ಬೆಂಗಳೂರು: ಫುಲ್ ಲೋಡ್ ಪೆಟ್ರೋಲ್ ತುಂಬಿಕೊಂಡು ಬರುತ್ತಿದ್ದ ಟ್ಯಾಂಕರ್ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ಎಲೆಕ್ಟ್ರಾನಿಕ್ ಸಿಟಿಯಲ್ಲಿ ಇಂದು ಬೆಳಗ್ಗೆ ನಡೆದಿದೆ.
ಮಂಗಳೂರಿನಿಂದ ಅತ್ತಿಬೆಲೆಗೆ ತೆರಳುತ್ತಿದ್ದ ಟ್ಯಾಂಕರ್ ಇಲೆಕ್ಟ್ರಾನಿಕ್ ಸಿಟಿ ಟೋಲ್ ಬಳಿ ಡಿವೈಡರ್ ಗೆ ಡಿಕ್ಕಿ ಹೊಡೆದಿದ್ದು, ಗಣನೀಯ ಪ್ರಮಾಣದ ಪೆಟ್ರೋಲ್ ಸೋರಿಕೆಯಾಗಿದೆ.
ತುರ್ತು ಕರೆ ಸ್ವೀಕರಿಸಿದ ತಕ್ಷಣ ಅಗ್ನಿಶಾಮಕ ದಳದವರು ಸ್ಥಳಕ್ಕೆ ಆಗಮಿಸಿ ಕ್ರೇನ್ ಬಳಸಿ ಪಲ್ಟಿಯಾದ ಟ್ಯಾಂಕರ್ ಮೇಲೆತ್ತಿದರು.
ಘಟನೆಯಿಂದಾಗಿ ಹೊಸೂರು-ಬೆಂಗಳೂರು ಹೆದ್ದಾರಿಯಲ್ಲಿ ಭಾರಿ ಟ್ರಾಫಿಕ್ ಜಾಮ್ ಉಂಟಾಗಿ ಸಂಚಾರಕ್ಕೆ ಅಡ್ಡಿಯುಂಟಾಯಿತು.