Home ಬೆಂಗಳೂರು ನಗರ ಬೆಂಗಳೂರಿನಲ್ಲಿ ಕೆಎಸ್ ಆರ್ ಟಿಸಿ ಬಸ್ ಹರಿದು ಮಹಿಳೆ ದುರ್ಮರಣ

ಬೆಂಗಳೂರಿನಲ್ಲಿ ಕೆಎಸ್ ಆರ್ ಟಿಸಿ ಬಸ್ ಹರಿದು ಮಹಿಳೆ ದುರ್ಮರಣ

46
0
Pillon rider women dies after KSRTC bus hit two wheeler from behind in Bengaluru
Pillon rider women dies after KSRTC bus hit two wheeler from behind in Bengaluru

ಬೆಂಗಳೂರು:

ನಗರದಲ್ಲಿ ಭಾನುವಾರ ಮಧ್ಯಾಹ್ನ ಕೆಎಸ್ ಆರ್ ಟಿಸಿ ಬಸ್ ಡಿಕ್ಕಿ ಹೊಡೆದಿದ ಅಪಘಾತದಲ್ಲಿ ಮಹಿಳೆಯೊಬ್ಬರ ಜೀವ ಬಲಿ ಪಡೆದಿದೆ. ಲತಾ (55) ಮೃತಪಟ್ಟ ದುರ್ದೈವಿಯಾಗಿದ್ದಾರೆ.

ಹೆಬ್ಬಾಳ ಕೆಂಪಾಪುರದ ಲತಾ, ಪತಿ ಅನಂತರಾಮಕೃಷ್ಣರ ಜೊತೆಗೆ ಬೈಕ್ ನಲ್ಲಿ ಹೊರಟಿದ್ದಾಗ ಕೆಎಸ್ ಆರ್ ಟಿಸಿ ಬಸ್ ಡಿಕ್ಕಿ ಹೊಡೆದಿದೆ ಎಂದು ಉಪ್ಪಾರ ಪೇಟೆ ಸಂಚಾರ ಪೊಲೀಸರು ತಿಳಿಸಿದ್ದಾರೆ.

ಶೇಷಾದ್ರಿ ರಸ್ತೆಯಲ್ಲಿ ಬೈಕ್ ನಲ್ಲಿ ತೆರಳುತ್ತಿದ್ದಾಗ ಮೆಜೆಸ್ಟಿಕ್ ನಿಂದ ಕೆ.ಆರ್.ವೃತ್ತದತ್ತ ಹೊರಟಿದ್ದ ಬಸ್ ಬೈಕ್ ಗೆ ಡಿಕ್ಕಿ ಹೊಡೆದಿದೆ. ಇದರಿಂದಾಗಿ ಬೈಕ್ ಸಮೇತ ರಸ್ತೆ ಮೇಲೆ ಬಿದ್ದ ಲತಾ ಅವರ ತಲೆ ಮೇಲೆಯೇ ಬಸ್ಸಿನ ಚಕ್ರ ಹರಿದು ಹೋಗಿದೆ. ಇದರಿಂದಾಗಿ ಅವರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಅನಂತರಾಮಕೃಷ್ಣ ಅವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಪ್ರಾಣಪಾಯದಿಂದ ಪಾರಾಗಿದ್ದಾರೆ.

ಬಸ್ ಚಾಲಕನ ಅಜಾಗರೂಕತೆ ಹಾಗೂ ಅತಿ ವೇಗದ ಚಾಲನೆಯೇ ಅಪಘಾತಕ್ಕೆ ಕಾರಣ ಎಂಬುದು ಮೇಲ್ನೊಟಕ್ಕೆ ತಿಳಿದುಬಂದಿದೆ. ಬಸ್ ಜಪ್ತಿ ಮಾಡಿರುವ ಪೊಲೀಸರು ಚಾಲಕನನ್ನು ವಶಕ್ಕೆ ಪಡೆದಿದ್ದಾರೆ.

LEAVE A REPLY

Please enter your comment!
Please enter your name here