Home ಬೆಂಗಳೂರು ನಗರ ಶೇ 50 ರಷ್ಟು ಸಾಮರ್ಥ್ಯದಲ್ಲಿ ಜಿಮ್ ಗಳ ಕಾರ್ಯನಿರ್ವಹಣೆಗೆ ಅನುಮತಿ

ಶೇ 50 ರಷ್ಟು ಸಾಮರ್ಥ್ಯದಲ್ಲಿ ಜಿಮ್ ಗಳ ಕಾರ್ಯನಿರ್ವಹಣೆಗೆ ಅನುಮತಿ

69
0

ಬೆಂಗಳೂರು:

ರಾಜ್ಯದಲ್ಲಿ ಕೋವಿಡ್ ಸೋಂಕು ನಿಯಂತ್ರಣ ಉದ್ದೇಶದಿಂದ ವ್ಯಾಯಾಮ ಶಾಲೆ – ಜಿಮ್ ಗಳನ್ನು ಬಂದ್ ಮಾಡಿದ್ದ ರಾಜ್ಯ ಸರ್ಕಾರ ಇದೀಗ ತನ್ನ ಆದೇಶವನ್ನು ಮಾರ್ಪಡಿಸಿದೆ. ಶೇ 50 ರಷ್ಟು ಸಾಮಾರ್ಥ್ಯದೊಂದಿಗೆ ಜಿಮ್ ಗಳ ಕಾರ್ಯನಿರ್ವಹಣೆಗೆ ಅನುಮತಿ ನೀಡಿದೆ.

ಜಿಮ್ ಮಾಲೀಕರ ಸಂಘದ ಎಚ್ಚರಿಕೆಗೆ ಕೊನೆಗೂ ಮಣಿದಿರುವ ರಾಜ್ಯ ಸರ್ಕಾರ ಸಿನಿಮಾ ಮಂದಿರಗಳ ಮಾದರಿಯಲ್ಲಿ ಜಿಮ್ ಗಳಿಗೂ ಅವಕಾಶ ಕಲ್ಪಿಸಿದೆ. ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರದ ಆಧ್ಯಕ್ಷರೂ ಆದ ಮುಖ್ಯ ಕಾರ್ಯದರ್ಶಿ ಪಿ. ರವಿ ಕುಮಾರ್ ಈ ಕುರಿತು ಆದೇಶ ಹೊರಡಿಸಿದ್ದಾರೆ.

Gym 50capacity modified order

LEAVE A REPLY

Please enter your comment!
Please enter your name here