾಪ್ತಿಯಲ್ಲಿ ನಿರ್ಮಾಣವಾಗುವ ಮೆಟ್ರೋ ಮಾರ್ಗಗಳನ್ನು ಡಬಲ್ ಡೆಕ್ಕರ್ ಮೇಲ್ಸೆತುವೆ ಮಾಡಲಾಗುವುದು. ಪಾಲಿಕೆ ಹಾಗೂ ಮೆಟ್ರೋ ಎರಡೂ ಇಲಾಖೆಗಳು ಇದರ ವೆಚ್ಚವನ್ನು ಭರಿಸಲಿವಿವೆ.

ಟನಲ್ ರಸ್ತೆ ಜತೆಗೆ 17-18 ಕಡೆಗಳಲ್ಲಿ ಜಾಗ ಹುಡುಕಿದ್ದು ಸದ್ಯಕ್ಕೆ 100 ಕಿ.ಮೀ ನಷ್ಟು ಸಿಗ್ನಲ್ ಮುಕ್ತ ಕಾರಿಡಾರ್ ಮೇಲ್ಸೆತುವೆ ಮಾಡಲು ಮುಂದಾಗಿದ್ದು, ಇದಕ್ಕಾಗಿ 12 ಸಾವಿರ ಕೋಟಿಯಷ್ಟು ವೆಚ್ಚ ತಗುಲಲಿದೆ. ಇದಕ್ಕಾಗಿ ಟೆಂಡರ್ ಕರೆಯಲು ಸಿದ್ಧತೆ ಮಾಡಲಾಗುತ್ತಿದೆ” ಎಂದು ವಿವರಿಸಿದರು.

ನಗರದ ಹೊರಗೆ ಕಸ ವಿಲೇವಾರಿ: “ಇನ್ನು ಕಸ ವಿಲೇವಾರಿಗೆ ಬೆಂಗಳೂರಿನ ಹೊರಭಾಗದ 15-20 ಕಿ.ಮೀ ದೂರ ವ್ಯಾಪ್ತಿಯಲ್ಲಿ ನಾಲ್ಕು ಕಡೆಗಳಲ್ಲಿ ಜಾಗ ಗುರುತಿಸಿ ಅಲ್ಲಿ ಕಸ ವಿಲೇವಾರಿ ಮಾಡಲು ತೀರ್ಮಾನಿಸಲಾಗಿದೆ. ಸರ್ಕಾರಿ ಜಾಗ ಇದ್ದಲ್ಲಿ ಅದನ್ನು ಬಳಸಲಾಗುವುದು. ಇಲ್ಲವಾದರೆ ಖಾಸಗಿ ಜಮೀನುಗಳನ್ನು ಆಯುಕ್ತರು ಖರೀದಿ ಮಾಡಲಿದ್ದಾರೆ. ಕೇಂದ್ರ ಪರಿಸರ ಇಲಾಖೆ ನಿಯಮಾನುಸಾರ ಇದನ್ನು ಮಾಡಲಾಗುವುದು.

ಸಂಚಾರಿ ದಟ್ಟಣೆ ವಿಚಾರವಾಗಿ ಹಳೇ ವಾಹನಗಳನ್ನು ರಸ್ತೆಯಲ್ಲಿ ನಿಲ್ಲಿಸಿರುವುದರ ಬಗ್ಗೆ ಪೊಲೀಸ್ ಅಧಿಕಾರಿಗಳಿಗೆ ಸಂಪೂರ್ಣ ಆಯ್ಕೆ ನೀಡಲಾಗಿದ್ದು, ಇಂತಹ ಗಾಡಿಗಳನ್ನು ಅವರು ತೆಗೆದುಕೊಂಡು ಯಾರ್ಡ್ ಗಳಿಗೆ ಹಾಕಿ ಹರಾಜು ಮಾಡಲು ಅವಕಾಶ ನೀಡಲಾಗಿದೆ” ಎಂದು ಮಾಹಿತಿ ನೀಡಿದರು.

