Skip to content
ದಿ ಬೆಂಗಳೂರು ಲೈವ್ | ಕನ್ನಡ ಸುದ್ದಿ, ಬ್ರೇಕಿಂಗ್ ಅಪ್ಡೇಟ್ಸ್

ದಿ ಬೆಂಗಳೂರು ಲೈವ್ | ಕನ್ನಡ ಸುದ್ದಿ, ಬ್ರೇಕಿಂಗ್ ಅಪ್ಡೇಟ್ಸ್

ಇದು ನಿಮ್ಮ ಧ್ವನಿ

Primary Menu
  • ಮುಖಪುಟ
  • ಪ್ರಾಯೋಜಿತ
  • ಬೆಂಗಳೂರು ನಗರ
  • ಅಪರಾಧ
  • ರಾಜಕೀಯ
  • English News
  • Delhi News
  • ಕರ್ನಾಟಕ
  • ಶಿಕ್ಷಣ
  • ಕ್ರೀಡೆ
  • Home
  • ಕರ್ನಾಟಕ
  • ನಗರ
  • ಮೈಸೂರು
  • ರಾಜ್ಯದ ಜನ ಬಿಜೆಪಿಯ ಸುಳ್ಳಿನ ಸಂಸ್ಕಾರವನ್ನು ಸೋಲಿಸಿ ಸತ್ಯದ ಘನತೆಯನ್ನು ಗೆಲ್ಲಿಸಿದ್ದಾರೆ: ಮುಖ್ಯಮಂತ್ರಿ ಸಿದ್ದರಾಮಯ್ಯ
  • ರಾಜಕೀಯ
  • ಮೈಸೂರು

ರಾಜ್ಯದ ಜನ ಬಿಜೆಪಿಯ ಸುಳ್ಳಿನ ಸಂಸ್ಕಾರವನ್ನು ಸೋಲಿಸಿ ಸತ್ಯದ ಘನತೆಯನ್ನು ಗೆಲ್ಲಿಸಿದ್ದಾರೆ: ಮುಖ್ಯಮಂತ್ರಿ ಸಿದ್ದರಾಮಯ್ಯ

Vighnesh Pawar June 10, 2023 3:30 PM 1 minute read
people of state have defeated BJP's culture of lies: Chief Minister Siddaramaiah

people of state have defeated BJP's culture of lies: Chief Minister Siddaramaiah

📗 ಈ ಸುದ್ದಿಯನ್ನು ಇಂಗ್ಲಿಷ್‌ನಲ್ಲಿ ಓದಿ

ವರುಣಾ ಕ್ಷೇತ್ರದ ಕಾರ್ಯಕರ್ತರು ಮತ್ತು ಮತದಾರರಿಗೆ ಕೃತಜ್ಞತಾ ಸಮರ್ಪಣಾ ಸಮಾರಂಭ

ಮೈಸೂರು:

ಭ್ರಷ್ಟಚಾರ, ದುರಾಡಳಿತ, ಅಭಿವೃದ್ಧಿಹೀನ ಮತ್ತು ಸಮಾಜವನ್ನು ಒಡೆಯುವ ದುಷ್ಟ ರಾಜಕಾರಣವನ್ನು ರಾಜ್ಯದ ಜನತೆ ಸೋಲಿಸಿ ಐತಿಹಾಸಿಕ ತೀರ್ಮಾನ ತೆಗೆದುಕೊಂಡಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು.

ವರುಣಾ ವಿಧಾನಸಭಾ ಕ್ಷೇತ್ರದ ಸುತ್ತೂರಿನಲ್ಲಿ ನಡೆದ ಬೃಹತ್ ಕೃತಜ್ಞತಾ ಸಮರ್ಪಣಾ ಸಭೆಯನ್ನು ಉದ್ದೇಶಿಸಿ ಮಾತನಾಡಿದರು.

