ದಾವಣಗೆರೆ:
ಜಾಮೀನಿನ ಮೇಲೆ ಬಿಡುಗಡೆ ಹೊಂದಿದ್ದ ಚಿತ್ರದುರ್ಗದ ಮುರುಘಾ ಮಠದ ಡಾ. ಶಿವಮೂರ್ತಿ ಮುರುಘಾ ಶರಣರನ್ನು ದಾವಣಗೆರೆ ಬಸವನಗರ ಠಾಣೆಯ ಪೊಲೀಸರ ಸಹಕಾರದೊಂದಿಗೆ ಮತ್ತೆ ಚಿತ್ರದುರ್ಗ ಪೊಲೀಸರು ಬಂಧಿಸಿದ್ದಾರೆ.
ಎರಡನೇ ಪೊಕ್ಸೊ ಪ್ರಕರಣಕ್ಕೆ ಸಂಬಂಧಿಸಿದಂತೆ ಮೊದಲ ಆರೋಪಿಯಾಗಿರುವ ಡಾ.ಶಿವಮೂರ್ತಿ ಮುರುಘಾ ಶರಣರ ವಿರುದ್ದ ಚಿತ್ರದುರ್ಗದ ಎರಡನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಜಾಮೀನು ರಹಿತ ಬಂಧನದ ವಾರೆಂಟ್ ಆದೇಶ ನೀಡಿದ ಹಿನ್ನೆಲೆಯಲ್ಲಿ ನಗರದ ವಿರಕ್ತಮಠದಲ್ಲಿದ್ದ ಮುರುಘಾ ಶರಣರನ್ನು ವಶಕ್ಕೆ ಪಡೆದಿದ್ದಾರೆ.
ಈ ಸಂದರ್ಭದಲ್ಲಿ ವಿರಕ್ತಮಠದ ಸುತ್ತಮುತ್ತ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿತ್ತು.