ಆಗಸ್ಟ್ 20ರ ವೇಳೆಗೆ ಕಾವೇರಿ 5ನೇ ಹಂತಕ್ಕೆ ಚಾಲನೆ:
“ಕಾವೇರಿ 5ನೇ ಹಂತದ ನೀರು ಪೂರೈಕೆ ಯೋಜನೆ ಪ್ರಯೋಗ ಹಂತದಲ್ಲಿದೆ. ಆಗಸ್ಟ್ 15ರಂದು ಇದಕ್ಕೆ ಚಾಲನೆ ನೀಡಲು ತೀರ್ಮಾನಿಸಿದ್ದೆ. ಆದರೆ ಅಧಿಕಾರಿಗಳು ಇನ್ನು ಐದಾರು ದಿನ ಸಮಯಾವಕಾಶ ಕೇಳುತ್ತಿದ್ದು, ಆಗಸ್ಟ್ 20ರ ವೇಳೆಗೆ ನೀರು ನೀಡಲಾಗುವುದು” ಎಂದರು.

ವಿಶೇಷ ಅನುದಾನಕ್ಕೆ ಬೇಡಿಕೆ: ಇದೆಲ್ಲದರ ಜತೆಗೆ ಬೆಂಗಳೂರಿನ ಶಾಸಕರು ವಿಶೇಷ ಅನುದಾನಗಳನ್ನು ಕೇಳಿದ್ದಾರೆ. ಈ ಬಗ್ಗೆ ಮುಖ್ಯಮಂತ್ರಿಗಳು ಹಾಗೂ ಸಚಿವರ ಜತೆ ಚರ್ಚೆ ಮಾಡಿ ಎಷ್ಟು ಅನುದಾನ ನೀಡಲು ಸಾಧ್ಯವೋ ಅದನ್ನು ನೀಡುತ್ತೇವೆ. ಇಂದಿನ ಸಭೆಯಲ್ಲಿ ಎಲ್ಲರೂ ಉತ್ತಮವಾದ ಸಲಹೆಗಳನ್ನು ವ್ಯಕ್ತಪಡಿಸಿದ್ದಾರೆ. ಬೆಂಗಳೂರಿನಲ್ಲಿ ಬಹಳ ಅನುಭವದ ಶಾಸಕರಿದ್ದು, ಇಲ್ಲಿನ ಸಮಸ್ಯೆಗಳಿಗೆ ಪರಿಹಾರ ನೀಡಲು ಬಿಚ್ಚುಮನಸ್ಸಿನಿಂದ ಸಲಹೆ ನೀಡಿದ್ದಾರೆ.

ಬ್ರ್ಯಾಂಡ್ ಬೆಂಗಳೂರು ವಿಚಾರವಾಗಿ ಚರ್ಚೆಯಾಗಿದೆ. ಇನ್ನು ಗ್ರೇಟರ್ ಬೆಂಗಳೂರು ವಿಧೇಯಕ ವಿಚಾರವಾಗಿ ಎಲ್ಲಾ ಪಕ್ಷದ ಶಾಸಕರು ಸದನ ಸಮಿತಿ ರಚನೆಗೆ ಮನವಿ ಮಾಡಿದ ಕಾರಣ ಸಮಿತಿ ರಚನೆಗೆ ನಿರ್ಧರಿಸಿದ್ದೇವೆ. ವಿರೋಧ ಪಕ್ಷದ ನಾಯಕರು ಅವರ ಪಕ್ಷದ ಶಾಸಕರ ಹೆಸರನ್ನು ಎಷ್ಟು ಬೇಗ ನೀಡುತ್ತಾರೋ ಅಷ್ಟು ಬೇಗ ಸಮಿತಿ ರಚನೆ ಮಾಡಲಾಗುವುದು.

ರಾಗಿಗುಡ್ಡದ ಬಳಿ ಡಬಲ್ ಡೆಕ್ಕರ್ ಮೇಲ್ಸೆತುವೆ ಮಾಡಲಾಗಿದ್ದು, ಈ ಯೋಜನೆ ಅನುಕೂಲವಾಗಿದೆ ಎಂಬ ವರದಿ ಬಂದಿದೆಯೇ ಎಂದು ಕೇಳಿದಾಗ, “ನಾಗ್ಪುರದಲ್ಲಿ ಮಾಡಲಾಗಿರುವ ಡಬಲ್ ಡೆಕ್ಕರ್ ಮೇಲ್ಸೆತುವೆ ಪರಿಶೀಲನೆ ಮಾಡಿದ್ದೆ. ದಕ್ಷಿಣ ಭಾರತದಲ್ಲಿ ನಮ್ಮಲ್ಲೇ ಮೊದಲ ಬಾರಿಗೆ ಇದನ್ನು ಮಾಡಲಾಗಿದೆ. ಅವುಗಳ ಸಾದಕ ಬಾದಕ ಗಮನಿಸಿದ್ದೇವೆ. ಈಗ ಸಿದ್ಧವಾಗಿರುವ ಮೇಲ್ಸೆತುವೆಯ ಒಂದು ಭಾಗ ಮಾತ್ರ ಚಾಲನೆಯಾಗಿದ್ದು, ಮತ್ತೊಂದು ಭಾಗ ಚಾಲನೆ ಆಗಬೇಕು. ಕೆಲವು ಭಾಗಗಳಲ್ಲಿ ಅಂಡರ್ ಪಾಸ್ ಮಾಡಲು ರಾಮಲಿಂಗಾ ರೆಡ್ಡಿ ಹಾಗೂ ಇತರರು ಸಲಹೆ ನೀಡಿದ್ದು, ಆ ಬಗ್ಗೆ ಪ್ರಸ್ತಾವನೆ ನೀಡುವಂತೆ ಸೂಚಿಸಿದ್ದೇನೆ” ಎಂದು ತಿಳಿಸಿದರು.

