Home ನವ ದೆಹಲಿ Elon Musk | ಎಲಾನ್ ಮಸ್ಕ್ ಜೊತೆ ಸಂಭಾಷಣೆ ನಡೆಸಿದ ಪ್ರಧಾನಿ ಮೋದಿ

Elon Musk | ಎಲಾನ್ ಮಸ್ಕ್ ಜೊತೆ ಸಂಭಾಷಣೆ ನಡೆಸಿದ ಪ್ರಧಾನಿ ಮೋದಿ

8
0
Musk and Modi

ನವ ದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಪ್ರಮುಖ ಸಲಹೆಗಾರ, ವಿಶ್ವದ ಅತ್ಯಂತ ಶ್ರೀಮಂತ ವ್ಯಕ್ತಿ ಎಲಾನ್ ಮಸ್ಕ್ ಅವರೊಂದಿಗೆ ಮಾತುಕತೆ ನಡೆಸಿದ್ದಾರೆ. ತಂತ್ರಜ್ಞಾನ ಮತ್ತು ನಾವೀನ್ಯತೆ ಕ್ಷೇತ್ರಗಳಲ್ಲಿ ಸಹಯೋಗದ ಅಗಾಧ ಸಾಮರ್ಥ್ಯದ ಬಗ್ಗೆ ಇಬ್ಬರೂ ಚರ್ಚಿಸಿದ್ದಾರೆ.

ಟೆಸ್ಲಾ ಮತ್ತು ಸ್ಪೇಸ್‌ಎಕ್ಸ್ ಸೇರಿದಂತೆ ಮಸ್ಕ್ ಅವರ ವ್ಯವಹಾರ ಕಂಪೆನಿಗಳ ಬಗ್ಗೆ ಮಾತುಕತೆ ನಡೆಸಿ ವಿವಿಧ ವಿಷಯಗಳ ಬಗ್ಗೆ ಚರ್ಚಿಸಿದ್ದಾರೆ ಎಂದು ಮೋದಿ ತಮ್ಮ ಎಕ್ಸ್ ಖಾತೆಯಲ್ಲಿ ತಿಳಿಸಿದ್ದಾರೆ.

ಈ ಕ್ಷೇತ್ರಗಳಲ್ಲಿ ಅಮೆರಿಕದೊಂದಿಗೆ ನಮ್ಮ ಪಾಲುದಾರಿಕೆಯನ್ನು ಮುಂದುವರಿಸಲು ಭಾರತ ಬದ್ಧವಾಗಿದೆ ಎಂದು ಮೋದಿ ಹೇಳಿದರು. ಡೊನಾಲ್ಡ್ ಟ್ರಂಪ್ ಆಡಳಿತದಲ್ಲಿ ಮಸ್ಕ್ ಅವರನ್ನು ಅತ್ಯಂತ ಪ್ರಭಾವಶಾಲಿ ವ್ಯಕ್ತಿಗಳಲ್ಲಿ ಒಬ್ಬರೆಂದು ಪರಿಗಣಿಸಲಾಗಿದೆ.

ಇವರು ಟ್ರಂಪ್ ಸರ್ಕಾರದಲ್ಲಿ ವೆಚ್ಚವನ್ನು ಕಡಿತಗೊಳಿಸುವ ಮತ್ತು ಫೆಡರಲ್ ಕಾರ್ಯಪಡೆಯನ್ನು ಕಡಿಮೆ ಮಾಡುವ ಗುರಿಯನ್ನು ಹೊಂದಿರುವ ಸರ್ಕಾರಿ ದಕ್ಷತೆ ಇಲಾಖೆಯನ್ನು (DOGE) ಮುನ್ನಡೆಸುತ್ತಿದ್ದಾರೆ.

LEAVE A REPLY

Please enter your comment!
Please enter your name here