ಮಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಕರ್ನಾಟಕದಲ್ಲಿ ಚುನಾವಣಾ ಪ್ರಚಾರ ಕೈಗೊಂಡಿದ್ದು, ಮೈಸೂರಿನ ಬಳಿಕ ಮಂಗಳೂರಿಗೆ ತೆರಳಿ ಭರ್ಜರಿ ಪ್ರಚಾರ ಮಾಡಿದ್ದಾರೆ.
ನಾರಾಯಣಗುರು ವೃತ್ತದಿಂದ ನವಭಾರತ ವೃತ್ತದವರೆಗೆ ಅಂದರೆ ಸುಮಾರು 2 ಕಿ.ಮೀ. ರೋಡ್ ಶೋ ನಡೆಸಲಿದ್ದಾರೆ.
ಉತ್ಸಾಹದಿಂದ ಮೋದಿಗಾಗಿ ಲಾಲ್ ಬಾಗ್ ಜಂಕ್ಷನ್ನಲ್ಲಿ ನೂರಾರು ಅಭಿಮಾನಿಗಳು ಜಮಾಯಿಸಿದ್ದಾರೆ. ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕ್ಯಾ.ಬ್ರಿಜೇಶ್ ಚೌಟ ಮತ್ತು ಉಡುಪಿ-ಚಿಕ್ಕಮಗಳೂರು ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿ ಉಪಸ್ಥಿತರಿದ್ದಾರೆ.
ನಂತರ ಮೋದಿ ತಮ್ಮ ಸಾಮಾಜಿಕ ಮಾಧ್ಯಮ ಪ್ರೊಫೈಲ್ ‘ಎಕ್ಸ್’ನಲ್ಲಿ ಪೋಸ್ಟ್ ಮಾಡಿ: “ಮಂಗಳೂರಿನಲ್ಲಿ ನಡೆದ ರೋಡ್ ಶೋನಲ್ಲಿ ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಿದ ಮಂಗಳೂರು ಮತ್ತು ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಜನತೆಗೆ ನನ್ನ ಕೃತಜ್ಞತೆಗಳು. ಕರ್ನಾಟಕದ ಈ ಭಾಗ ಹಾಗೂ ನಮ್ಮ ಪಕ್ಷದ ನಡುವೆ ಬಲಿಷ್ಠ ಬಾಂಧವ್ಯವಿದೆ. ಉತ್ತಮ ಆಡಳಿತದ ನಮ್ಮ ಸಿದ್ಧಾಂತ ಮತ್ತು ನಮ್ಮ ಪ್ರಾಚೀನ ಸಂಸ್ಕೃತಿಯನ್ನು ಸಂರಕ್ಷಿಸುವ ಹಾಗೂ ಆಚರಿಸುವ ನಮ್ಮ ಪ್ರಯತ್ನಗಳಿಗೆ ಜನತೆ ನಮ್ಮನ್ನು ವರ್ಷಗಳಿಂದ ಆಶೀರ್ವದಿಸಿದ್ದಾರೆ,” ಎಂದು ಹೇಳಿದ್ದಾರೆ.
ಎಡಿಜಿಪಿ ಚಂದ್ರಶೇಖರ್, ಐಜಿಪಿ ಬೋರಲಿಂಗಯ್ಯ ನೇತೃತ್ವದಲ್ಲಿ ಅಂತಿಮ ಹಂತದ ಭದ್ರತೆ ಪರಿಶೀಲಿಸಲಾಗಿದೆ.