ಸ್ಕೈಡೆಕ್ ಯೋಜನೆಗೆ ಅಗತ್ಯವಿರುವ ಜಾಗ ಹಾಗೂ ವೆಚ್ಚದ ಬಗ್ಗೆ ಕೇಳಿದಾಗ, “ಮೊದಲು ಈ ಯೋಜನೆಯನ್ನು ಕಂಠೀರವ ಕ್ರೀಡಾಂಗಣದ ಎದುರು ಮಾಡಲು ಪ್ರಸ್ತಾವನೆ ನೀಡಿದ್ದರು. ಸಂಚಾರಿ ದಟ್ಟಣೆ ಸಮಸ್ಯೆ ಹೆಚ್ಚಾಗುತ್ತದೆ ಹಾಗೂ ಹೆಚ್ಎಎಲ್ ನಿಂದ ಇದಕ್ಕೆ ಆಕ್ಷೇಪ ವ್ಯಕ್ತವಾದ ಹಿನ್ನೆಲೆಯಲ್ಲಿ ಅಲ್ಲಿ ಮಾಡುತ್ತಿಲ್ಲ. ಈ ಯೋಜನೆಗೆ 400-500 ಕೋಟಿ ವೆಚ್ಚವಾಗಲಿದ್ದು, ಪಾರ್ಕಿಂಗ್ ವ್ಯವಸ್ಥೆಯನ್ನು ಕಲ್ಪಿಸಬೇಕಾಗಿರುವ ಉದ್ದೇಶದಿಂದ ಕನಿಷ್ಠ ಪಕ್ಷ 25 ಎಕರೆ ಜಾಗ ಅಗತ್ಯವಿದೆ ಎಂದು ಅಂದಾಜಿಸಿದ್ದೇವೆ” ಎಂದು ತಿಳಿಸಿದರು.

ಬೆಂಗಳೂರು ಕೆರೆಗಳ ವಿಚಾರವಾಗಿ ಕೇಳಿದಾಗ, “ಬೆಂಗಳೂರು ಕೆರೆಗಳ ವಿಚಾರವಾಗಿ ಮತ್ತೊಂದು ಸಭೆ ಕರೆಯಲಿದ್ದೇನೆ. ಬಿಡಬ್ಲ್ಯೂಎಸ್ಎಸ್ ಬಿ ವ್ಯಾಪ್ತಿಯಲ್ಲಿ ಕೆರೆ ಅಭಿವೃದ್ಧಿ ಪ್ರಾಧಿಕಾರ ಮಾಡಿ ಎಲ್ಲಾ ಕೆರೆಗಳಿಗೆ ಶುದ್ಧೀಕರಿಸಿದ ನೀರನ್ನು ಹರಿಸಲಾಗುವುದು. ಆಮೂಲಕ ಅಂತರ್ಜಲ ಹೆಚ್ಚಿಸಲಾಗುವುದು” ಎಂದು ತಿಳಿಸಿದರು.

ಬಿಬಿಎಂಪಿ ಚುನಾವಣೆ ಸಂಬಂಧ ಚರ್ಚೆ ಆಯಿತಾ, ಚುನಾವಣೆ ಯಾವಾಗ ಮಾಡಬಹುದು ಎಂದು ಕೇಳಿದಾಗ, “ನ್ಯಾಯಾಲಯ ಆದೇಶ ನೀಡಿದ ನಂತರ ಖಂಡಿತವಾಗಿ ಚುನಾವಣೆ ಮಾಡಲಾಗುವುದು” ಎಂದು ತಿಳಿಸಿದರು.

