ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ: ತಲೆಮರೆಸಿಕೊಂಡಿರುವ ಆರೋಪಿಗಳಿಗೆ ಆಗಸ್ಟ್ 18ರೊಳಗೆ ಶರಣಾಗಲು ಎರಡನೇ ಬಾರಿಗೆ ಎನ್ಐಎ ಗಡುವು
ಬೆಂಗಳೂರು:
ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಪತ್ನಿಯನ್ನು ಗ್ರೂಪ್ ಸಿ ಹುದ್ದೆಗೆ ಮರು ನೇಮಕ ಮಾಡಿಕೊಳ್ಳುವುದಾಗಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಘೋಷಿಸಿದ್ದಾರೆ.
ಈ ಕುರಿತಂತೆ ಇಂದು ಟ್ವಿಟ್ ಮಾಡಿರುವಂತ ಅವರು: “ಹೊಸ ಸರ್ಕಾರ ಬಂದ ನಂತರ ಹಿಂದಿನ ಸರ್ಕಾರ ನೇಮಕ ಮಾಡಿಕೊಂಡಿದ್ದ ತಾತ್ಕಾಲಿಕ ನೌಕರರನ್ನು ಸರ್ಕಾರಿ ಸೇವೆಯಿಂದ ವಜಾ ಮಾಡುವುದು ಒಂದು ಸಹಜ ಪ್ರಕ್ರಿಯೆ. ಪ್ರವೀಣ್ ನೆಟ್ಟಾರು ಅವರ ಪತ್ನಿ ಮಾತ್ರವಲ್ಲ ಸುಮಾರು 150ಕ್ಕೂ ಹೆಚ್ಚು ಗುತ್ತಿಗೆ ನೌಕರರನ್ನು ಈಗಾಗಲೇ ಸೇವೆಯಿಂದ ವಜಾ ಮಾಡಲಾಗಿದೆ. ಇದರಲ್ಲಿ ಸರ್ಕಾರದ ಯಾವುದೇ ಹಸ್ತಕ್ಷೇಪವಿಲ್ಲ. ಇದನ್ನು ವಿಶೇಷ ಪ್ರಕರಣವೆಂದು ಪರಿಗಣಿಸಿ ಮಾನವೀಯತೆ ಆಧಾರದಲ್ಲಿ ನೂತನ ಕುಮಾರಿ ಅವರ ಮರು ನೇಮಕ ಮಾಡಲಾಗುವುದು ಎಂಬುದಾಗಿ ತಿಳಿಸಿದ್ದಾರೆ.”