ಇದು ನನ್ನ ಕೊನೆ ಚುನಾವಣೆ. ಆದರೆ ನಾನು ಉಸಿರು ಇರುವವರೆಗೂ ಸಕ್ರಿಯ ರಾಜಕಾರಣದಲ್ಲಿದ್ದು ಜನರ ಸೇವೆಯನ್ನು ಮುಂದುವರೆಸುತ್ತೇನೆ. 2013 ರಲ್ಲಿ ಮುಖ್ಯಮಂತ್ರಿ ಆಗಿದ್ದಾಗ ನುಡಿದಂತೆ ನಡೆದು ಸಮಾಜದ ಎಲ್ಲಾ ಜಾತಿ, ಧರ್ಮ ಮತ್ತು ಎಲ್ಲಾ ವರ್ಗಗಳ ಪರವಾಗಿ ಕಲ್ಯಾಣ ಕಾರ್ಯಕ್ರಮ ರೂಪಿಸಿದ್ದೆ. ಈ ಬಾರಿ ಇನ್ನಷ್ಟು ಪರಿಣಾಮಕಾರಿಯಾದ ಕಲ್ಯಾಣ ಕಾರ್ಯಕ್ರಮಗಳನ್ನು ನಮ್ಮ ಸರ್ಕಾರ ನಾಡಿಗೆ ನೀಡಲಿದೆ.

WhatsApp Image 2023 06 10 at 11.43.42 PM

ಬಸವಾದಿ ಶರಣರು ನುಡಿದಂತೆ ನಡೆದಿದ್ದರು. ಅದನ್ನೇ ನಾನು ಮಾದರಿಯನ್ನಾಗಿ ಇಟ್ಟುಕೊಂಡು ನಾನು ಮೊದಲ ಬಾರಿ ಬಸವ ಜಯಂತಿ ದಿನವೇ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿ ನುಡಿದಂತೆ ನಡೆದೆ ಎಂದರು.

ಮುಖ್ಯಮಂತ್ರಿ ಕುರ್ಚಿ ಸುಖದ ಸುಪ್ಪತ್ತಿಗೆ ಅಲ್ಲ. ಜನರ ಬದುಕನ್ನು ಸುಧಾರಿಸಲು ಸಿಗುವ ಅವಕಾಶ. ಪ್ರಧಾನಿ ನರೇಂದ್ರ ಮೋದಿಯವರು , ಕಾಂಗ್ರೆಸ್ ಗ್ಯಾರಂಟಿಗಳು ಜಾರಿ ಆಗುವುದಿಲ್ಲ. ರಾಜ್ಯ ದಿವಾಳಿ ಆಗ್ತದೆ ಎಂದಿದ್ದರು. ನಾವು ಈಗ ಐದನ್ನೂ ಜಾರಿ ಮಾಡಿದ್ದೇವೆ.

WhatsApp Image 2023 06 10 at 11.44.15 PM

ಕಾಂಗ್ರೆಸ್ ಘೋಷಿಸಿದ ಬಡವರ-ಮಧ್ಯಮ ವರ್ಗದವರ ಪರವಾದ ಯೋಜನೆ ಘೋಷಿಸಿದಾಗ ಪ್ರಧಾನ ಮಂತ್ರಿ ಮೋದಿಯವರು ಜನರಿಗೆ ಅನುಕೂಲ ಮಾಡುವ ನಮ್ಮ ಯೋಜನೆಗೆ ತಮ್ಮ ಸಹಕಾರ ನೀಡಬೇಕಿತ್ತು. ಆದರೆ ಮೋದಿ ಅವರಿಗೆ ಬಡವರ-ಮಧ್ಯಮ ವರ್ಗದವರ ಪ್ರಗತಿ, ಅಭಿವೃದ್ಧಿ ಬೇಕಾಗಿಲ್ಲ . ಅದಕ್ಕೇ ಬಿಜೆಪಿಯವರು ಜನರಲ್ಲಿ ತಮ್ಮ ಸಂಪ್ರದಾಯದಂತೆ ಸುಳ್ಳುಗಳನ್ನು ಎರಚಾಡುತ್ತಾ ಗೊಂದಲ ಸೃಷ್ಟಿಸುತ್ತಿದ್ದಾರೆ. ಜನರಿಗೆ ಅನುಕೂಲ ಆಗುವುದು ಅವರಿಗೆ ಬೇಕಾಗಿಲ್ಲ ಎಂದು ಟೀಕಿಸಿದರು.

