Home ಬೆಂಗಳೂರು ನಗರ ಪ್ರಧಾನಿ ನರೇಂದ್ರ ಮೋದಿ ಅವರಿಂದ ಸಿಎಂ ಬೊಮ್ಮಾಯಿಗೆ ದೂರವಾಣಿ ಕರೆ

ಪ್ರಧಾನಿ ನರೇಂದ್ರ ಮೋದಿ ಅವರಿಂದ ಸಿಎಂ ಬೊಮ್ಮಾಯಿಗೆ ದೂರವಾಣಿ ಕರೆ

33
0

ಅಗತ್ಯ ನೆರವು ಮತ್ತು ಸಹಕಾರದ ಭರವಸೆ

ಅಕಾಲಿಕ ಮಳೆಯಿಂದ ಉಂಟಾಗಿರುವ ನಷ್ಟದ ಕುರಿತು ಮಾಹಿತಿ ಪಡೆದ ಪಿಎಂ

ಬೆಂಗಳೂರು:

ರಾಜ್ಯದಲ್ಲಿ ಸುರಿದ ಅಕಾಲಿಕ ಮಳೆಯಿಂದ ಉಂಟಾಗಿರುವ ಬೆಳೆ ಹಾನಿ ಮತ್ತು ಇತರೆ ನಷ್ಟದ ಕುರಿತು ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ದೂರವಾಣಿ ಕರೆ ಮಾಡುವ ಮೂಲಕ ಸಮಗ್ರ ಮಾಹಿತಿ ಪಡೆದುಕೊಂಡರು.

ಮಂಗಳವಾರ ಮುಂಜಾನೆ ನರೇಂದ್ರಮೋದಿಯವರು ದೂರವಾಣಿ ಕರೆ ಮಾಡಿ ಮಾತುಕತೆ ನಡೆಸಿದರು.

ಕಳೆದ ಹಲವು ದಿನಗಳಿಂದ ಎಡೆಬಿಡದೆ ರಾಜ್ಯದಲ್ಲಿ ಸುರಿಯುತ್ತಿರುವ ಮಳೆಯಿಂದ ಉಂಟಾಗಿರುವ ಅತಿವೃಷ್ಟಿ ಹಾಗೂ ಪ್ರವಾಹ ಪರಿಸ್ಥಿತಿಯ ಬಗ್ಗೆ ಮೋದಿಯವರು ಮಾಹಿತಿ ಪಡೆದರು. ಈ ಸಂದರ್ಭದಲ್ಲಿ ರಾಜ್ಯ ಸರ್ಕಾರ ತೆಗೆದುಕೊಂಡಿರುವ ರಕ್ಷಣಾ ಕಾರ್ಯ ಮತ್ತು ಪರಿಹಾರ ಕ್ರಮಗಳ ಬಗ್ಗೆ ಮುಖ್ಯಮಂತ್ರಿಗಳು ಪ್ರಧಾನಮಂತ್ರಿಗಳಿಗೆ ವಿವರಣೆ ನೀಡಿದರು. ಅತಿವೃಷ್ಟಿಯಿಂದ ವಿಶೇಷವಾಗಿ ಜೀವಹಾನಿ ಮತ್ತು ಬೆಳೆ ಹಾನಿ ಉಂಟಾಗಿರುವುದರ ಬಗ್ಗೆ ಪ್ರಧಾನ ಮಂತ್ರಿಗಳು ಕಳಕಳಿ ವ್ಯಕ್ತಪಡಿಸಿದರು. ರಾಜ್ಯಕ್ಕೆ ಅಗತ್ಯ ನೆರವು ಮತ್ತು ಸಹಕಾರ ನೀಡುವ ಭರವಸೆಯನ್ನು ನೀಡಿದರು.

ಕೇಂದ್ರ ಗೃಹಸಚಿವ ಅಮಿತ್ ಶಾ ಅವರು ಕೂಡ ಇಂದು ಮುಖ್ಯಮಂತ್ರಿಗಳಿಗೆ ದೂರವಾಣಿ ಕರೆ ಮಾಡಿದ್ದರು. ರಾಜ್ಯದಲ್ಲಿನ ಪ್ರವಾಹ ಮತ್ತು ಅತಿವೃಷ್ಟಿ ಪರಿಸ್ಥಿತಿಯ ಕುರಿತು ಮಾಹಿತಿ ಪಡೆದರು. ಮಳೆಯಿಂದ ಆಗಿರುವ ಬೆಳೆ ಹಾನಿಯ ಕುರಿತು ವಿಷಾದ ವ್ಯಕ್ತಪಡಿಸಿದರು. ರಾಜ್ಯ ಸರ್ಕಾರ ರೈತರಿಗೆ ನೀಡಿರುವ ನೆರವು, ಪರಿಹಾರ ಕಾರ್ಯ ಮತ್ತು ಎಲ್ಲಾ ಸಹಕಾರಗಳ ಕುರಿತು ಮುಖ್ಯಮಂತ್ರಿಗಳು ಅಮಿತ್ ಶಾ ಅವರಿಗೆ ವಿವರಿಸಿದರು.

Also Read: PM Modi speaks to Karnataka CM Bommai about rain related damages, assures help

LEAVE A REPLY

Please enter your comment!
Please enter your name here