ವಿಜಯೇಂದ್ರ ಅಪ್ರಬುದ್ಧ ರಾಜಕಾರಣಿ: ರಾಹುಲ್ ಗಾಂಧಿ ಪದೇ ಪದೆ ಪರಿಶಿಷ್ಟರ ಬಗ್ಗೆ ಮಾತನಾಡುತ್ತಾರೆ ಹಾಗಾಗಿ ವಾಲ್ಮಿಕಿ ನಿಗಮದ ಹಗರಣ ಹಾಗೂ ಮೂಡಾ ಹಗರಣದ ಬಗ್ಗೆ ಮಾತನಾಡಬೇಕು ಎಂಬ ವಿಜಯೇಂದ್ರ ಅವರ ಹೇಳಿಕೆ ಬಗ್ಗೆ ಕೇಳಿದಾಗ, “ರಾಹುಲ್ ಗಾಂಧಿ ಅವರಿಗೂ ಈ ಪ್ರಕರಣಕ್ಕೂ ಸಂಬಂಧವಿಲ್ಲ. ಹಾಗೆ ನೋಡಿದರೆ ವಾಲ್ಮೀಕಿ ಹಗರಣದಲ್ಲಿ ಬ್ಯಾಂಕ್ ಅಧಿಕಾರಿಗಳು ಭಾಗಿಯಾಗಿರುವುದರಿಂದ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತರಾಮನ್ ಅವರು ಮಾತನಾಡಬೇಕು. ಬ್ಯಾಂಕ್ ಗಳು ಕೇವಲ 2 ಗಂಟೆಗಳಲ್ಲಿ ಸಾಲವನ್ನು ಮಂಜೂರು ಮಾಡಿದ್ದು, ಬ್ಯಾಂಕುಗಳ ಅಧಿಕಾರವನ್ನು ಹೊಂದಿರುವ ನಿರ್ಮಲಾ ಸೀತರಾಮನ್ ಅವರ ಮಾತನಾಡಬೇಕು ಎಂದು ಅವರು ಕೇಳುತ್ತಿಲ್ಲ ಯಾಕೆ? ವಿಜಯೇಂದ್ರ ಓರ್ವ ಅಪ್ರಬುದ್ಧ ರಾಜಕಾರಣಿ. ಅವರ ಹಗರಣಗಳನ್ನು ನಾವು ಸಧ್ಯದಲ್ಲೇ ಬಹಿರಂಗಪಡಿಸುತ್ತೇವೆ. ಅವರ ಹಗರಣಗಳ ಬಗ್ಗೆ ಬಿಜೆಪಿ ಪಕ್ಷಕ್ಕೂ ಗೊತ್ತಿದೆ. ಅವರ ಅಂತಾರಾಷ್ಟ್ರೀಯ ಮಟ್ಟದಿಂದ ಹಣ ವರ್ಗಾವಣೆಯಾಗಿರುವುದು ಸೇರಿದಂತೆ ಅನೇಕ ವಿಚಾರಗಳಿವೆ. ಅವರ ತಂದೆ ಮುಖ್ಯಮಂತ್ರಿಯಾಗಿದ್ದಾಗ ಏನೆಲ್ಲಾ ಮಾಡಿದ್ದಾರೆ ಎಂದು ಗೊತ್ತಿದೆ. ಅವರ ತಂದೆ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು ಯಾಕೆ? ವಿಜಯೇಂದ್ರ ಅವರು ಪ್ರಮಾಣಿಕರಾಗಿಲ್ಲ. ಹೀಗಾಗಿ ಅವರು ಈ ವಿಚಾರದಲ್ಲಿ ಮಾತನಾಡುವ ನೈತಿಕತೆ ಹೊಂದಿಲ್ಲ” ಎಂದು ತಿಳಿಸಿದರು.

