Home ರಾಜಕೀಯ ಅಕ್ರಮ ಮರುಳು ಸಾಗಾಣಿಕೆ ಟ್ರಾಕ್ಟರ್ ಹರಿದು ಪೊಲೀಸ್ ಪೇದೆ ಸಾವು: ಜಿಲ್ಲಾ ಉಸ್ತುವಾರಿ ಸಚಿವರಿಂದ ಸಾಂತ್ವನ,...

ಅಕ್ರಮ ಮರುಳು ಸಾಗಾಣಿಕೆ ಟ್ರಾಕ್ಟರ್ ಹರಿದು ಪೊಲೀಸ್ ಪೇದೆ ಸಾವು: ಜಿಲ್ಲಾ ಉಸ್ತುವಾರಿ ಸಚಿವರಿಂದ ಸಾಂತ್ವನ, ಪರಿಹಾರ ಕೊಡಿಸುವ ಭರವಸೆ

14
0
Police constable dies after tractor runs over him over illegal sand transport: District in-charge minister Priyank Kharge promises action and compensation
Police constable dies after tractor runs over him over illegal sand transport: District in-charge minister Priyank Kharge promises action and compensation

ಅಕ್ರಮ‌ ಮರುಳು ಸಾಗಾಣಿಕೆ ತಡೆಗೆ ಕೂಡಲೇ ಕಟ್ಟುನಿಟ್ಟಿನ ಕ್ರಮಕ್ಕೆ ಆದೇಶ

ಬೆಂಗಳೂರು:

ಅಕ್ರಮ ಮರುಳುಸಾಗಾಣಿಕೆ‌ ಮಾಡುತ್ತಿದ್ದ ಟ್ರಾಕ್ಟರ್ ಹರಿದು ಜೇವರ್ಗಿ ತಾಲೂಕು ನೆಲೋಗಿ ಪೊಲೀಸ್ ಠಾಣಾ ವ್ಯಾಪ್ತಿಯ ಹುಲ್ಲೂರು ಚೆಕ್ ಪೋಸ್ಟ್ ಬಳಿ ಕರ್ತವ್ಯ ನಿರತ ಪೊಲೀಸ್ ಪೇದೆಯೊಬ್ಬರು ಸಾವನ್ನಪ್ಪಿರುವ ಘಟನೆ ನಡೆದಿದ್ದು ಇದು ಅತ್ಯಂತ ನೋವಿನ ಸಂಗತಿಯಾಗಿದೆ ಎಂದು ಗ್ರಾಮೀಣಾಭಿವೃದ್ದಿ ಹಾಗೂ ಪಂಚಾಯತ್ ರಾಜ್ ಸಚಿವ ಮತ್ತು ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.

ಈ ಕುರಿತು ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಅವರು ಜೇವರ್ಗಿ ತಾಲೂಕಿನ ನೆಲೋಗಿ ಪೊಲೀಸ್ ಠಾಣೆಯ ಮುಖ್ಯ ಪೇದೆ ಮಯೂರ ತಂದೆ ಭೀಮು ಚವ್ಹಾಣ (51) ಮೃತಪಟ್ಟಿದ್ದು. ಘಟನೆಗೆ ಸಂಬಂಧಿಸಿದಂತೆ ಈಗಾಗಲೇ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅವರಿಗೆ ಕರೆ ಮಾಡಿ ಮಾತನಾಡಿದ್ದು ತನಿಖೆಗೆ ಆದೇಶಿಸಿದ್ದೇನೆ ಎಂದು ಹೇಳಿದ್ದಾರೆ.

ಈ ಸಂದರ್ಭದಲ್ಲಿ ಮೃತ ಪೊಲೀಸ್ ಪೇದೆ ಕುಟುಂಬಕ್ಕೆ ಸಾಂತ್ವನ ಹೇಳಿರುವ ಸಚಿವರು ಸರ್ಕಾರವತಿಯಿಂದ ಶೀಘ್ರದಲ್ಲಿಯೇ ಸೂಕ್ತ ಪರಿಹಾರ ದೊರಕಿಸಿಕೊಡಲಾಗುವುದು ಎಂದು ಭರವಸೆ ನೀಡಿದ್ದಾರೆ.

” ಜಿಲ್ಲೆಯಲ್ಲಿ ಅಕ್ರಮ ಮರುಳು ಸಾಗಾಣಿಕೆ ತಡೆಯಲು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಈಗಾಗಲೇ ಕಂದಾಯ ಹಾಗೂ ಪೊಲೀಸ್ ಇಲಾಖೆಗಳಿಗೆ ನಿರ್ದೇಶನ ನೀಡಲಾಗಿದ್ದರೂ ಕೂಡಾ ಈ ಘಟನೆ ನಡೆದಿದೆ. ಈ ಹಿನ್ನೆಲೆಯಲ್ಲಿ ಮತ್ತೊಮ್ಮೆ ಸಂಬಂಧಿಸಿದ ಹಾಗೂ ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಆದೇಶ ನೀಡಿ ಈ ಕೂಡಲೇ ಅಕ್ರಮ ಮರುಳು ಸಾಕಾಣಿಕೆ ವಿರುದ್ದ ಕಾನೂನು ಕ್ರಮ ಜರುಗಿಸಲು ನಿರ್ದೇಶಿಸಿದ್ದೇನೆ ” ಎಂದು ಅವರು ಹೇಳಿದ್ದಾರೆ.

LEAVE A REPLY

Please enter your comment!
Please enter your name here