ಬೆಂಗಳೂರು: ನಗರದ ಯಲಹಂಕ ವಾಯುನೆಲೆಯಲ್ಲಿ ಫೆ. 13ರಿಂದ 17ರವರೆಗೆ ನಡೆಯಲಿರುವ ಏರೋ ಇಂಡಿಯಾ ಶೋ 2023ನ್ನು ಉದ್ಘಾಟಿಸಲು, ಪ್ರಧಾನಮಂತ್ರಿ ನರೇಂದ್ರ ಮೋದಿ ರಾಜ್ಯ ರಾಜಧಾನಿ ಬೆಂಗಳೂರಿಗೆ ಬಂದಿಳಿದಿದ್ದಾರೆ. ಹೆಚ್‌ಎಎಲ್ ವಿಮಾನ ನಿಲ್ದಾಣ ತಲುಪಿದ ಪ್ರಧಾನಿ ಮೋದಿ ಅವರನ್ನು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆತ್ಮೀಯವಾಗಿ ಸ್ವಾಗತಿಸಿದರು.