ಮೂಡಾ ಹಗರಣದಲ್ಲಿ ಕಾಂಗ್ರೆಸ್ ನಾಯಕರ ಕೈವಾಡವಿದೆ ಎಂಬ ವಿಜಯೇಂದ್ರ ಅವರ ಹೇಳಿಕೆ ಬಗ್ಗೆ ಕೇಳಿದಾಗ, “ಮೂಡಾ ಹಗರಣಗಳನ್ನು ಮಾಡಿರುವುದು ಬಿಜೆಪಿ. ನಮ್ಮ ಮುಖ್ಯಮಂತ್ರಿಗಳು ಹಾಗೂ ಅವರ ಕುಟುಂಬದವರಿಗೂ ಈ ಅಕ್ರಮಕ್ಕೂ ಸಂಬಂಧವಿಲ್ಲ. ಮೂಡಾ ಅವರು ಇವರ ಜಮೀನನ್ನು ಒತ್ತುವರಿ ಮಾಡಿಕೊಂಡ ಪರಿಣಾಮ ಮುಖ್ಯಮಂತ್ರಿಗಳ ಕುಟುಂಬದವರು ಮೂಡಾ ಸಂಸ್ಥೆಯಿಂದ ಪರಿಹಾರ ಪಡೆಯಲು ಅರ್ಹರಾಗಿದ್ದು, ಅವರು ಪರಿಹಾರ ಪಡೆದಿದ್ದಾರೆ. ಕಾನೂನು ಪ್ರಕಾರವಾಗಿ ಅವರು ಪರಿಹಾರ ಪಡೆದಿದ್ದಾರೆ. ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಬದಲಿ ನಿವೇಷನ ಕೇಳಿದ್ದಾರೆ. ಅದೇ ರೀತಿ ಅನೇಕರು ನಿವೇಷನ ಪಡೆದಿದ್ದಾರೆ. ಮೂಡಾದಲ್ಲಿ ಅಕ್ರಮ ನಡೆದಿದ್ದರೆ ಅದು ಬಿಜೆಪಿ ಆಡಳಿತ ಅವಧಿಯಲ್ಲಿ ನಡೆದಿದೆ. ಬೊಮ್ಮಾಯಿ ಹಾಗೂ ಯಡಿಯೂರಪ್ಪ ಅವರು ಸಿಎಂ ಆಗಿದ್ದಾಗ ಅಕ್ರಮ ನಡೆದಿದೆ. ಈ ಕಾರಣಕ್ಕೆ ನಮ್ಮ ಮುಖ್ಯಮಂತ್ರಿಗಳು 2006ರಿಂದ ಮೂಡಾ ಅಕ್ರಮ ತನಿಖೆ ನಡೆಸಲು ತೀರ್ಮಾನಿಸಲಾಗಿದೆ” ಎಂದು ತಿಳಿಸಿದರು.

About the Author

The Bengaluru Live

Administrator

Visit Website View All Posts

Post navigation

Previous: ಬೂತ್ ಗಳಲ್ಲಿ ರಾಜಕೀಯ ಮಾಡೋಣ, ಈಗ ಎಲ್ಲರೂ ಸೇರಿ ಬೆಂಗಳೂರನ್ನು ಕಟ್ಟೋಣ: ಡಿಸಿಎಂ ಡಿ.ಕೆ ಶಿವಕುಮಾರ್ ಕರೆ
Next: ಹುಚ್ಚಾಸ್ಪತ್ರೆಯಲ್ಲಿ ಕುಮಾರಸ್ವಾಮಿಗೆ ಆದಷ್ಟು ಬೇಗ ಚಿಕಿತ್ಸೆ ಕೊಡಿಸಬೇಕು: ಡಿಸಿಎಂ ಡಿ.ಕೆ. ಶಿವಕುಮಾರ್

Related Stories

ಸಿಸಿಬಿ ವಶಪಡಿಸಿಕೊಂಡ ಶಸ್ತ್ರಾಸ್ತ್ರಗಳನ್ನು ತೋರಿಸುವ ಬೆಂಗಳೂರು ನಗರ ಪೊಲೀಸ್ ವಿಡಿಯೊದ ದೃಶ್ಯ
  • ಅಪರಾಧ
  • ಬೆಂಗಳೂರು ನಗರ

ಅಕ್ರಮ ಶಸ್ತ್ರಾಸ್ತ್ರ ಹೊಂದಿದ್ದ ಆರೋಪದಲ್ಲಿ 32 ವರ್ಷದ ವ್ಯಕ್ತಿಯನ್ನು ಬಂಧಿಸಿದ ಬೆಂಗಳೂರು ಸಿಸಿಬಿ

The Bengaluru Live November 11, 2026 8:20 AM
ಹೆಣ್ಣೂರು–ಬಾಗಲೂರು ರಸ್ತೆಯಲ್ಲಿ ಹೊಸದಾಗಿ ಹಾಕಿದ ಕಾಂಕ್ರೀಟ್ ಪಕ್ಕದಲ್ಲಿ ಕೆಲಸ ಮಾಡುತ್ತಿರುವ ಕಾರ್ಮಿಕರು.
  • ಬೆಂಗಳೂರು ನಗರ

