ಕೇಂದ್ರ ಶಿಕ್ಷಣ ಸಚಿವರಾಗಿ ಪ್ರಲ್ಹಾದ್ ಜೋಶಿ ಅಧಿಕಾರ ಸ್ವೀಕಾರ
ನವದೆಹಲಿ: ಪ್ರಲ್ಹಾದ್ ಜೋಶಿ ಅವರು ರವಿವಾರ ಕೇಂದ್ರ ಶಿಕ್ಷಣ ಸಚಿವರಾಗಿ ಅಧಿಕಾರ ಸ್ವೀಕರಿಸಿದ್ದು, ಈ ಜವಾಬ್ದಾರಿಯನ್ನು ವಹಿಸಿರುವುದಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಕೃತಜ್ಞತೆ ಸಲ್ಲಿಸಿದ್ದಾರೆ.
ಎಕ್ಸ್ನಲ್ಲಿ ಪ್ರಕಟಿಸಿದ ಸಂದೇಶದಲ್ಲಿ, ತಮ್ಮ ಮೇಲೆ ವಿಶ್ವಾಸವಿಟ್ಟು ಈ ಜವಾಬ್ದಾರಿಯನ್ನು ನೀಡಿದ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಧನ್ಯವಾದ ತಿಳಿಸಿದ್ದಾರೆ. ಈ ಹೊಣೆಗಾರಿಕೆಯನ್ನು ವಿನಮ್ರತೆಯಿಂದ ಹಾಗೂ ಆಳವಾದ ಕರ್ತವ್ಯಪ್ರಜ್ಞೆಯೊಂದಿಗೆ ಸ್ವೀಕರಿಸುತ್ತಿರುವುದಾಗಿ ಅವರು ಹೇಳಿದ್ದಾರೆ.
ಕೇಂದ್ರ ಶಿಕ್ಷಣ ಸಚಿವಾಲಯದ ಹೆಚ್ಚುವರಿ ಹೊಣೆಯನ್ನು ನೀಡಿದ ಬಳಿಕ ಪ್ರಲ್ಹಾದ್ ಜೋಶಿ ಅವರು ಸಚಿವರಾಗಿ ಅಧಿಕಾರ ಸ್ವೀಕರಿಸಿದರು.
