Home ಮಂಡ್ಯ Mandya: ಪತ್ನಿ, ಇಬ್ಬರು ಮಕ್ಕಳನ್ನು ಹತ್ಯೆ ಮಾಡಿದ್ದ ವ್ಯಕ್ತಿಯ ಬಂಧನ

Mandya: ಪತ್ನಿ, ಇಬ್ಬರು ಮಕ್ಕಳನ್ನು ಹತ್ಯೆ ಮಾಡಿದ್ದ ವ್ಯಕ್ತಿಯ ಬಂಧನ

15
0
Police Arrest man for killing wife and two children's in Mandya
Police Arrest man for killing wife and two children's in Mandya
Advertisement
bengaluru

ಶ್ರೀರಂಗಪಟ್ಟಣ (ಮಂಡ್ಯ):

ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಕೊಂದ ವ್ಯಕ್ತಿಯನ್ನು ಶ್ರೀರಂಗಪಟ್ಟಣ ಗ್ರಾಮಾಂತರ ಪೊಲೀಸರು ಭಾನುವಾರ ಬಂಧಿಸಿದ್ದು, ಜೈಲಿಗೆ ಕಳುಹಿಸಿದ್ದಾರೆ.

ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲೂಕಿನ ಮರಳಗಾಲ ಗ್ರಾಮದ ಹೊರವಲಯದಲ್ಲಿರುವ ಚಾಮುಂಡೇಶ್ವರಿ ಫಾರ್ಮ್ ಹೌಸ್​ನಲ್ಲಿ ಆರೋಪಿ ಶ್ರೀಕಾಂತ್ ತನ್ನ ಕೈಯಿಂದಲೇ ಕುಟುಂಬದ ಸರ್ವನಾಶ ಮಾಡಿದ್ದ. ಸದ್ಯ ಈಗ ಪುಟ್ಟ ಕಂದಮ್ಮಗಳನ್ನು ಕೊಂದ ದುರುಳ ಜೈಲು ಸೇರಿದ್ದಾನೆ.

ಆರೋಪಿ ಶ್ರೀಕಾಂತ್ ತನ್ನ ಪತ್ನಿ ಲಕ್ಷ್ಮೀ ಮೇಲೆ ಹಲ್ಲೆ ನಡೆಸಿ ಇಬ್ಬರು ಪುಟ್ಟ ಮಕ್ಕಳನ್ನು ಸುತ್ತಿಗೆಯಿಂದ ಹೊಡೆದು ಕೊಲೆ ಮಾಡಿದ್ದ. ಬುಧವಾರ ಮಧ್ಯ ರಾತ್ರಿಯೇ ಇಬ್ಬರು ಮಕ್ಕಳನ್ನ ಕೊಂದು ತನ್ನ ಹುಟ್ಟೂರಾದ ಜೇವರ್ಗಿಗೆ ತೆರಳಿದ್ದ. ಮನೆಗೆ ಹೋಗಿ ಒಂಚೂರು ಪಶ್ಚಾತಾಪ ಪಡದೆ ಕಂಠ ಪೂರ್ತಿ ಮದ್ಯ ಸೇವಿಸಿ ಮಲಗಿದ್ದ. ಟಿವಿಯಲ್ಲಿ ಮಕ್ಕಳ ಕೊಲೆ ವಿಚಾರ ತಿಳಿದು ಸ್ವತಃ ಶ್ರೀಕಾಂತ್ ಪೋಷಕರೆ ಪೊಲೀಸರಿಗೆ ಸುದ್ದಿ ಮುಟ್ಟಿಸಿದ್ದಾರೆ. ಮಾಹಿತಿ ಪಡೆದ ಪೊಲೀಸರು ಶ್ರೀಕಾಂತ್​ನನ್ನು ಬಂಧಿಸಿದ್ದಾರೆ.

bengaluru bengaluru
SUN12

ಬಂಧನದ ಬಳಿಕ ಕೊಲೆಗೆ ಕಾರಣವೇನು ಎಂಬುದನ್ನ ಶ್ರೀಕಾಂತ್ ರಿವೀಲ್ ಮಾಡಿದ್ದಾನೆ. ಹೆಂಡತಿ ಯಾವಾಗಲು ಮೊಬೈಲ್​ನಲ್ಲಿ ಮಾತನಾಡುತ್ತಿದ್ದಳು. ಯಾರೊಂದಿಗೂ ಗಂಟೆ ಗಟ್ಟಲೇ ಮಾತನಾಡುತ್ತಲೇ ಇದ್ದಳು. ಈ ಹಿನ್ನಲೆ ಪತ್ನಿಯ ಮೇಲೆ ಶಂಕೆ ವ್ಯಕ್ತಪಡಿಸಿ ಶ್ರೀಕಾಂತ್ ಕಿರಿಕ್ ಮಾಡ್ತಿದ್ದ. ಪತ್ನಿ ಲಕ್ಷ್ಮೀಯ ಶೀಲವನ್ನ ಶಂಕಿಸಿ ಪದೆ ಪದೇ ಗಲಾಟೆ ನಡೆಯುತ್ತಿತ್ತು. ಆರೋಪಿ ಶ್ರೀಕಾಂತ್ ಇಬ್ಬರು ಮಕ್ಕಳು ನನ್ನದಲ್ಲವೆಂದು ಮಕ್ಕಳ ಮೇಲೆ ಸದಾ ಕೆಂಡ ಕಾರುತ್ತಿದ್ದನಂತೆ. ಬುಧವಾರ ರಾತ್ರಿ ಮಕ್ಕಳ ಕತ್ತನ್ನ ಸೀಳಿ ಸುತ್ತಿಗೆಯಿಂದ ತಲೆಗೆ ಹೊಡೆದು ಕೊಂದು ಹಾಕಿದ್ದು ಪತ್ನಿಯನ್ನ ಕೊಲ್ಲಲು ಬರೋಬ್ಬರಿ 6 ಬಾರಿ ತಲೆಗೆ ಸುತ್ತಿಗೆಯಿಂದ ಹೊಡೆದಿದ್ದಾಗಿ ಪೊಲೀಸರ ಬಳಿ ಕಾರಣ ಬಾಯ್ಬಿಟ್ಟಿದ್ದಾನೆ.

ಲಕ್ಷ್ಮಿ ತಂದೆ ಮೋಹನ್ ಕುಮಾರ್ ನೀಡಿದ ದೂರಿನ ಆಧಾರದ ಮೇಲೆ ಐಪಿಸಿ ಸೆಕ್ಷನ್ 302 (ಕೊಲೆ) ಮತ್ತು 307 (ಕೊಲೆ ಅಪರಾಧ) ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಜೂನ್ 24 ರಂದು ಕಲಬುರಗಿ ಜಿಲ್ಲೆಯ ದೇವಲ ಗಾಣಗಾಪುರ ಗ್ರಾಮದಲ್ಲಿ ಹಂತಕನನ್ನು ಬಂಧಿಸಿದ್ದಾರೆ.

ಆತನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ ನಂತರ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.


bengaluru

LEAVE A REPLY

Please enter your comment!
Please enter your name here