Home ಕೋಲಾರ ಲಸಿಕೆ‌ ಮೇಲೆ ಜನರಿಗೆ ನಂಬಿಕೆ ಬಂದಿದೆ: ಆರೋಗ್ಯ ಸಚಿವ ಡಾ. ಕೆ. ಸುಧಾಕರ್

ಲಸಿಕೆ‌ ಮೇಲೆ ಜನರಿಗೆ ನಂಬಿಕೆ ಬಂದಿದೆ: ಆರೋಗ್ಯ ಸಚಿವ ಡಾ. ಕೆ. ಸುಧಾಕರ್

51
0
People are beliving in Vaccination says Karnataka Health Minister

ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ 24 ಗಂಟೆ ವೈದ್ಯರ ಸೇವೆ

ಕೋಲಾರ:

ಕೋವಿಡ್ ಲಸಿಕೆ ಬಗ್ಗೆ ಕೆಲವರು ತಪ್ಪು ತಿಳಿವಳಿಕೆ ಮೂಡಿಸುತ್ತಿದ್ದರೂ, ಜನರಿಗೆ ಲಸಿಕೆ ಮೇಲೆ ಸಂಪೂರ್ಣ ನಂಬಿಕೆ ಬಂದಿದೆ. ಲಸಿಕೆ ಪಡೆಯಲು ಜನರು ಸಾಲುಸಾಲಾಗಿ ಬರುತ್ತಿದ್ದು, ಇದನ್ನು ತಪ್ಪಿಸಲು ಸಾಧ್ಯವಿಲ್ಲ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಹೇಳಿದರು.

ಕೋಲಾರದಲ್ಲಿ ಮುದುವಾಡಿ ಪ್ರಾಥಮಿಕ ಆರೋಗ್ಯ ಕೇಂದ್ರ ಉದ್ಘಾಟಿಸಿ ಮಾತನಾಡಿದ ಸಚಿವರು, ಪ್ರಧಾನಿ ನರೇಂದ್ರ ಮೋದಿ ಸರ್ಕಾರ 35 ಸಾವಿರ ಕೋಟಿ ರೂ. ಮೀಸಲಿಟ್ಟು ಎಲ್ಲ ರಾಜ್ಯಗಳಿಗೆ ಲಸಿಕೆ ಪೂರೈಸಿದೆ. ರಾಜ್ಯದಲ್ಲಿ ಲಸಿಕೆ ಮೇಳ ಮಾಡುತ್ತಿದ್ದು, ಜನರಿಗೆ ಲಸಿಕೆ ಮೇಲೆ ನಂಬಿಕೆ ಬಂದಿದೆ. ಇದನ್ನು ಬಿಜೆಪಿ ಲಸಿಕೆ, ಮೋದಿ ಲಸಿಕೆ ಎಂದು ಹೇಳಿದರೂ, ಜನರು ಸಾಲುಸಾಲಾಗಿ ಬಂದು ಲಸಿಕೆ ಪಡೆಯುತ್ತಿದ್ದಾರೆ. ಈ ಸಾಲು ತಪ್ಪಿಸಲು ಯಾರಿಗೂ ಸಾಧ್ಯವಿಲ್ಲ. ಇನ್ನೂ ಕೆಲವರಲ್ಲಿ ಲಸಿಕೆ ಬಗ್ಗೆ ಆತಂಕ ಇದೆ. ಸ್ಥಳೀಯ ಪ್ರತಿನಿಧಿಗಳು, ಅಧಿಕಾರಿಗಳು ಈ ಬಗ್ಗೆ ಅರಿವು ಮೂಡಿಸಬೇಕು. ಪ್ರತಿ ಗ್ರಾಮ ಮಟ್ಟದಲ್ಲಿ ಕಾರ್ಯಪಡೆ ಇದ್ದು, ಇದರ ಮೂಲಕ ಅರಿವು ಮೂಡಿಸಬಹುದು ಎಂದರು.

