Home ಬೆಂಗಳೂರು ನಗರ ಪಂಡಿತ್ ದೀನದಯಾಳ್ ಉಪಾಧ್ಯಾಯ ಅವರ ಸ್ಮರಣೆ

ಪಂಡಿತ್ ದೀನದಯಾಳ್ ಉಪಾಧ್ಯಾಯ ಅವರ ಸ್ಮರಣೆ

35
0
Advertisement
bengaluru

ಬೆಂಗಳೂರು:

ಹಿರಿಯ ರಾಜಕೀಯ ನೇತಾರ ಪಂಡಿತ್ ದೀನದಯಾಳ್ ಉಪಾಧ್ಯಾಯ ಅವರ 53ನೇ ಪುಣ್ಯತಿಥಿಯ ಅಂಗವಾಗಿ ನಗರದ ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ”ದಲ್ಲಿ ಗುರುವಾರ ಉಪಾಧ್ಯಾಯ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಗೌರವ ಸಮರ್ಪಿಸಲಾಯಿತು.

ಶಾಸಕರಾದ ಮುನಿರತ್ನ, ಪಕ್ಷದ ರಾಜ್ಯ ಉಪಾಧ್ಯಕ್ಷರಾದ ಶಂಕರಪ್ಪ, ಕಾರ್ಯದರ್ಶಿಗಳಾದ ಜಗದೀಶ ಹಿರೇಮನಿ, ರಾಜ್ಯ ಕಾರ್ಯಾಲಯ ಕಾರ್ಯದರ್ಶಿಗಳಾದ ಲೋಕೇಶ್ ಅಂಬೆಕಲ್ಲು, ಎಸ್‍ಸಿ ಮೋರ್ಚಾ ರಾಜ್ಯ ಅಧ್ಯಕ್ಷರಾದ ಚಲವಾದಿ ನಾರಾಯಣಸ್ವಾಮಿ, ಪಕ್ಷದ ಮುಖಂಡರು, ಕಾರ್ಯಕರ್ತರು ಭಾಗವಹಿಸಿದ್ದರು.

ಅಂತ್ಯೋದಯ, ಏಕಾತ್ಮ ಮಾನವತಾವಾದದ ಹರಿಕಾರರಾದ ಉಪಾಧ್ಯಾಯ ಅವರು ರಾಷ್ಟ್ರೀಯ ಸ್ವಯಂಸೇವಕ ಸಂಘದಲ್ಲಿ ತಮ್ಮನ್ನು ಸಮರ್ಪಿಸಿಕೊಂಡಿದ್ದರು. ಭಾರತೀಯ ಜನಸಂಘದ ಹಿರಿಯ ನಾಯಕರಾಗಿ ಸಮಾಜಸೇವೆಯಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದರು. ಅವರ ಸರಳ ಜೀವನ ಮತ್ತು ಆದರ್ಶದ ಚಿಂತನೆಗಳನ್ನು ನಾವು ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಅತಿಥಿಗಳು ತಿಳಿಸಿದರು.

bengaluru bengaluru

bengaluru

LEAVE A REPLY

Please enter your comment!
Please enter your name here