ಬೆಂಗಳೂರು: ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ವಿರುದ್ಧ ಪೋಕ್ಸೋ ಕಾಯ್ದೆಯಡಿ ದಾಖಲಾಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆಯ ಹೊಣೆಯನ್ನು ಸಿಐಡಿಗೆ ರಾಜ್ಯ ಸರಕಾರ ವರ್ಗಾಯಿಸಿದೆ.
ಯಡಿಯೂರಪ್ಪ ವಿರುದ್ಧದದ ಪ್ರಕರಣದ ತನಿಖೆಯನ್ನು ಸಿಐಡಿಗೆ ವರ್ಗಾಯಿಸುವುದಾಗಿ ಐಜಿಪಿ ಅಲೋಕ್ ಮೋಹನ್ ತಿಳಿಸಿದ್ದು, ಅಧಿಕೃತವಾಗಿ ಆದೇಶವನ್ನು ಹೊರಡಿಸಿದ್ದಾರೆ.
ಏನಿದು ಘಟನೆ: ಕಳೆದ ಫೆಬ್ರವರಿಯಲ್ಲಿ ದೌರ್ಜನ್ಯ ಎಸಗಿದ ಆರೋಪ ಕೇಳಿಬಂದಿದೆ. ಈ ಸಂಬಂಧ ಸಂತ್ರಸ್ತೆಯ ತಾಯಿ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾಳೆ. ಮಾಜಿ ಸಿಎಂ ವಿರುದ್ಧ ಪೋಕ್ಸೊ ಮತ್ತು 354 (ಎ) ಐಪಿಸಿ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಮಮತ ಸಿಂಗ್ ತಮ್ಮ ಸಂತ್ರಸ್ತ ಮಗಳೊಂದಿಗೆ 2024ರ ಫೆಬ್ರವರಿ 2 ರಂದು ಬಿಎಸ್ವೈ ಮನೆಗೆ ತೆರಳಿದ್ದಾರೆ. ಅಪ್ರಾಪ್ತೆ ಮೇಲೆ ಈ ಹಿಂದೆ ಅತ್ಯಾಚಾರವಾಗಿದ್ದ ಪ್ರಕರಣಕ್ಕೆ ಸಂಬಂಧಿಸಿ ಪ್ರಕರಣವನ್ನು ಎಸ್ಐಟಿಗೆ ನೀಡಿ ನ್ಯಾಯ ಒದಗಿಸುವಂತೆ ಕೋರಿ ಬಿಎಸ್ವೈ ಅವರನ್ನು ಕೇಳಿಕೊಂಡಿದ್ದಾರೆ.
ಈ ವೇಳೆ ನಮ್ಮೊಂದಿಗೆ ಮಾತನಾಡಲು 9 ನಿಮಿಷಗಳ ಕಾಲಾವಕಾಶ ನೀಡಿದ್ದರು. ಬಳಿಕ ನನ್ನ ಮಗಳನ್ನು ರೂಂ ಗೆ ಕರೆದುಕೊಂಡು ಹೋದ ಮಾಜಿ ಸಿಎಂ ಯಡಿಯೂರಪ್ಪ ಅವರು ನನ್ನ ಮಗಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಸಂತ್ರಸ್ತೆ ತಾಯಿ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ನೀಡಿರುವ ದೂರಿನಲ್ಲಿ ತಿಳಿಸಿದ್ದಾರೆ. ಈ ಹಿನ್ನೆಲೆ ಬಿಎಸ್ ಯಡಿಯೂರಪ್ಪ ವಿರುದ್ದ ಪೋಕ್ಸೋ ಹಾಗು 354(A) ಅಡಿಯಲ್ಲಿ ಎಫ್ಐಆರ್ ದಾಖಲಾಗಿದೆ.