ದೇಶ ವಿರೋಧಿ ಹೇಳಿಕೆ ಖಂಡಿಸಿದ ಸಚಿವರು
ಬೆಂಗಳೂರು:
ದೇಶದ್ರೋಹ ಮಾತುಗಳಿಂದ ದೇಶದಲ್ಲಿ ಕ್ಷೋಭೆ ಉಂಟು ಮಾಡುವ ಮೂಲಕ ಶಿಕ್ಷಾರ್ಹ ಅಪರಾಧ ಎಸಗಿರುವ ಪಾಪುಲರ್ ಫ್ರಂಟ್ ಆಫ್ ಇಂಡಿಯಾ ಸಂಸ್ಥೆಯ ವಿರುದ್ಧ ಮೊಕದ್ದಮೆ ದಾಖಲಿಸಲಾಗಿದೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದರು.
ಬೆಂಗಳೂರಿನಲ್ಲಿ ಅವರು ಈ ವಿಷಯ ತಿಳಿಸಿದರು.
ಮಂಗಳೂರಿನ ಉಳ್ಳಾಲದಲ್ಲಿ ನಡೆದ ಕಾರ್ಯಕ್ರಮದಲ್ಲಿ pfi ಸಂಘಟನೆಯ ಅನಿಸ್ ಎಂಬುವವರು ಶಿಕ್ಷಾರ್ಹ ಮತ್ತು ದೇಶದ್ರೋಹದ ಹೇಳಿಕೆಗಳನ್ನು ನೀಡಿದ್ದಾರೆ . ಹಿಂದೂ ಧರ್ಮದವರ ಭಾವನೆಗಳನ್ನು ಕೆರಳಿಸುವ ಮತ್ತು ಹಿಂದೂ ಭಾವನೆಗಳಿಗೆ ಧಕ್ಕೆ ಉಂಟು ಮಾಡುವ ಹೇಳಿಕೆಗಳನ್ನು ನೀಡಿದ್ದಾರೆ. ಇಂಥ ಕುಕೃತ್ಯವನ್ನು ನಮ್ಮ ಸರ್ಕಾರ ಯಾವುದೇ ಕಾರಣಕ್ಕೂ ಸಹಿಸುವುದಿಲ್ಲ. ಹೀಗಾಗಿ ಈ ವಿಚ್ಚಿದ್ರಕಾರಿ ಸಂಘಟನೆಯ ವಿರುದ್ಧ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಮೊಕದ್ದಮೆ ದಾಖಲಿಸಲಾಗಿದೆ ಎಂದು ಬಸವರಾಜ ಬೊಮ್ಮಾಯಿ ತಿಳಿಸಿದರು.
ಆರೆಸ್ಸೆಸ್ ಒಂದು ದೇಶಭಕ್ತಿ ಸಂಘಟನೆ. ರಾಮಮಂದಿರ ನಿರ್ಮಿಸುವಂತೆ ಸುಪ್ರೀಂ ಕೋರ್ಟ್ ಆದೇಶ ನೀಡಿದೆ. ಈ ಬಗ್ಗೆ ಮಾತನಾಡುವ ನೈತಿಕತೆ ಪಿಎಫ್ಐಗೆ ಇಲ್ಲ ಎಂದು ಸಚಿವರು ಹೇಳಿದರು.
ಭಾರತ ವಿರೋಧಿ ಶಕ್ತಿಗಳೊಂದಿಗೆ ಪಿಎಫ್ಐ ಸಂಘಟನೆ ಹಣಕ್ಕಾಗಿ ಕೈಜೋಡಿಸಿದೆ ಎಂದು ಸಚಿವರು ಇದೇ ಸಂದರ್ಭದಲ್ಲಿ ಆರೋಪಿಸಿದರು.
ಇಂಥ ವಿಚ್ಛಿದ್ರಕಾರಿ PFI ಸಂಘಟನೆಯ ವಿರುದ್ಧ ಈಗಾಗಲೇ ಮೊಕದ್ದಮೆ ದಾಖಲಿಸಲಾಗಿದ್ದು ಕಠೋರ ಕ್ರಮಕ್ಕಾಗಿ ಸೂಚನೆ ನೀಡಿದ್ದೇನೆ ಎಂದು ಬಸವರಾಜ ಬೊಮ್ಮಾಯಿ ತಿಳಿಸಿದರು.