Home ಕರ್ನಾಟಕ ಕರ್ನಾಟಕದಲ್ಲಿ ಸೈಬರ್ ಅಪರಾಧ ತಡೆಗೆ ‘1930’ ಸಹಾಯವಾಣಿ ಪ್ರಾರಂಭಿಸಿದ ಪೊಲೀಸ್ ಇಲಾಖೆ

ಕರ್ನಾಟಕದಲ್ಲಿ ಸೈಬರ್ ಅಪರಾಧ ತಡೆಗೆ ‘1930’ ಸಹಾಯವಾಣಿ ಪ್ರಾರಂಭಿಸಿದ ಪೊಲೀಸ್ ಇಲಾಖೆ

31
0

ಬೆಂಗಳೂರು: ರಾಜ್ಯದಲ್ಲಿ ಸೈಬರ್ ವಂಚನೆ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆ ಸೈಬರ್ ಅಪರಾಧಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ರಾಜ್ಯ ಪೊಲೀಸ್ ಇಲಾಖೆಯು ‘1930’ ಎನ್ನುವ ಸಹಾಯವಾಣಿಯನ್ನು ಪ್ರಾರಂಭಿಸಿದೆ.

ಈ ಕುರಿತು ಎಕ್ಸ್ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿರುವ ರಾಜ್ಯ ಪೊಲೀಸ್ ಇಲಾಖೆ, ‘ಆತ್ಮೀಯ ಆನ್‍ಲೈನ್ ಬಳಕೆದಾರರೇ ಸೈಬರ್ ವಂಚನೆಯಿಂದ ದೂರ ಇರಲು ನಿಮ್ಮ ನಡೆಯ ಯಾವುದೇ ಸುಳಿವು ವಂಚಕರಿಗೆ ನೀಡಬೇಡಿ. ಒಂದು ವೇಳೆ ನೀವು ಸೈಬರ್ ಬಲೆಯಲ್ಲಿ ಸಿಲುಕಿದ್ದರೆ ಹತ್ತಿರದ ಪೊಲೀಸ್ ಠಾಣೆಗೆ ದೂರು ನೀಡಿ. ಅಥವಾ ಸೈಬರ್ ಕ್ರೈಂ ಸಹಾಯವಾಣಿ 1930ಗೆ ಕರೆ ಮಾಡಿ’ ಎಂದು ತಿಳಿಸಿದೆ.

ಬೆಂಗಳೂರಿನಲ್ಲಿ ಸೈಬರ್ ವಂಚಕರ ಹಾವಳಿ ಮಿತಿ ಮೀರಿದ್ದು, ಪ್ರತಿ ವರ್ಷ ಹತ್ತು ಸಾವಿರಕ್ಕೂ ಅಧಿಕ ಪ್ರಕರಣಗಳು ದಾಖಲಾಗುತ್ತಿವೆ. ಸೈಬರ್ ವಂಚಕರ ಬಲೆಗೆ ಬಿದ್ದು ಜನರು ಕೋಟ್ಯಾಂತರ ರೂ. ಕಳೆದುಕೊಂಡಿದ್ದಾರೆ. ರಾಜ್ಯಾದ್ಯಂತ ಪ್ರಕರಣ ಸಂಖ್ಯೆ ದುಪ್ಪಟ್ಟಾಗುತ್ತಿದ್ದು, ಇದರ ಬಗ್ಗೆ ಸಾಮಾಜಕ ಮಾಧ್ಯಮ ಬಳಕೆದಾರರು ಎಚ್ಚರಿಕೆ ವಹಿಸಬೇಕು ಎಂದು ಇಲಾಖೆ ಹೇಳಿದೆ.

LEAVE A REPLY

Please enter your comment!
Please enter your name here