Home ಹುಬ್ಬಳ್ಳಿ Hubballi Encounter| ಹುಬ್ಬಳ್ಳಿ ಬಾಲಕಿಯನ್ನು ಹತ್ಯೆಗೈದ ಆರೋಪಿಯ ಭಾವಚಿತ್ರ ಬಿಡುಗಡೆ ಮಾಡಿದ ಪೊಲೀಸರು

Hubballi Encounter| ಹುಬ್ಬಳ್ಳಿ ಬಾಲಕಿಯನ್ನು ಹತ್ಯೆಗೈದ ಆರೋಪಿಯ ಭಾವಚಿತ್ರ ಬಿಡುಗಡೆ ಮಾಡಿದ ಪೊಲೀಸರು

99
0

ಹುಬ್ಬಳ್ಳಿ: ನಗರದ ಹೊರವಲಯದಲ್ಲಿ ಇತ್ತೀಚೆಗೆ ಐದು ವರ್ಷದ ಬಾಲಕಿ ಹತ್ಯೆಗೈದು ಪೊಲೀಸರ ಎನ್‌ಕೌಂಟರ್​ನಲ್ಲಿ ಮೃತಪಟ್ಟ ಆರೋಪಿ ರಿತೇಶಕುಮಾರ (35) ಪೋಟೋವನ್ನು ಅಶೋಕನಗರ ಠಾಣೆ ಪೊಲೀಸರು ಬಿಡುಗಡೆ ಮಾಡಿದ್ದು, ಕುಟುಂಬಸ್ಥರ ಪತ್ತೆಗೆ ತನಿಖೆ ಕೈಗೊಂಡಿದ್ಧಾರೆ.

ಹುಬ್ಬಳ್ಳಿಯ ಕೆಎಂಸಿಆರ್​​ಐ ಶವಗಾರದಲ್ಲಿ ಇಲ್ಲಿಯವರೆಗೂ ಅನಾಥವಾಗಿರುವ ರಿತೇಶಕುಮಾರ ಮೃತದೇಹವನ್ನು ಗುರುತಿಸಲು ಆತನ ಸಂಬಂಧಿಕರಾಗಲಿ, ಪರಿಚಯಸ್ಥರಾಗಲಿ ಯಾರೂ ಬಂದಿಲ್ಲ. ಹೀಗಾಗಿ, ಪೊಲೀಸರು ಪೋಟೋ ಸಹಿತ ಪ್ರಕಟಣೆ ಹೊರಡಿಸಿದ್ದಾರೆ.

ಈತನ ಗುರುತು ಪರಿಚಯ ಇದ್ದವರು ಕೂಡಲೇ 0836-2233490 ಗೆ ಸಂಪರ್ಕಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

LEAVE A REPLY

Please enter your comment!
Please enter your name here