Home ರಾಜಕೀಯ ಚುನಾವಣಾ ಬಾಂಡ್ ಪ್ರಕರಣದಲ್ಲಿ ಪ್ರಧಾನಿ ಮೋದಿಯವರೂ ರಾಜಿನಾಮೆ ನೀಡಬೇಕಾಗುತ್ತದೆ: ಸಿಎಂ ಸಿದ್ದರಾಮಯ್ಯ

ಚುನಾವಣಾ ಬಾಂಡ್ ಪ್ರಕರಣದಲ್ಲಿ ಪ್ರಧಾನಿ ಮೋದಿಯವರೂ ರಾಜಿನಾಮೆ ನೀಡಬೇಕಾಗುತ್ತದೆ: ಸಿಎಂ ಸಿದ್ದರಾಮಯ್ಯ

10
0
I am ready to race with Modi: Siddaramaiah
ಪ್ರಾತಿನಿಧ್ಯ ಚಿತ್ರ

ಜಾಮೀನಿನ ಮೇಲೆ ಹೊರಗಿರುವ ಕುಮಾರಸ್ವಾಮಿ ರಾಜಿನಾಮೆ ನೀಡಲಿ

ಮೈಸೂರು: ಚುನಾವಣಾ ಬಾಂಡ್ ಪ್ರಕರಣದಲ್ಲಿ ಪ್ರಧಾನಿ ಮೋದಿಯವರೂ ರಾಜಿನಾಮೆ ನೀಡಬೇಕಾಗುತ್ತದೆ. ಮೊದಲು ಕುಮಾರಸ್ವಾಮಿಯವರು ರಾಜಿನಾಮೆ ನೀಡಲಿ. ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ಚುನಾವಣಾ ಬಾಂಡ್ ಸಂಬಂಧಿಸಿದಂತೆ, ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಅವರ ಮೇಲೆಯೂ ಎಫ್ ಐ ಆರ್ ದಾಖಲಿಸಿರುವುದಾಗಿ ತಿಳಿದುಬಂದಿದೆ. ಈ ಸಂದರ್ಭದಲ್ಲಿ ಅವರು ರಾಜಿನಾಮೆ ಕೊಡುತ್ತಾರೆಯೇ ? ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಶ್ನಿಸಿದ್ದಾರೆ.

ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಅವರ ವಿರುದ್ಧ ಎಫ್ ಐ ಆರ್ ದಾಖಲಾಗಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, “ಚುನಾವಣಾ ಬಾಂಡ್ ಗೆ ಸಂಬಂಧಿಸಿದಂತೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರ ವಿರುದ್ಧವೂ ಎಫ್.ಐ.ಆರ್ ದಾಖಿಲಿಸಿರುವುದಾಗಿ ತಿಳಿದು ಬಂದಿದೆ. ಅವರೂ ರಾಜೀನಾಮೆ ಕೊಡುತ್ತಾರೆಯೇ” ಎಂದು ಪ್ರಶ್ನಿಸಿದ್ದಾರೆ.

“17 ಎ ಪ್ರಕಾರ ಎಫ್ ಐ ಆರ್ ದಾಖಲು ಮಾಡಿ, ತನಿಖೆ ಮಾಡುತ್ತಾರೆ. ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ಚುನಾವಣಾ ಬಾಂಡ್ ಸಂಬಂಧಿಸಿದಂತೆ, ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಅವರ ಮೇಲೆಯೂ ಎಫ್ ಐ ಆರ್ ದಾಖಲಿಸಿರುವುದಾಗಿ ತಿಳಿದುಬಂದಿದೆ. ಈ ಸಂದರ್ಭದಲ್ಲಿ ಅವರು ರಾಜಿನಾಮೆ ಕೊಡುತ್ತಾರೆಯೇ ?,” ಎಂದು ಪ್ರಶ್ನಿಸಿದರು.

ಬಿಜೆಪಿಯವರು, ಸಿಎಂ ರಾಜಿನಾಮೆ ಕೊಡುತ್ತಾರೆ ಎನ್ನುತ್ತಿದ್ದಾರೆ ಎಂಬುದಕ್ಕೆ ಪ್ರತಿಕ್ರಿಯೆ ನೀಡಿ, ಮೊದಲು ಕುಮಾರಸ್ವಾಮಿಯವರು ರಾಜಿನಾಮೆ ನೀಡಲಿ. ಚುನಾವಣಾ ಬಾಂಡ್ ಪ್ರಕರಣದಲ್ಲಿ ಪ್ರಧಾನಿ ಮೋದಿಯವರೂ ರಾಜಿನಾಮೆ ನೀಡಬೇಕಾಗುತ್ತದೆ ಎಂದರು.

LEAVE A REPLY

Please enter your comment!
Please enter your name here