ಬಿಜೆಪಿ ತನ್ನ ಜಾಯಮಾನದಲ್ಲೇ ಮಾಡದ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿದ್ದೇವೆ ಎಂದರು

ವೇದಿಕೆಯಲ್ಲಿ ಮಾಜಿ ಶಾಸಕ ಯತೀಂದ್ರ, ಸಮಾಜ ಕಲ್ಯಾಣ ಸಚಿವ ಹೆಚ್.ಸಿ.ಮಹದೇವಪ್ಪ, ಪಶುಸಂಗೋಪನೆ ಸಚಿವ ಕೆ.ವೆಂಕಟೇಶ್, ಮಾಜಿ ಮಂತ್ರಿಗಳಾದ ಪುಟ್ಟರಂಗಶೆಟ್ಟಿ, ಶಾಸಕರಾದ ಕೃಷ್ಣಮೂರ್ತಿ, ಕೆಪಿಸಿಸಿ ವಕ್ತಾರ ಲಕ್ಷ್ಮಣ್, ವಿಧಾನ ಪರಿಷತ್ ಸದಸ್ಯರಾದ ತಿಮ್ಮಯ್ಯ, ಮಾಜಿ ಲೋಕಸಭಾ ಸದಸ್ಯರಾದ ಶಿವಣ್ಣ, ಶಾಸಕರುಗಳಾದ ಗುಂಡ್ಲುಪೇಟೆ ಗಣೇಶ್ ಪ್ರಸಾದ್, ಅನಿಲ್ ಚಿಕ್ಕಮಾದು, ರವಿ ಶಂಕರ್, ಹರೀಶ್ ಗೌಡ, ಪರಿಷತ್ ಸದಸ್ಯ ನಾಗರಾಜ್ ಯಾದವ್ ಸೇರಿದಂತೆ ಸಾಕಷ್ಟು ಮುಖಂಡರು ಉಪಸ್ಥಿತರಿದ್ದರು.

2024 ರಲ್ಲೂ ಗೆಲ್ತೀವಿ-ಬೆಲೆ ಇಳಿಸ್ತೀವಿ

“ಗಗನಕ್ಕೆ ಏರಿರುವ ರಸಗೊಬ್ಬರ ಬೆಲೆಯನ್ನು ಕಡಿಮೆ ಮಾಡಿ” ಎಂದು ಸಭೆಯಲ್ಲಿದ್ದ ರೈತರು ಕೂಗಿದರು. ಇದಕ್ಕೆ ಸ್ಪಂದಿಸಿದ ಮುಖ್ಯಮಂತ್ರಿಗಳು, “ರಸಗೊಬ್ಬರ ಬೆಲೆ ಏರಿಸಿರುವುದು ಪ್ರಧಾನಿ ಮೋದಿ ಸರ್ಕಾರ. ಬೆಲೆ ಇಳಿಸಬೇಕಾಗಿರುವುದೂ ಮೋದಿ ಸರ್ಕಸರವೇ. ಆದರೆ ಅವರು ಬೆಲೆ ಇಳಿಸಲ್ಲ. ನಾವು 2024 ರ ಲೋಕಸಭಾ ಚುನಾವಣೆಯಲ್ಲೂ ಗೆಲ್ತೀವಿ. ಕೇಂದ್ರದಲ್ಲೂ ಅಧಿಕಾರಕ್ಕೆ ಬರ್ತೀವಿ. ಆಗ ಪೆಟ್ರೋಲ್, ಡೀಸೆಲ್, ಅಡಿಗೆ ಅನಿಲ್, ರಸಗೊಬ್ಬರ ಬೆಲೆಗಳನ್ನು ಇಳಿಸುತ್ತೇವೆ ಎಂದರು. ನೆರೆದಿದ್ದ ಜನ, ನೀವು ಪ್ರಧಾನಿ ಆಗಬೇಕು ಎಂದು ಮುಗಿಲು ಮುಟ್ಟುವಂತೆ ಕೂಗಿದರು.

