ಚಿಕ್ಕಬಳ್ಳಾಪೂರ ಶಾಸಕ ಪ್ರದೀಪ್ ಈಶ್ವರ್ (Pradeep Eshwar) ಅಚ್ಚರಿ ಎನ್ನುವಂತೆ ಬಿಗ್ ಬಾಸ್ (Bigg Boss Kannada) ಮನೆ ಪ್ರವೇಶ ಮಾಡಿದ್ದಾರೆ. ಎಲ್ಲ ಸ್ಪರ್ಧಿಗಳನ್ನು ಸುದೀಪ್ ಶನಿವಾರವೇ ದೊಡ್ಮನೆ ಒಳಗೆ ಕಳುಹಿಸಿದ್ದರೆ, ಒಂದು ದಿನ ತಡವಾಗಿ ಪ್ರದೀಪ್ ದೊಡ್ಮನೆ ಪ್ರವೇಶ ಮಾಡಿದ್ದಾರೆ. ಡೊಳ್ಳು ಕುಣಿತ ಮೂಲಕ ಅವರನ್ನು ಬಿಗ್ ಬಾಸ್ ಮನೆಗೆ ಸ್ವಾಗತ ನೀಡಿದ್ದಾರೆ.
CP Yogeshwar; ಕಾಂಗ್ರೆಸ್ ಇಂದು ಬಹುಮತದಿಂದ ಅಧಿಕಾರಕ್ಕೆ ಬರಲು ನಮ್ಮ ಜಗಳ ಕಾರಣ – ಸಿ.ಪಿ.ಯೋಗೇಶ್ವರ್
ಈ ಸಂದರ್ಭದಲ್ಲಿ ಪ್ರದೀಪ್ ಈಶ್ವರ್ ಕಂಡು ಸ್ಪರ್ಧಿಗಳು ಅಚ್ಚರಿ ವ್ಯಕ್ತ ಪಡಿಸಿದರು. ತುಕಾಲಿ ಸಂತು, ‘ನಾವು ಒಬ್ಬ ಎಂ.ಎಲ್.ಎ ಜೊತೆ ಸ್ಪರ್ಧೆ ಮಾಡಬೇಕು’ ಎಂದು ಮಾತನಾಡಿದರೆ, ಅದಕ್ಕೆ ಪ್ರದೀಪ್, ‘ನಾವು ಸೋಲಬೇಕು ಅಂತಾನೆ ಬೆಂಗಳೂರಿಗೆ ಬಂದವನು’ ಎಂದು ಉತ್ತರಿಸಿದ್ದಾರೆ. ಪ್ರದೀಪ್ ಈಶ್ವರ್ ಮನೆಗೆ ಬಂದಿರುವುದು ಹೊಸ ಕಳೆ ಬಂದಂತಾಗಿದೆ. ಒಬ್ಬ ಜನಪ್ರತಿನಿಧಿ ಎಷ್ಟು ದಿನ ಆ ಮನೆಯಲ್ಲಿ ಉಳಿಯಬಹುದು ಎನ್ನುವುದೇ ಅಚ್ಚರಿ.
The post Pradeep Eshwar: ಬಿಗ್ ಬಾಸ್ ಮನೆಗೆ ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಹೊಸ ಎಂಟ್ರಿ..! appeared first on Ain Live News.