ಬೆಂಗಳೂರು:
ಭಾರತದ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ನಾಲ್ಕು ದಿನಗಳ ಅಧಿಕೃತ ರಾಜ್ಯ ಭೇಟಿಗಾಗಿ ಭಾರತೀಯ ವಾಯು ಪಡೆಯ ವಿಶೇಷ ವಿಮಾನದಲ್ಲಿ ಗುರುವಾರ ಸಂಜೆ ಬೆಂಗಳೂರಿಗೆ ಆಗಮಿಸಿದರು.
ರಾಷ್ಟ್ರದ ಪ್ರಥಮ ಮಹಿಳೆ ಸವಿತಾ ಕೋವಿಂದ ಅವರೂ ರಾಷ್ಟ್ರಪತಿಯವರ ಜೊತೆಯಲ್ಲಿ ಆಗಮಿಸಿದರು.
Governor of Karnataka Shri Vajubhai Vala and Chief Minister @BSYBJP receiving President Kovind on his arrival in Bengaluru on a four-day visit to Karnataka and Andhra Pradesh regarding events related to defence and education. pic.twitter.com/yUpH3nbTqe
— President of India (@rashtrapatibhvn) February 4, 2021
ರಾಜ್ಯಪಾಲ ವಜುಬಾಯಿ ವಾಲಾ ಹಾಗೂ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ನಗರದ ಹೆಚ್ ಎ ಎಲ್ ವಿಮಾನ ನಿಲ್ದಾಣದಲ್ಲಿ ರಾಷ್ಟ್ರಪತಿ ಅವರನ್ನು ಆತ್ಮೀಯವಾಗಿ ಬರಮಾಡಿಕೊಂಡರು.
ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಪಿ. ರವಿಕುಮಾರ್, ಪೊಲೀಸ್ ಮಹಾನಿರ್ದೇಶಕ ಹಾಗೂ ಮಹಾ ನಿರೀಕ್ಷಕ ಪ್ರವೀಣ್ ಸೂದ್ ಅವರೂ ಸೇರಿದಂತೆ ರಾಜ್ಯ ಸರ್ಕಾರದ ಹಿರಿಯ ಅಧಿಕಾರಿಗಳು ಈ ಸಂದರ್ಭದಲ್ಲಿ ಹಾಜರಿದ್ದರು.