ಚಾನಲ್ ಗಳ ಚರ್ಚೆಗೆ ತಲೆ ಕೆಡಿಸಿಕೊಳ್ಳಬೇಡಿ, ಅರ್ಜಿ ಹಾಕಿ- ಅನುಕೂಲ ಪಡೆಯಿರಿ

ಬಡವರ-ಮಧ್ಯಮವರ್ಗದವರ ಸಂಕಷ್ಟ ಕಡಿಮೆ ಮಾಡಲು ನಾವು ಜಾರಿಗೆ ತಂದ ಯೋಜನೆಗಳನ್ನು, “ಅವರಿಗಾ-ಇವರಿಗಾ” ಎನ್ನುವ ಗೊಂದಲ ಸೃಷ್ಡಿಸುತ್ತಾರೆ. ನೀವು ಗೊಂದಲಕ್ಕೆ ಒಳಗಾಗಬೇಡಿ. ಯೋಜನೆಗಳ ಅನುಕೂಲ ಪಡೆಯಿರಿ ಎಂದರು.

About the Author

Vighnesh Pawar

Subscriber

View All Posts

Post navigation

Previous: ಗೃಹಲಕ್ಷ್ಮಿ, ಗೃಹಜ್ಯೋತಿ ಯೋಜನೆಯ ಕುರಿತಂತೆ ಯಾವ ಗೊಂದಲವೂ ಇಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ
Next: ಗುತ್ತಿಗೆದಾರರಿಗೆ LOC ಕೊಡಲು 5% ಫಿಕ್ಸ್; ಕಾಂಗ್ರೆಸ್ ಸರಕಾರದ ವಿರುದ್ಧ ಪರ್ಸಂಟೇಜ್ ಆರೋಪ ಮಾಡಿದ ಹೆಚ್.ಡಿ.ಕುಮಾರಸ್ವಾಮಿ

Related Stories

ಬೆಂಗಳೂರಿನ ಪಕ್ಷದ ಕಚೇರಿಯಲ್ಲಿ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ಕುಳಿತಿರುವ ಶಾಸಕರು
  • ಕರ್ನಾಟಕ
  • ರಾಜಕೀಯ

11 ಶಾಸಕರಿಗೆ ಸಂಪುಟ ದರ್ಜೆ ಸ್ಥಾನಮಾನದೊಂದಿಗೆ ನಿಗಮ, ಮಂಡಳಿ, ಆಯೋಗಗಳ ಅಧ್ಯಕ್ಷ ಸ್ಥಾನ: ಸರ್ಕಾರ ಅಧಿಸೂಚನೆ

The Bengaluru Live November 24, 2026 8:23 PM
ಮಾಧ್ಯಮದವರೊಂದಿಗೆ ಮಾತನಾಡುತ್ತಿರುವ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ
  • ಕರ್ನಾಟಕ
  • ರಾಜಕೀಯ

ವಾಟ್ಸಾಪ್ ಚಾಟ್ ಬಿಡುಗಡೆ ಮಾಡಿದ ದಿನವೇ ಸಿಎಂ ಕ್ಲೀನ್ ಚಿಟ್ ಕೊಟ್ಟರು, ಇನ್ನು ತನಿಖೆ ಯಾವ ಪುರುಷಾರ್ಥಕ್ಕೆ?: ಹಾಸನ ಸೈಬರ್ ಪೊಲೀಸ್ ನೋಟಿಸ್ ಬಗ್ಗೆ ಕುಮಾರಸ್ವಾಮಿ ಪ್ರಶ್ನೆ

