ಬೆಂಗಳೂರು:
ಪ್ರಧಾನಿ ಮೋದಿಯವರು ಜನವರಿ 12 ರ ಮಧ್ಯಾಹ್ನದಂದು ಹುಬ್ಬಳ್ಳಿಗೆ ಆಗಮಿಸುತ್ತಿದ್ದು, ರಾಷ್ಟ್ರೀಯ ಯುವಜನೋತ್ಸವದಲ್ಲಿ ಭಾಗವಹಿಸಲಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಅವರು ಇಂದು ಬೆಂಗಳೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದರು.
ಏಳು ದಿನಗಳ ಕಾಲ ನಡೆಯಲಿರುವ ಈ ಕಾರ್ಯಕ್ರಮದಲ್ಲಿ ದೇಶದ 28 ರಾಜ್ಯಗಳಿಂದ ಹಾಗೂ 8 ಕೇಂದ್ರೀಯ ಪ್ರಾಂತ್ಯದಿಂದ ಯುವಜನರು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುತ್ತಿದ್ದಾರೆ. ಪ್ರಧಾನಿ ಮೋದಿಯವರು ಈ ಕಾರ್ಯಕ್ರಮವನ್ನು ಭಾಗವಹಿಸಿ ಹಿಂದಿರುಗಲಿದ್ದಾರೆ ಎಂದರು.
"ಜನವರಿ 12 ರಂದು ಹುಬ್ಬಳ್ಳಿ ಧಾರವಾಡದಲ್ಲಿ ಆರಂಭವಾಗಲಿರುವ ರಾಷ್ಟ್ರೀಯ ಯುವಜನ ಮೇಳವನ್ನು ಉದ್ಘಾಟಿಸಲು ದೇಶದ ಹೆಮ್ಮೆಯ ಪ್ರಧಾನಮಂತ್ರಿಗಳಾದ ಶ್ರೀ @narendramodi ಅವರು ಆಗಮಿಸಲಿದ್ದಾರೆ. ಇದಾದ ಬಳಿಕ ಜನವರಿ 19ರಂದು ನಾರಾಯಣಪುರದಲ್ಲಿ ನಡೆಯುವ ಕಾರ್ಯಕ್ರಮಕ್ಕೂ ಸಹ ಆಗಮಿಸಲಿದ್ದಾರೆ." ಮುಖ್ಯಮಂತ್ರಿ: @BSBommai pic.twitter.com/K1JgmXB9Ie
— CM of Karnataka (@CMofKarnataka) January 9, 2023
Also Read: PM to inaugurate National Youth Festival in Hubballi on Jan 12: Karnataka CM
ಜನವರಿ 19 ರಂದು ಪ್ರಧಾನಿ ಮೋದಿಯವರು ನಾರಾಯಣಪುರದಲ್ಲಿ ಆಗಮಿಸಲಿದ್ದು,ಕೇಂದ್ರ ಹಾಗೂ ರಾಜ್ಯ ಅನುದಾನಿತ ನಾರಾಯಣಪುರ ಎಡದಂಡೆ ಕಾಲುವೆ (ಎನ್ ಎಲ್ ಬಿ ಸಿ) ಆಧುನೀಕರಣದ ಯೋಜನೆಯನ್ನು ರಾಷ್ಟ್ರಕ್ಕೆ ಸಮರ್ಪಿಸುವ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಇದೇ ಸಂದರ್ಭದಲ್ಲಿ ಗುಲ್ಬರ್ಗಾದ ಬಂಜಾರ ಸಮಾವೇಶ ನಡೆಸುವ ಯೋಜನೆಯಿದ್ದು, ಪ್ರಧಾನಿ ಮೋದಿಯವರು ಈ ಕಾರ್ಯಕ್ರಮದಲ್ಲಿ ಭಾಗವಹಿಸುವ ಬಗ್ಗೆ ಇನ್ನೂ ನಿಶ್ಚಯವಾಗಿಲ್ಲ ಎಂದು ತಿಳಿಸಿದರು.