ಹೆಣ್ಣೂರು–ಬಾಗಲೂರು ರಸ್ತೆಯ 170 ಮೀಟರ್ ಭಾಗದಲ್ಲಿ ಕಾಂಕ್ರೀಟ್ ಹಾಕುವ ಕಾಮಗಾರಿ ಪೂರ್ಣ

The Bengaluru Live November 11, 2026 1:28 AM
ಎತ್ತರಿಸಿದ ಹಳಿಗಳ ಮೇಲೆ ಸಾಗುತ್ತಿರುವ ನಮ್ಮ ಮೆಟ್ರೋ ರೈಲು
  • ಬೆಂಗಳೂರು ನಗರ
  • ಕರ್ನಾಟಕ

ಬೆಂಗಳೂರು ಮೆಟ್ರೋ ಹಣಕಾಸು ವಿವಾದ: ಕರ್ನಾಟಕದ ಪಾಲು ₹65,291 ಕೋಟಿ ಎಂದ ಕಾಂಗ್ರೆಸ್

The Bengaluru Live November 11, 2026 12:25 AM

Latest Post

ನ.14ಕ್ಕೆ ಕಾವೇರಿ ಐಟಿ ಸೆಲ್ ಉದ್ಘಾಟನೆ: ನೋಂದಣಿ ಇಲಾಖೆ ಕಾಮಗಾರಿಗಳಿಗೂ ಪರಮೇಶ್ವರ್ ಚಾಲನೆ parameshwara-file-photo
  • ಕರ್ನಾಟಕ

ನ.14ಕ್ಕೆ ಕಾವೇರಿ ಐಟಿ ಸೆಲ್ ಉದ್ಘಾಟನೆ: ನೋಂದಣಿ ಇಲಾಖೆ ಕಾಮಗಾರಿಗಳಿಗೂ ಪರಮೇಶ್ವರ್ ಚಾಲನೆ

November 12, 2026 7:13 PM
ಎಸ್‌ಸಿ, ಎಸ್‌ಟಿ ಸಮುದಾಯಗಳ ಅನುದಾನ ಗೋಚರವಾಗಿರಲಿ, ಸುಪ್ರೀಂ ಕೋರ್ಟ್ ಮಾರ್ಗಸೂಚಿಯಂತೆ ಕೆಲಸ ಮಾಡಿ: ಸಿಎಂ ಶಿವಕುಮಾರ್ cm-scst-council-meeting-20261112
  • ಕರ್ನಾಟಕ

ಎಸ್‌ಸಿ, ಎಸ್‌ಟಿ ಸಮುದಾಯಗಳ ಅನುದಾನ ಗೋಚರವಾಗಿರಲಿ, ಸುಪ್ರೀಂ ಕೋರ್ಟ್ ಮಾರ್ಗಸೂಚಿಯಂತೆ ಕೆಲಸ ಮಾಡಿ: ಸಿಎಂ ಶಿವಕುಮಾರ್

November 12, 2026 7:10 PM
ನಮ್ಮ ಮೆಟ್ರೊ ಹಣಕಾಸು ಲೆಕ್ಕದಲ್ಲಿ ರಾಜ್ಯದ ಕುಚೇಷ್ಟೆ: 29 ಸಾವಿರ ಕೋಟಿ ಸಾಲ ರಾಜ್ಯದ ಕಾಲಂಗೆ ಎಂದ ತೇಜಸ್ವಿ ಸೂರ್ಯ tejasvi-surya-metro-presser-20261112
  • ಕರ್ನಾಟಕ

ನಮ್ಮ ಮೆಟ್ರೊ ಹಣಕಾಸು ಲೆಕ್ಕದಲ್ಲಿ ರಾಜ್ಯದ ಕುಚೇಷ್ಟೆ: 29 ಸಾವಿರ ಕೋಟಿ ಸಾಲ ರಾಜ್ಯದ ಕಾಲಂಗೆ ಎಂದ ತೇಜಸ್ವಿ ಸೂರ್ಯ

November 12, 2026 7:07 PM
ಬಿರ್ಸಾ ಮುಂಡಾ 151ನೇ ಜನ್ಮ ಜಯಂತಿ: ನ.15ಕ್ಕೆ ದೇಶಾದ್ಯಂತ ಬಿಜೆಪಿ ವಿಶೇಷ ಕಾರ್ಯಕ್ರಮ, ಛಲವಾದಿ ನಾರಾಯಣಸ್ವಾಮಿ ಮಾಹಿತಿ bjp-chalavadi-complaint-commissioner-20261107-1738
  • ಕರ್ನಾಟಕ