The Bengaluru Live November 24, 2026 7:39 PM
ಜಪಾನ್ ಪ್ರವಾಸದ ವೇಳೆ ವಿಡಿಯೋ ಕರೆಯಲ್ಲಿ ಮಾತನಾಡುತ್ತಿರುವ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್
  • ಕರ್ನಾಟಕ
  • ರಾಜಕೀಯ

ಜಪಾನ್‌ನಿಂದಲೇ ವಿಡಿಯೋ ಕರೆ: ಪ್ರತಿಭಟನೆ ಕೈಬಿಡಿ, ಅಧಿವೇಶನದವರೆಗೆ ಸಮಯ ಕೊಡಿ ಎಂದು ಆಶಾ ಕಾರ್ಯಕರ್ತೆಯರಿಗೆ ಸಿಎಂ ಶಿವಕುಮಾರ್ ಮನವಿ

The Bengaluru Live November 24, 2026 1:19 PM

Latest Post

ಏರೋ ಇಂಡಿಯಾ 2027: ಪ್ರದರ್ಶಕರ ದಾಖಲೆಯ ಬೇಡಿಕೆ; ಎರಡು ಹೊಸ ಹ್ಯಾಂಗರ್, ಮೊದಲ ಬಾರಿಗೆ ಮೆಜ್ಜನೈನ್ ಮಹಡಿಗೆ ಅನುಮತಿ ಏರೋ ಇಂಡಿಯಾ ಪ್ರದರ್ಶನ ಸ್ಥಳದಲ್ಲಿ ಏರೋ ಇಂಡಿಯಾ ಲಾಂಛನದ ಚೀಲಗಳು ಮತ್ತು ರಾಷ್ಟ್ರಧ್ವಜಗಳು
  • ಬೆಂಗಳೂರು ನಗರ

ಏರೋ ಇಂಡಿಯಾ 2027: ಪ್ರದರ್ಶಕರ ದಾಖಲೆಯ ಬೇಡಿಕೆ; ಎರಡು ಹೊಸ ಹ್ಯಾಂಗರ್, ಮೊದಲ ಬಾರಿಗೆ ಮೆಜ್ಜನೈನ್ ಮಹಡಿಗೆ ಅನುಮತಿ

November 25, 2026 10:03 PM
ರಾಜ್ಯ ಜಿಡಿಪಿಗೆ ಎರಡನೇ ಅತಿ ದೊಡ್ಡ ಕೊಡುಗೆ ನೀಡುವ ಜಿಲ್ಲೆ ದಕ್ಷಿಣ ಕನ್ನಡ: ಪ್ರಿಯಾಂಕ್ ಖರ್ಗೆ ಮಂಗಳೂರಿನಲ್ಲಿ ಡೆಲಾಯ್ಟ್ ಕಚೇರಿ ಉದ್ಘಾಟನೆಯಲ್ಲಿ ಮಾತನಾಡುತ್ತಿರುವ ಸಚಿವ ಪ್ರಿಯಾಂಕ್ ಖರ್ಗೆ
  • ಕರ್ನಾಟಕ

ರಾಜ್ಯ ಜಿಡಿಪಿಗೆ ಎರಡನೇ ಅತಿ ದೊಡ್ಡ ಕೊಡುಗೆ ನೀಡುವ ಜಿಲ್ಲೆ ದಕ್ಷಿಣ ಕನ್ನಡ: ಪ್ರಿಯಾಂಕ್ ಖರ್ಗೆ

November 25, 2026 9:46 PM
ಸಾಮಾನ್ಯ ಜ್ಞಾನ ಪ್ರಶ್ನೆ ಪತ್ರಿಕೆಯಲ್ಲಿ ಯಾವುದೇ ಲೋಪವಾಗಿಲ್ಲ: ಕೆಇಎ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಹೆಸರಿನ ಫಲಕ ಮತ್ತು ಲಾಂಛನದ ಮುಂದೆ ತಮ್ಮ ಮೇಜಿನ ಬಳಿ ಮಾತನಾಡುತ್ತಿರುವ ಕೆಇಎ ಕಾರ್ಯನಿರ್ವಾಹಕ ನಿರ್ದೇಶಕ ಎಚ್. ಪ್ರಸನ್ನ
  • ಕರ್ನಾಟಕ

