ಚಿಕ್ಕಮಗಳೂರು/ಬೆಂಗಳೂರು:
ಯಾರೇ ಸಂಪರ್ಕ ಮಾಡಿದರೂ ಕೂಡ ನಮ್ಮ ಶಾಸಕರು ಗಟ್ಟಿಯಾಗಿದ್ದಾರೆ. ಬಿಜೆಪಿ ಪ್ರಯತ್ನ ವಿಫಲವಾಗಲಿದೆ. ನಮ್ಮ ಶಾಸಕರನ್ನು ಸೆಳೆಯುವ ಬಿಜೆಪಿಯವರ ಪ್ರಯತ್ನ ಫಲಿಸಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಆಪರೇಷನ್ ಕಮಲದ ಏಜೆಂಟರು ಕಾಂಗ್ರೆಸ್ ಶಾಸಕರ ಸಂಪರ್ಕದಲ್ಲಿದ್ದಾರೆ ಎಂದು ಡಿ.ಕೆ.ಶಿವಕುಮಾರ್ ಅವರು ದೆಹಲಿಯಲ್ಲಿ ಹೇಳಿಕೆ ನೀಡಿರುವ ಬಗ್ಗೆ ಮಾತನಾಡಿ ನಮ್ಮ ಸರ್ಕಾರ ಗಟ್ಟಿಯಾಗಿದೆ. ನಮ್ಮ ಶಾಸಕರನ್ನು ಸೆಳೆಯುವ ಬಿಜೆಪಿಯವರ ಪ್ರಯತ್ನ ಫಲಿಸುವುದಿಲ್ಲ ಎಂದರು.
ಕಾಂಗ್ರೆಸ್ ಶಾಸಕರನ್ನು ಬಿಜೆಪಿ ಬೆದರಿಸುತ್ತಿದೆ ಎಂದು ಗುಪ್ತಚರ ಇಲಾಖೆ ಮಾಹಿತಿ ಇದೆಯೇ ಎಂಬ ಪ್ರಶ್ನೆಗೆ ಆ ಇಲಾಖೆ ನನ್ನ ಕೈಕೆಳಗೆ ಕೆಲಸ ನಿರ್ವಹಿಸುತ್ತಿದೆ. ಈ ವಿಚಾರ ಮೊದಲು ನನಗೆ ತಿಳಿಯಬೇಕಲ್ಲವೇ ಇದೆಲ್ಲ ಸುಳ್ಳು ಎಂದು ಅಲ್ಲಗಳೆದರು.