ಬಿರ್ಸಾ ಮುಂಡಾ 151ನೇ ಜನ್ಮ ಜಯಂತಿ: ನ.15ಕ್ಕೆ ದೇಶಾದ್ಯಂತ ಬಿಜೆಪಿ ವಿಶೇಷ ಕಾರ್ಯಕ್ರಮ, ಛಲವಾದಿ ನಾರಾಯಣಸ್ವಾಮಿ ಮಾಹಿತಿ

November 12, 2026 7:04 PM
ಓಕಳೀಪುರಂ ಅಷ್ಟಪಥ ಕಾರಿಡಾರ್ ಸುತ್ತ ರಸ್ತೆ ಡಾಂಬರೀಕರಣ ಓಕಳಿಪುರಂ ಎಂಟು ಪಥದ ಕಾರಿಡಾರ್ ಬಳಿ ರಾತ್ರಿ ಡಾಂಬರೀಕರಣ ಕಾಮಗಾರಿಯಲ್ಲಿ ರಸ್ತೆ ರೋಲರ್
  • ಬೆಂಗಳೂರು

ಓಕಳೀಪುರಂ ಅಷ್ಟಪಥ ಕಾರಿಡಾರ್ ಸುತ್ತ ರಸ್ತೆ ಡಾಂಬರೀಕರಣ

November 12, 2026 3:58 PM
ಪಿಂಕ್ ಲೈನ್ ಉದ್ಘಾಟನೆಯ ಅಂತಿಮ ಪಟ್ಟಿಯಿಂದ ನನ್ನ ಭಾಷಣ ಕೈಬಿಟ್ಟಿದ್ದಾರೆ: ಕೃಷ್ಣ ಬೈರೇಗೌಡ ಮೆಟ್ರೋ ಕಾಮಗಾರಿ ಸ್ಥಳದಲ್ಲಿ ಕೃಷ್ಣ ಬೈರೇಗೌಡ ಮತ್ತು ಅಧಿಕಾರಿಗಳು
  • ಬೆಂಗಳೂರು

ಪಿಂಕ್ ಲೈನ್ ಉದ್ಘಾಟನೆಯ ಅಂತಿಮ ಪಟ್ಟಿಯಿಂದ ನನ್ನ ಭಾಷಣ ಕೈಬಿಟ್ಟಿದ್ದಾರೆ: ಕೃಷ್ಣ ಬೈರೇಗೌಡ

November 12, 2026 3:50 PM

ನೀವು ತಪ್ಪಿಸಿಕೊಂಡಿರಬಹುದು

parameshwara-file-photo
  • ಕರ್ನಾಟಕ

ನ.14ಕ್ಕೆ ಕಾವೇರಿ ಐಟಿ ಸೆಲ್ ಉದ್ಘಾಟನೆ: ನೋಂದಣಿ ಇಲಾಖೆ ಕಾಮಗಾರಿಗಳಿಗೂ ಪರಮೇಶ್ವರ್ ಚಾಲನೆ

The Bengaluru Live November 12, 2026 7:13 PM
cm-scst-council-meeting-20261112
  • ಕರ್ನಾಟಕ

ಎಸ್‌ಸಿ, ಎಸ್‌ಟಿ ಸಮುದಾಯಗಳ ಅನುದಾನ ಗೋಚರವಾಗಿರಲಿ, ಸುಪ್ರೀಂ ಕೋರ್ಟ್ ಮಾರ್ಗಸೂಚಿಯಂತೆ ಕೆಲಸ ಮಾಡಿ: ಸಿಎಂ ಶಿವಕುಮಾರ್

The Bengaluru Live November 12, 2026 7:10 PM
tejasvi-surya-metro-presser-20261112
  • ಕರ್ನಾಟಕ

ನಮ್ಮ ಮೆಟ್ರೊ ಹಣಕಾಸು ಲೆಕ್ಕದಲ್ಲಿ ರಾಜ್ಯದ ಕುಚೇಷ್ಟೆ: 29 ಸಾವಿರ ಕೋಟಿ ಸಾಲ ರಾಜ್ಯದ ಕಾಲಂಗೆ ಎಂದ ತೇಜಸ್ವಿ ಸೂರ್ಯ

The Bengaluru Live November 12, 2026 7:07 PM
bjp-chalavadi-complaint-commissioner-20261107-1738
  • ಕರ್ನಾಟಕ