ಸಾಮಾನ್ಯ ಜ್ಞಾನ ಪ್ರಶ್ನೆ ಪತ್ರಿಕೆಯಲ್ಲಿ ಯಾವುದೇ ಲೋಪವಾಗಿಲ್ಲ: ಕೆಇಎ

November 25, 2026 9:44 PM
ಸಂವಿಧಾನ ಇರುವುದು ಸಮಾಜದ ಕಟ್ಟಕಡೆಯ ವ್ಯಕ್ತಿಗಾಗಿ, ಉಳ್ಳವರಿಗಾಗಿ ಅಲ್ಲ: ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಬೆಂಗಳೂರಿನ ಕೆಪಿಸಿಸಿ ಕಚೇರಿಯ ಸಂವಿಧಾನ ದಿನಾಚರಣೆ ವಿಚಾರ ಸಂಕಿರಣದಲ್ಲಿ ದೀಪ ಬೆಳಗುತ್ತಿರುವ ಕಾಂಗ್ರೆಸ್ ಮುಖಂಡರು
  • ಕರ್ನಾಟಕ

ಸಂವಿಧಾನ ಇರುವುದು ಸಮಾಜದ ಕಟ್ಟಕಡೆಯ ವ್ಯಕ್ತಿಗಾಗಿ, ಉಳ್ಳವರಿಗಾಗಿ ಅಲ್ಲ: ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್

November 25, 2026 9:40 PM
ಕೆಪಿಎಸ್‌ಸಿ ಸುಧಾರಣೆಗೆ ರಚಿಸಿದ್ದ ಸದನ ಸಮಿತಿಯಿಂದ ಸ್ಪೀಕರ್ ಜಿ.ಎಸ್. ಪಾಟೀಲ ಅವರಿಗೆ ವರದಿ ಸಲ್ಲಿಕೆ ಸದನ ಸಮಿತಿಯ ಸದಸ್ಯರು ಸ್ಪೀಕರ್ ಜಿ.ಎಸ್. ಪಾಟೀಲ ಅವರಿಗೆ ವರದಿ ಸಲ್ಲಿಸುತ್ತಿರುವುದು
  • ಕರ್ನಾಟಕ

ಕೆಪಿಎಸ್‌ಸಿ ಸುಧಾರಣೆಗೆ ರಚಿಸಿದ್ದ ಸದನ ಸಮಿತಿಯಿಂದ ಸ್ಪೀಕರ್ ಜಿ.ಎಸ್. ಪಾಟೀಲ ಅವರಿಗೆ ವರದಿ ಸಲ್ಲಿಕೆ

November 25, 2026 9:26 PM
ಕನ್ನಡ ಕಲಿಯಿರಿ, ಜನರ ಸಮಸ್ಯೆಗಳಿಗೆ ಮೊದಲ ಆದ್ಯತೆ ನೀಡಿ: ಕರ್ನಾಟಕ ಕೇಡರ್‌ನ ಐವರು ನೂತನ ಐಪಿಎಸ್ ಪ್ರೊಬೇಷನರ್‌ಗಳಿಗೆ ಮುಖ್ಯ ಕಾರ್ಯದರ್ಶಿ ಸಲಹೆ ವಿಧಾನಸೌಧದಲ್ಲಿ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್ ಅವರೊಂದಿಗೆ ಪುಸ್ತಕ ಹಿಡಿದು ನಿಂತಿರುವ ಐವರು ಐಪಿಎಸ್ ಪ್ರೊಬೇಷನರ್‌ಗಳು
  • ಕರ್ನಾಟಕ

