
PM Modi Pays Tribute as Veteran Actress Leelavati Bids Final Goodbye
ಬೆಂಗಳೂರು:
ಹಿರಿಯ ನಟಿ ಲೀಲಾವತಿ ನಿಧನಕ್ಕೆ ಪ್ರಧಾನಿ ಮೋದಿ ಸಂತಾಪ ಸೂಚಿಸಿದ್ದಾರೆ.
ಈ ಬಗ್ಗೆ X ಮಾಡಿರುವ ಅವರು, ಕನ್ನಡ ಚಿತ್ರರಂಗದ ಹೆಸರಾಂತ ನಟಿ ಲೀಲಾವತಿ ಅವರ ನಿಧನದ ಸುದ್ದಿ ಕೇಳಿ ದುಃಖವಾಯಿತು. ಸಿನಿಮಾದ ನೈಜ ಪ್ರತೀಕವಾದ ಅವರು ಹಲವಾರು ಚಲನಚಿತ್ರಗಳಲ್ಲಿ ತಮ್ಮ ಬಹುಮುಖ ನಟನೆಯೊಂದಿಗೆ ಬೆಳ್ಳಿ ಪರದೆಯನ್ನು ಅಲಂಕರಿಸಿದವರು. ಅವರ ವೈವಿಧ್ಯಮಯ ಪಾತ್ರಗಳು ಮತ್ತು ಅದ್ಭುತ ಪ್ರತಿಭೆಯನ್ನು ಸದಾ ಸ್ಮರಿಸಲಾಗುತ್ತದೆ ಮತ್ತು ಪ್ರಶಂಸಿಸಲಾಗುತ್ತದೆ. ಅವರ ಕುಟುಂಬ ಮತ್ತು ಅಭಿಮಾನಿಗಳಿಗೆ ನನ್ನ ಸಂತಾಪಗಳು. ಓಂ ಶಾಂತಿ” ಎಂದು ಪ್ರಧಾನಿ ನರೇಂದ್ರ ಮೋದಿ ತಮ್ಮ ಎಕ್ಸ್ ಖಾತೆಯಲ್ಲಿ ಬರೆದಿದ್ದಾರೆ.
ಕನ್ನಡ ಚಿತ್ರರಂಗದ ಹೆಸರಾಂತ ನಟಿ ಲೀಲಾವತಿ ಅವರ ನಿಧನದ ಸುದ್ದಿ ಕೇಳಿ ದುಃಖವಾಯಿತು. ಸಿನಿಮಾದ ನೈಜ ಪ್ರತೀಕವಾದ ಅವರು ಹಲವಾರು ಚಲನಚಿತ್ರಗಳಲ್ಲಿ ತಮ್ಮ ಬಹುಮುಖ ನಟನೆಯೊಂದಿಗೆ ಬೆಳ್ಳಿ ಪರದೆಯನ್ನು ಅಲಂಕರಿಸಿದವರು. ಅವರ ವೈವಿಧ್ಯಮಯ ಪಾತ್ರಗಳು ಮತ್ತು ಅದ್ಭುತ ಪ್ರತಿಭೆಯನ್ನು ಸದಾ ಸ್ಮರಿಸಲಾಗುತ್ತದೆ ಮತ್ತು ಪ್ರಶಂಸಿಸಲಾಗುತ್ತದೆ. ಅವರ ಕುಟುಂಬ…
— Narendra Modi (@narendramodi) December 8, 2023