ಬಿರ್ಸಾ ಮುಂಡಾ 151ನೇ ಜನ್ಮ ಜಯಂತಿ: ನ.15ಕ್ಕೆ ದೇಶಾದ್ಯಂತ ಬಿಜೆಪಿ ವಿಶೇಷ ಕಾರ್ಯಕ್ರಮ, ಛಲವಾದಿ ನಾರಾಯಣಸ್ವಾಮಿ ಮಾಹಿತಿ

The Bengaluru Live November 12, 2026 7:04 PM

ನಮ್ಮ ಕುರಿತು

ಬೆಂಗಳೂರು ಲೈವ್ ಬೆಂಗಳೂರು ಮತ್ತು ಕರ್ನಾಟಕವನ್ನು ಕೇಂದ್ರೀಕರಿಸಿ ಇಂಗ್ಲಿಷ್ ಮತ್ತು ಕನ್ನಡದಲ್ಲಿ ಸುದ್ದಿ ಹಾಗೂ ಮಾಹಿತಿಯನ್ನು ಪ್ರಕಟಿಸುವ ಸ್ವತಂತ್ರ ಡಿಜಿಟಲ್ ಸುದ್ದಿ ಪ್ರಕಟಣೆಯಾಗಿದೆ. ಇದು ಫೆಬ್ರವರಿ 2020ರಿಂದ ಕಾರ್ಯನಿರ್ವಹಿಸುತ್ತಿದೆ.

ಉಪಯುಕ್ತ ಕೊಂಡಿಗಳು

  • ಬೆಂಗಳೂರು ಲೈವ್ ಕುರಿತು
  • ಸಂಪರ್ಕಿಸಿ
  • ಸಂಪಾದಕೀಯ ಮಾನದಂಡಗಳು ಮತ್ತು ತಿದ್ದುಪಡಿ ನೀತಿ
  • ಪ್ರಕಾಶಕರು, ಸಂಪಾದಕೀಯ ಹೊಣೆಗಾರಿಕೆ ಮತ್ತು ದೂರು ಪರಿಹಾರ
  • ಮಾಲೀಕತ್ವ ಮತ್ತು ಹಣಕಾಸು ಪಾರದರ್ಶಕತೆ
  • ನಮ್ಮೊಂದಿಗೆ ಜಾಹೀರಾತು ನೀಡಿ
  • ಗೌಪ್ಯತಾ ನೀತಿ
  • ಸೇವಾ ನಿಯಮಗಳು
  • ಪತ್ರಿಕಾ ಪ್ರಕಟಣೆ ಸಲ್ಲಿಸಿ

ಇತ್ತೀಚಿನ ಸುದ್ದಿಗಳು

  • ನ.14ಕ್ಕೆ ಕಾವೇರಿ ಐಟಿ ಸೆಲ್ ಉದ್ಘಾಟನೆ: ನೋಂದಣಿ ಇಲಾಖೆ ಕಾಮಗಾರಿಗಳಿಗೂ ಪರಮೇಶ್ವರ್ ಚಾಲನೆ
  • ಎಸ್‌ಸಿ, ಎಸ್‌ಟಿ ಸಮುದಾಯಗಳ ಅನುದಾನ ಗೋಚರವಾಗಿರಲಿ, ಸುಪ್ರೀಂ ಕೋರ್ಟ್ ಮಾರ್ಗಸೂಚಿಯಂತೆ ಕೆಲಸ ಮಾಡಿ: ಸಿಎಂ ಶಿವಕುಮಾರ್
  • ನಮ್ಮ ಮೆಟ್ರೊ ಹಣಕಾಸು ಲೆಕ್ಕದಲ್ಲಿ ರಾಜ್ಯದ ಕುಚೇಷ್ಟೆ: 29 ಸಾವಿರ ಕೋಟಿ ಸಾಲ ರಾಜ್ಯದ ಕಾಲಂಗೆ ಎಂದ ತೇಜಸ್ವಿ ಸೂರ್ಯ
  • ಬಿರ್ಸಾ ಮುಂಡಾ 151ನೇ ಜನ್ಮ ಜಯಂತಿ: ನ.15ಕ್ಕೆ ದೇಶಾದ್ಯಂತ ಬಿಜೆಪಿ ವಿಶೇಷ ಕಾರ್ಯಕ್ರಮ, ಛಲವಾದಿ ನಾರಾಯಣಸ್ವಾಮಿ ಮಾಹಿತಿ
©Copyright 2025 The Bengaluru Live All rights reserved. | MoreNews by AF themes.