ಧರ್ಮೇಂದ್ರ ಪ್ರಧಾನ ರಾಜೀನಾಮೆ ಅಂಗೀಕಾರ; ಶಿಕ್ಷಣ ಸಚಿವಾಲಯದ ಹೆಚ್ಚುವರಿ ಹೊಣೆ ಪ್ರಲ್ಹಾದ್ ಜೋಶಿಗೆ
ನವದೆಹಲಿ: ಪ್ರಧಾನಿ ಅವರ ಸಲಹೆಯ ಮೇರೆಗೆ ರಾಷ್ಟ್ರಪತಿಗಳು ಕೇಂದ್ರ ಸಚಿವ ಸಂಪುಟದಿಂದ ಧರ್ಮೇಂದ್ರ ಪ್ರಧಾನ ಅವರ ರಾಜೀನಾಮೆಯನ್ನು ತಕ್ಷಣದಿಂದ ಜಾರಿಗೆ ಬರುವಂತೆ ಅಂಗೀಕರಿಸಿದ್ದಾರೆ.
ರಾಷ್ಟ್ರಪತಿ ಭವನ ಬಿಡುಗಡೆ ಮಾಡಿರುವ ಪತ್ರಿಕಾ ಪ್ರಕಟಣೆಯ ಪ್ರಕಾರ, ಭಾರತದ ಸಂವಿಧಾನದ 75ನೇ ವಿಧಿಯ (2)ನೇ ಉಪವಿಧಿಯ ಅನ್ವಯ ಧರ್ಮೇಂದ್ರ ಪ್ರಧಾನ ಅವರ ರಾಜೀನಾಮೆಯನ್ನು ಅಂಗೀಕರಿಸಲಾಗಿದೆ.

ಇದೇ ವೇಳೆ, ಪ್ರಧಾನಿ ಅವರ ಸಲಹೆಯ ಮೇರೆಗೆ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಅವರಿಗೆ ಅವರ ಈಗಿನ ಖಾತೆಗಳ ಜೊತೆಗೆ ಶಿಕ್ಷಣ ಸಚಿವಾಲಯದ ಹೆಚ್ಚುವರಿ ಹೊಣೆಯನ್ನು ವಹಿಸುವಂತೆ ರಾಷ್ಟ್ರಪತಿಗಳು ನಿರ್ದೇಶನ ನೀಡಿದ್ದಾರೆ.
ಈ ಆದೇಶ ತಕ್ಷಣದಿಂದಲೇ ಜಾರಿಗೆ ಬಂದಿದೆ.
