Home Uncategorized PM Kisan Status 2022: ಇಂದು ರೈತರ ಬ್ಯಾಂಕ್ ಖಾತೆಗೆ ಬೀಳಲಿದೆ ಪಿಎಂ ಕಿಸಾನ್ ಸಮ್ಮಾನ್...

PM Kisan Status 2022: ಇಂದು ರೈತರ ಬ್ಯಾಂಕ್ ಖಾತೆಗೆ ಬೀಳಲಿದೆ ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆ ಹಣ

1
0
bengaluru

PM Kisan Samman Nidhi Scheme 13th Instalment: ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ 13ನೇ ಕಂತು ಇಂದು ಬೆಳಗ್ಗೆ 11 ಗಂಟೆಗೆ ಬಿಡುಗಡೆಯಾಗಲಿದೆ. ಅನ್ನದಾತನನ್ನು ರಾಜನನ್ನಾಗಿ ಮಾಡಲು ಮತ್ತು ರೈತರ ಆದಾಯವನ್ನು ಹೆಚ್ಚಿಸಲು ನರೇಂದ್ರ ಮೋದಿ (Narendra Modi) ನೇತೃತ್ವದ ಕೇಂದ್ರ ಸರ್ಕಾರ ಕೃಷಿ ಕ್ಷೇತ್ರಕ್ಕೆ ಉತ್ತೇಜನ ನೀಡಲು ಹಲವು ಕ್ರಮಗಳನ್ನು ತೆಗೆದುಕೊಳ್ಳುತ್ತಿದ್ದು, ಈ ಪೈಕಿ 2019ರ ಫೆಬ್ರವರಿಯಲ್ಲಿ ಜಾರಿ ಮಾಡಿದ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆ ಕೂಡ ಒಂದು. ಇತ್ತೀಚೆಗಷ್ಟೇ ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ 12ನೇ ಕಂತಿನ ಹಣ ರೈತರ ಖಾತೆಗೆ ಬಿಡುಗಡೆ ಮಾಡಿದ್ದು ಗೊತ್ತೇ ಇದೆ. ಈ ಯೋಜನೆಯ ಭಾಗವಾಗಿ ಇದುವರೆಗೆ 10 ಕೋಟಿಗೂ ಹೆಚ್ಚು ರೈತರು 12 ಕಂತುಗಳನ್ನು ಪಡೆದಿದ್ದಾರೆ. ಯೋಜನೆಯ ಭಾಗವಾಗಿ ವಾರ್ಷಿಕ 6 ಸಾವಿರ ರೂಪಾಯಿ ರೈತರ ಖಾತೆಗೆ ಕಳುಹಿಸಲಾಗುತ್ತಿದೆ. ಈ ಮೊತ್ತವನ್ನು ಪ್ರತಿ 4 ತಿಂಗಳಿಗೊಮ್ಮೆ ಪ್ರತಿ ವ್ಯಕ್ತಿಗೆ 2,000 ರೂ.ನಂತೆ ಮೂರು ಕಂತುಗಳಲ್ಲಿ ಡಿಬಿಟಿ ಮೂಲಕ ರೈತರ ಖಾತೆಗೆ ವರ್ಗಾಯಿಸಲಾಗುತ್ತದೆ.

ಇಂತಹ ರೈತರಿಗೆ ಹಣ ಸಿಗುವುದು ಕಷ್ಟಸಾಧ್ಯ

ಮೊದಲು ಇ-ಕೆವೈಸಿ, ಭೂಮಿಯ ವಿವರಗಳನ್ನು ಸಂಪೂರ್ಣವಾಗಿ ಭರ್ತಿ ಮಾಡಲಾಗಿದೆಯೇ ಎಂದು ಪರಿಶೀಲಿಸಿ. ಇದು ಭರ್ತಿ ಮಾಡಿದ್ದರೆ 13ನೇ ಕಂತು ಖಂಡಿತವಾಗಿಯೂ ನಿಮ್ಮ ಖಾತೆಗೆ ಬರುತ್ತದೆ. ಏಕೆಂದರೆ ಪಿಎಂ ಕಿಸಾನ್ ಯೋಜನೆಯಲ್ಲಿ ವಂಚನೆಯನ್ನು ತಡೆಗಟ್ಟಲು ಕೇಂದ್ರವು ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಂಡಿದೆ. ಪಿಎಂ ಕಿಸಾನ್ ಯೋಜನೆಯ ಇತ್ತೀಚಿನ ಕಂತು ಪಡೆಯಲು ಜಮೀನು ವಿವರಗಳನ್ನು ಪರಿಶೀಲನೆ ಮತ್ತು ಇ-ಕೆವೈಸಿ ಮಾಡಿಸಿಕೊಳ್ಳುವುದು ಅವಶ್ಯಕವಾಗಿದೆ.

ಸಮಸ್ಯೆಗಳಿದ್ದರೆ ಇಲ್ಲಿ ಸಂಪರ್ಕಿಸಿ

bengaluru

ಪಿಎಂ ಕಿಸಾನ್ ಯೋಜನೆಗೆ ಸಂಬಂಧಿಸಿದಂತೆ ಯಾವುದೇ ಸಮಸ್ಯೆ ಇದ್ದರೆ ನೀವು ಅಧಿಕೃತ ಇಮೇಲ್ ಐಡಿಯಲ್ಲಿ ಸಂಪರ್ಕಿಸಬಹುದು. ಪ್ರಧಾನ ಮಂತ್ರಿ ಕಿಸಾನ್ ಯೋಜನೆ ಸಹಾಯವಾಣಿ ಸಂಖ್ಯೆ- 155261 ಅಥವಾ 1800115526 (ಟೋಲ್ ಫ್ರೀ) ಅಥವಾ 011-23381092 ಅನ್ನು ಸಹ ಸಂಪರ್ಕಿಸಬಹುದು. ಈ ಯೋಜನೆಗೆ ಸಂಬಂಧಿಸಿದ ನಿಮ್ಮ ಪ್ರತಿಯೊಂದು ಸಮಸ್ಯೆಯನ್ನು ಇಲ್ಲಿಯೂ ಪರಿಹರಿಸಲಾಗುವುದು.

ದೇಶದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

bengaluru

LEAVE A REPLY

Please enter your comment!
Please enter your name here