ಕನ್ನಡ ಕಲಿಯಿರಿ, ಜನರ ಸಮಸ್ಯೆಗಳಿಗೆ ಮೊದಲ ಆದ್ಯತೆ ನೀಡಿ: ಕರ್ನಾಟಕ ಕೇಡರ್‌ನ ಐವರು ನೂತನ ಐಪಿಎಸ್ ಪ್ರೊಬೇಷನರ್‌ಗಳಿಗೆ ಮುಖ್ಯ ಕಾರ್ಯದರ್ಶಿ ಸಲಹೆ

November 25, 2026 9:02 PM

ನೀವು ತಪ್ಪಿಸಿಕೊಂಡಿರಬಹುದು

ಏರೋ ಇಂಡಿಯಾ ಪ್ರದರ್ಶನ ಸ್ಥಳದಲ್ಲಿ ಏರೋ ಇಂಡಿಯಾ ಲಾಂಛನದ ಚೀಲಗಳು ಮತ್ತು ರಾಷ್ಟ್ರಧ್ವಜಗಳು
  • ಬೆಂಗಳೂರು ನಗರ

ಏರೋ ಇಂಡಿಯಾ 2027: ಪ್ರದರ್ಶಕರ ದಾಖಲೆಯ ಬೇಡಿಕೆ; ಎರಡು ಹೊಸ ಹ್ಯಾಂಗರ್, ಮೊದಲ ಬಾರಿಗೆ ಮೆಜ್ಜನೈನ್ ಮಹಡಿಗೆ ಅನುಮತಿ

The Bengaluru Live November 25, 2026 10:03 PM
ಮಂಗಳೂರಿನಲ್ಲಿ ಡೆಲಾಯ್ಟ್ ಕಚೇರಿ ಉದ್ಘಾಟನೆಯಲ್ಲಿ ಮಾತನಾಡುತ್ತಿರುವ ಸಚಿವ ಪ್ರಿಯಾಂಕ್ ಖರ್ಗೆ
  • ಕರ್ನಾಟಕ

ರಾಜ್ಯ ಜಿಡಿಪಿಗೆ ಎರಡನೇ ಅತಿ ದೊಡ್ಡ ಕೊಡುಗೆ ನೀಡುವ ಜಿಲ್ಲೆ ದಕ್ಷಿಣ ಕನ್ನಡ: ಪ್ರಿಯಾಂಕ್ ಖರ್ಗೆ

The Bengaluru Live November 25, 2026 9:46 PM
ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಹೆಸರಿನ ಫಲಕ ಮತ್ತು ಲಾಂಛನದ ಮುಂದೆ ತಮ್ಮ ಮೇಜಿನ ಬಳಿ ಮಾತನಾಡುತ್ತಿರುವ ಕೆಇಎ ಕಾರ್ಯನಿರ್ವಾಹಕ ನಿರ್ದೇಶಕ ಎಚ್. ಪ್ರಸನ್ನ
  • ಕರ್ನಾಟಕ

ಸಾಮಾನ್ಯ ಜ್ಞಾನ ಪ್ರಶ್ನೆ ಪತ್ರಿಕೆಯಲ್ಲಿ ಯಾವುದೇ ಲೋಪವಾಗಿಲ್ಲ: ಕೆಇಎ

The Bengaluru Live November 25, 2026 9:44 PM
ಬೆಂಗಳೂರಿನ ಕೆಪಿಸಿಸಿ ಕಚೇರಿಯ ಸಂವಿಧಾನ ದಿನಾಚರಣೆ ವಿಚಾರ ಸಂಕಿರಣದಲ್ಲಿ ದೀಪ ಬೆಳಗುತ್ತಿರುವ ಕಾಂಗ್ರೆಸ್ ಮುಖಂಡರು
  • ಕರ್ನಾಟಕ

