ಮೈಸೂರಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಹೂಗುಚ್ಛ ನೀಡುವ ಮೂಲಕ ಸ್ವಾಗತಿಸಿದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್. ಚಿತ್ರ: DIPR ಕರ್ನಾಟಕ
ಮೈಸೂರು: ಪ್ರಧಾನಿ ನರೇಂದ್ರ ಮೋದಿ ಅವರು ಶುಕ್ರವಾರ ಮೈಸೂರಿನ ಚಾಮುಂಡಿಬೆಟ್ಟದ ತಪ್ಪಲಿನಲ್ಲಿರುವ ಜಯಚಾಮರಾಜೇಂದ್ರ ಸೆಂಟರ್ ಫಾರ್ ಹೈಯರ್ ಲರ್ನಿಂಗ್ ಆವರಣದಲ್ಲಿ ನಿರ್ಮಿಸಲಾಗಿರುವ ವಿಶ್ವದ ಮೊದಲ ಟಿಲ್ಟೆಡ್ ಎಲ್‌ಇಡಿ ಡೋಮ್ ತಾರಾಲಯವಾದ ‘COSMOS-Mysuru’ ಅನ್ನು ಲೋಕಾರ್ಪಣೆ ಮಾಡಿದರು.
ಲೋಕಾರ್ಪಣೆಗೆ ಮೈಸೂರಿನ ಲಲಿತ ಮಹಲ್ ಹ್ಯಾಲಿಪ್ಯಾಡ್‌ಗೆ ಆಗಮಿಸಿದ ಪ್ರಧಾನಿಯವರನ್ನು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಹೂಗುಚ್ಛ ನೀಡಿ ಸ್ವಾಗತಿಸಿದರು. ರಾಜ್ಯಪಾಲರಾದ ಡಾ. ಸುಧಾ ಯಾದವ್, ನಗರಾಭಿವೃದ್ಧಿ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಯತೀಂದ್ರ ಸಿದ್ದರಾಮಯ್ಯ, ಜಿಲ್ಲಾಧಿಕಾರಿ ಡಾ. ಲಕ್ಷ್ಮೀಕಾಂತ ರೆಡ್ಡಿ ಜಿ. ಹಾಗೂ ಮೈಸೂರು ನಗರ ಪೊಲೀಸ್ ಆಯುಕ್ತೆ ಸೀಮಾ ಲಾಟ್ಕರ್ ಸೇರಿದಂತೆ ಇತರ ಗಣ್ಯರು ಉಪಸ್ಥಿತರಿದ್ದರು.
ಈ ತಾರಾಲಯದ ಬಾಗಿದ ಗುಮ್ಮಟ ವಿನ್ಯಾಸ, ಭೇಟಿ ನೀಡುವವರಿಗೆ ಆಕಾಶ ವೀಕ್ಷಣೆಯ ತಲ್ಲೀನಗೊಳಿಸುವ ಅನುಭವ ನೀಡುವ ಉದ್ದೇಶ ಹೊಂದಿದೆ.
