ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಐದು ವರ್ಷ ಅವಧಿ ಪೂರೈಸುತ್ತಾರೆ ಎಂಬ ಹೇಳಿಕೆಯ ನಡುವೆಯೇ, ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಅವರು ಕರ್ನಾಟಕ ನಾಯಕತ್ವದ ಕುರಿತು ತೀರ್ಮಾನ ಮಾಡುವ ಅಧಿಕಾರ ಕಾಂಗ್ರೆಸ್ ಹೈಕಮಾಂಡ್ಗೇ ಸೇರಿದೆ ಎಂದು ಸ್ಪಷ್ಟಪಡಿಸಿದರು.
ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, “ಪ್ರತಿ ಬಾರಿ ನಾನು ಕರ್ನಾಟಕಕ್ಕೆ ಬಂದಾಗ ಇದೇ ಪ್ರಶ್ನೆ ಕೇಳಲಾಗುತ್ತದೆ. ನಮ್ಮ ಪಕ್ಷದಲ್ಲಿ ಏನಾಗಬೇಕು, ಹೇಗಾಗಬೇಕು ಎಂಬುದರ ಕುರಿತು ತೀರ್ಮಾನ ಮಾಡುವ ಸಾಮರ್ಥ್ಯ ಕಾಂಗ್ರೆಸ್ಗೆ ಇದೆ. ಆ ಅಧಿಕಾರವನ್ನು ನಮಗೆ ಬಿಡಿ. ಅಗತ್ಯ ಬಿದ್ದಾಗ ಪಕ್ಷ ಸೂಕ್ತ ತೀರ್ಮಾನ ಮಾಡುತ್ತದೆ” ಎಂದು ಹೇಳಿದರು.
ಅವರ ಹೇಳಿಕೆ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ. ಶಿವಕುಮಾರ್ ನಡುವೆ ಅಧಿಕಾರ ಹಂಚಿಕೆ ಕುರಿತ ಚರ್ಚೆ ಮರುಕಳಿಸಿರುವ ಸಂದರ್ಭದಲ್ಲಿ ಮಹತ್ವ ಪಡೆದಿದೆ.