ಸಂವಿಧಾನ ಇರುವುದು ಸಮಾಜದ ಕಟ್ಟಕಡೆಯ ವ್ಯಕ್ತಿಗಾಗಿ, ಉಳ್ಳವರಿಗಾಗಿ ಅಲ್ಲ: ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್

The Bengaluru Live November 25, 2026 9:40 PM

ನಮ್ಮ ಕುರಿತು

ಬೆಂಗಳೂರು ಲೈವ್ ಬೆಂಗಳೂರು ಮತ್ತು ಕರ್ನಾಟಕವನ್ನು ಕೇಂದ್ರೀಕರಿಸಿ ಇಂಗ್ಲಿಷ್ ಮತ್ತು ಕನ್ನಡದಲ್ಲಿ ಸುದ್ದಿ ಹಾಗೂ ಮಾಹಿತಿಯನ್ನು ಪ್ರಕಟಿಸುವ ಸ್ವತಂತ್ರ ಡಿಜಿಟಲ್ ಸುದ್ದಿ ಪ್ರಕಟಣೆಯಾಗಿದೆ. ಇದು ಫೆಬ್ರವರಿ 2020ರಿಂದ ಕಾರ್ಯನಿರ್ವಹಿಸುತ್ತಿದೆ.

ಉಪಯುಕ್ತ ಕೊಂಡಿಗಳು

  • ಬೆಂಗಳೂರು ಲೈವ್ ಕುರಿತು
  • ಸಂಪರ್ಕಿಸಿ
  • ಸಂಪಾದಕೀಯ ಮಾನದಂಡಗಳು ಮತ್ತು ತಿದ್ದುಪಡಿ ನೀತಿ
  • ಪ್ರಕಾಶಕರು, ಸಂಪಾದಕೀಯ ಹೊಣೆಗಾರಿಕೆ ಮತ್ತು ದೂರು ಪರಿಹಾರ
  • ಮಾಲೀಕತ್ವ ಮತ್ತು ಹಣಕಾಸು ಪಾರದರ್ಶಕತೆ
  • ನಮ್ಮೊಂದಿಗೆ ಜಾಹೀರಾತು ನೀಡಿ
  • ಗೌಪ್ಯತಾ ನೀತಿ
  • ಸೇವಾ ನಿಯಮಗಳು
  • ಪತ್ರಿಕಾ ಪ್ರಕಟಣೆ ಸಲ್ಲಿಸಿ

ಇತ್ತೀಚಿನ ಸುದ್ದಿಗಳು

  • ಏರೋ ಇಂಡಿಯಾ 2027: ಪ್ರದರ್ಶಕರ ದಾಖಲೆಯ ಬೇಡಿಕೆ; ಎರಡು ಹೊಸ ಹ್ಯಾಂಗರ್, ಮೊದಲ ಬಾರಿಗೆ ಮೆಜ್ಜನೈನ್ ಮಹಡಿಗೆ ಅನುಮತಿ
  • ರಾಜ್ಯ ಜಿಡಿಪಿಗೆ ಎರಡನೇ ಅತಿ ದೊಡ್ಡ ಕೊಡುಗೆ ನೀಡುವ ಜಿಲ್ಲೆ ದಕ್ಷಿಣ ಕನ್ನಡ: ಪ್ರಿಯಾಂಕ್ ಖರ್ಗೆ
  • ಸಾಮಾನ್ಯ ಜ್ಞಾನ ಪ್ರಶ್ನೆ ಪತ್ರಿಕೆಯಲ್ಲಿ ಯಾವುದೇ ಲೋಪವಾಗಿಲ್ಲ: ಕೆಇಎ
  • ಸಂವಿಧಾನ ಇರುವುದು ಸಮಾಜದ ಕಟ್ಟಕಡೆಯ ವ್ಯಕ್ತಿಗಾಗಿ, ಉಳ್ಳವರಿಗಾಗಿ ಅಲ್ಲ: ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್
©Copyright 2025 The Bengaluru Live All rights reserved. | MoreNews by AF themes.