ಮುಂದಿನ ವರ್ಷದಿಂದ ಇನ್ನಷ್ಟು ಉತ್ತಮವಾಗಿ ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ನಿರ್ಮಿಸಲಾಗುವುದು. ಈಗ 2 ಕೋಟಿ ರೂ. ವೆಚ್ಚದಲ್ಲಿ ಪಿಎಚ್ ಸಿ ನಿರ್ಮಿಸುತ್ತಿದ್ದು, ಮುಂದೆ 7-8 ಕೋಟಿ ರೂ. ವೆಚ್ಚದಲ್ಲಿ ಪಿಎಚ್ ಸಿ ನಿರ್ಮಾಣವಾಗಲಿದೆ. 6 ರಿಂದ 12 ಹಾಸಿಗೆಗಳು, ಐಸಿಯು, 24 ಗಂಟೆ ಕಾರ್ಯನಿರ್ವಹಿಸುವ ಮೂರು ವೈದ್ಯರು ಮೊದಲಾದ ವ್ಯವಸ್ಥೆ ಹೊಸ ಪಿಎಚ್ ಸಿಗಳಲ್ಲಿ ಇರಲಿದೆ ಎಂದರು.

ಸರ್ಕಾರದಿಂದ ಅನೇಕ ಕ್ರಾಂತಿಕಾರಿ ಸುಧಾರಣೆ ಕೈಗೊಂಡಿದ್ದು, ಕೇವಲ ಐದಾರು ತಿಂಗಳಲ್ಲಿ ಸುಮಾರು 4 ಸಾವಿರ ವೈದ್ಯರನ್ನು ನೇಮಕ ಮಾಡಲಾಗಿದೆ. ಕೋವಿಡ್ ಗೆ ಮುನ್ನ ಸರ್ಕಾರಿ ಆಸ್ಪತ್ರೆಗಳಲ್ಲಿ 4-5 ಸಾವಿರ ಆಕ್ಸಿಜನ್ ಹಾಸಿಗೆ ಇದ್ದರೆ, ಈಗ 45 ಸಾವಿರ ಆಕ್ಸಿಜನ್ ಸಹಿತ ಹಾಸಿಗೆಗಳಿವೆ ಎಂದು ಮಾಹಿತಿ ನೀಡಿದರು.

ರಾಜಕೀಯ ಬೇಡ

ಪ್ರತ್ಯೇಕ ಹಾಲು ಒಕ್ಕೂಟ ಜನತೆಯ ಬೇಡಿಕೆಯಾಗಿದೆ. ಇದನ್ನು ರಚನಾತ್ಮಕವಾಗಿ ನೋಡಬೇಕೇ ಹೊರತು ರಾಜಕೀಯದಿಂದ ನೋಡಬಾರದು. ಒಕ್ಕೂಟ ಪ್ರತ್ಯೇಕವಾಗುವುದರಿಂದ ಸ್ಪರ್ಧೆ ಹೆಚ್ಚುತ್ತದೆ ಎಂದು ಸಚಿವರು ಸ್ಪಷ್ಟಪಡಿಸಿದರು.

ಸಚಿವರು ಹೇಳಿದ ಇತರೆ ಅಂಶಗಳು

  • ಎಲ್ಲಾ ಆಸ್ಪತ್ರೆಗಳ ಮುಂಭಾಗ ‘ಸರ್ಕಾರದ ಕೆಲಸ ದೇವರ ಕೆಲಸ’ ಎಂದು ಬರೆಸಲಾಗುವುದು.
  • ಕೋಲಾರ ಜಿಲ್ಲಾಸ್ಪತ್ರೆಯಲ್ಲಿ ಎಲ್ಲ ಉಪಕರಣ ಬಳಕೆಗೆ ಕ್ರಮ ವಹಿಸಲಾಗಿದೆ.
  • ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಅವರು ಹಗುರವಾಗಿ ಮಾತನಾಡುವುದು ಅವರಿಗೆ ಶೋಭೆ ತರುವುದಿಲ್ಲ.
  • ಗ್ರಾಮಗಳಲ್ಲಿ 24 ಗಂಟೆ ಆರೋಗ್ಯ ಕೇಂದ್ರಗಳನ್ನು ಆರಂಭಿಸುವ ಪ್ರಯತ್ನ ನಡೆಯುತ್ತಿದೆ.

LEAVE A REPLY

Please enter your comment!
Please enter your name here